ಸೂರ್ಯಕುಮಾರ್ ಯಾದವ್ ಆಟಕ್ಕೆ ಸಚಿನ್, ಬವುಮಾ ರೆಕಾರ್ಡ್ ನುಚ್ಚುನೂರು!
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯಕುಮಾರ್ ಯಾದವ್ ಸಚಿನ್ ಮತ್ತು ತೆಂಬಾ ಬವುಮಾ ಅವರ ದಾಖಲೆಗಳನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಒಂದು ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮುಂಬೈ ಇಂಡಿಯನ್ಸ್ ಆಟಗಾರ ಎಂಬ ದಾಖಲೆ ಬರೆದ ಸೂರ್ಯಕುಮಾರ್, ಸಚಿನ್ ದಾಖಲೆ ಮುರಿದಿದ್ದಾರೆ. ಸೂರ್ಯಕುಮಾರ್ ಈ ಐಪಿಎಲ್ ಋತುವಿನಲ್ಲಿ 14 ಪಂದ್ಯಗಳಲ್ಲಿ 71.11 ಸರಾಸರಿಯಲ್ಲಿ, 167.97 ಸ್ಟ್ರೈಕ್ ರೇಟ್‌ನಲ್ಲಿ 640 ರನ್ ಗಳಿಸಿದ್ದಾರೆ. 2010 ರಲ್ಲಿ ಸಚಿನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪರ 618 ರನ್ ಗಳಿಸಿದ್ದರು.
ಟಿ20 ಪಂದ್ಯಗಳಲ್ಲಿ ಸತತ 14ನೇ ಬಾರಿಗೆ 25ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಸೂರ್ಯಕುಮಾರ್ ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ 13 ಟಿ20 ಪಂದ್ಯಗಳಲ್ಲಿ ಸತತ 25ಕ್ಕೂ ಹೆಚ್ಚು ರನ್ ಗಳಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

