ಕೊಹ್ಲಿ ಕ್ವಾರಂಟೈನ್ ಅಂತ್ಯ, ವಮಿಕಾ ಪೋಟೋ ಶೇರ್ ಮಾಡಿ ಸಂತಸ ಹಂಚಿಕೊಂಡ ಅನುಷ್ಕಾ!
ವಿರಾಟ್ ಕೊಹ್ಲಿ ಕ್ವಾರಂಟೈನ್ ಅಂತ್ಯ, ಪತ್ನಿ ಮಗಳೊಂದಿಗೆ ಕೊಹ್ಲಿ ಪುತ್ರಿ ವಮಿಕಾ ಫೋಟೋ ಶೇರ್ ಮಾಡಿದ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಫೋಟೋ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬ್ಯುಸಿಯಾಗಿದ್ದಾರೆ. ಐಪಿಎಲ್ ಟೂರ್ನಿ ಮುಗಿಸಿದರೂ ಕೊಹ್ಲಿ ಕ್ವಾರಂಟೈನ್ ಮುಗಿದಿರಲಿಲ್ಲ. ಹೀಗಾಗಿ ಪತ್ನಿ ಹಾಗೂ ಪುತ್ರಿಯಿಂದ ದೂರ ಉಳಿದಿದ್ದರು. ಇದೀಗ ಕೊಹ್ಲಿ ಕ್ವಾರಂಟೈನ್ ಅಂತ್ಯಗೊಂಡಿದೆ. ಇದೇ ವೇಳೆ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಫೋಟೋ ಹಂಚಿಕೊಂಡು ಸಂತಸ ಇಮ್ಮಡಿಗೊಳಿಸಿದ್ದಾರೆ.
ಎಲಿಮಿನೇಟರ್ ಪಂದ್ಯದಲ್ಲಿ ಕೊಹ್ಲಿ ನಾಯಕತ್ವದ ಆರ್‌ಸಿಬಿ ಮುಗ್ಗರಿಸಿತ್ತು. ಸೋಲಿನ ಬಳಿಕ ಕೊಹ್ಲಿ ಟೀಂ ಇಂಡಿಯಾ ಕ್ಯಾಂಪ್ ಸೇರಿಕೊಂಡರು. ಆದರೆ ಪತ್ನಿ ಅನುಷ್ಕಾ ಶರ್ಮಾಹಾಗೂ ಪುತ್ರಿ ವಮಿಕಾ ಭೇಟಿಯಾಗಲಿಲ್ಲ. 7 ದಿನ ಕ್ವಾರಂಟೈನ್‌ನಲ್ಲಿದ್ದ ಕೊಹ್ಲಿ ಪುತ್ರಿ ವಮಿಕಾ ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೊತೆಗಿದ್ದಾರೆ.
kohli anushka vamika
ಪುತ್ರಿ ವಮಿಕಾ ಜೊತೆ ಕಾಲಕಳೆಯುತ್ತಿರುವ ಕೊಹ್ಲಿ ಫೋಟೋವನ್ನು ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಪುತ್ರಿ ಜೊತೆ ಆಟವಾಡುತ್ತಿರುವ ಕೊಹ್ಲಿಗೆ ಅಭಿಮಾನಿಗಳು ಶುಭಕೋರಿದ್ದಾರೆ.
ಟೆಸ್ಟ್ ಸರಣಿಗಾಗಿ ಕೊಹ್ಲಿ ಕುಟುಂಬ ಸಮೇತ ಇಂಗ್ಲೆಂಡ್‌ಗೆ ತೆರಳಿದ್ದರು. ಸರಣಿ ಬಳಿಕ ನೇರವಾಗಿ ದುಬೈಗೆ ಬಂದಿಳಿದ ಕೊಹ್ಲಿ ಕುಟಂಬ ಐಪಿಎಲ್ ಟೂರ್ನಿಯಲ್ಲಿ ಬ್ಯುಸಿಯಾಯಿತು. ಇದರ ನಡುವೆ ಅನುಷ್ಕಾ ಪುತ್ರಿಯೊಂದಿಗೆ ತವರಿಗೆ ವಾಪಾಸ್ಸಾಗಿದ್ದರು. ಮತ್ತೆ ಟಿ20 ವಿಶ್ವಕಪ್ ಟೂರ್ನಿಗಾಗಿ ಅನುಷ್ಕಾ ಶರ್ಮಾ ದುಬೈಗೆ ಬಂದಿಳಿದಿದ್ದರು.
ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಇದುವರೆಗೂ ವಮಿಕಾ ಮುಖದ ಫೋಟೋ ರಿವೀಲ್ ಮಾಡಿಲ್ಲ. ಈಗಲೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಫೋಟೋದಲ್ಲಿ ವಮಿಕಾ ಮುಖ ಕಾಣುತ್ತಿಲ್ಲ. ಈ ಹಿಂದಿನಂತೆ ರಹಸ್ಯ ಉಳಿಸಿಕೊಂಡೇ ಫೋಟೋ ಶೇರ್ ಮಾಡಿದ್ದಾರೆ.
ಇತ್ತ ಐಪಿಎಲ್ ಟೂರ್ನಿ ಮುಗಿಸಿದ ಕೊಹ್ಲಿ ಕ್ವಾರಂಟೈನ್‌ಲ್ಲಿದ್ದರು. ಹೀಗಾಗಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭೇಟಿಯಾಗಿರಲಿಲ್ಲ. ಕ್ವಾರಂಟೈನ್ ಮುಗಿಸಿದ ಕೊಹ್ಲಿ ಮತ್ತೆ ಜೊತೆಯಾಗಿದ್ದಾರೆ. ಕೊಹ್ಲಿ ಸದ್ಯ ಅಭ್ಯಾಸ ಪಂದ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯದ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ದ ಅಭ್ಯಾಸ ಪಂದ್ಯ ಆಡಲಿದೆ.
ಅಕ್ಟೋಬರ್ 24 ರಂದು ಟೀಂ ಇಂಡಿಯಾ ಬದ್ಧವೈರಿ ಪಾಕಿಸ್ತಾನ ವಿರುದ್ಧ ಹೋರಾಟ ನಡೆಸಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ರೋಚಕ ಹೋರಾಟಕ್ಕೆ ಕೌಂಟ್‌ಡೌನ್ ಆರಂಭಗೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.