- Home
- Sports
- Cricket
- T20 World Cup 2024: ಆಫ್ಘಾನ್ ಎದುರಿನ ಮಹತ್ವದ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ; 2 ಮೇಜರ್ ಚೇಂಜ್?
T20 World Cup 2024: ಆಫ್ಘಾನ್ ಎದುರಿನ ಮಹತ್ವದ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ; 2 ಮೇಜರ್ ಚೇಂಜ್?
ಕಿಂಗ್ಸ್‌ಟನ್ ಓವಲ್: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸೂಪರ್ 8 ಹಂತದಲ್ಲಿ ಮೊದಲ ಪಂದ್ಯವನ್ನಾಡಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಸಂಭಾವ್ಯ ತಂಡ ಪ್ರಕಟವಾಗಿದ್ದು, ಎರಡು ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

1. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಗ್ರೂಪ್ ಹಂತದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಆದರೆ, ಸೂಪರ್ 8 ಹಂತದಲ್ಲಿ ದೊಡ್ಡ ಮೊತ್ತ ಸಿಡಿಸಿ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದಾರೆ.
2. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಕಳೆದ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ. ಹಿಟ್‌ಮ್ಯಾನ್ ಸಿಡಿದರೆ, ಆಫ್ಘಾನ್‌ಗೆ ಉಳಿಗಾಲವಿಲ್ಲ.
3. ರಿಷಭ್ ಪಂತ್:
ಗ್ರೂಪ್ ಹಂತದಲ್ಲಿ ಟೀಂ ಇಂಡಿಯಾ ಪರ ಜವಾಬ್ದಾರಿಯುತ ಬ್ಯಾಟಿಂಗ್ ತೋರಿದ ಆಟಗಾರನೆಂದರೆ ಅದು ರಿಷಭ್ ಪಂತ್. ಮೂರನೇ ಕ್ರಮಾಂಕದಲ್ಲಿ ಪಂತ್ ಮತ್ತೊಮ್ಮೆ ಅಬ್ಬರಿಸುವ ವಿಶ್ವಾಸದಲ್ಲಿದ್ದಾರೆ.
4. ಸೂರ್ಯಕುಮಾರ್ ಯಾದವ್:
ವಿಶ್ವ ನಂ.1 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಯುಎಸ್‌ಎ ಎದುರು ಆಕರ್ಷಕ ಅರ್ಧಶತಕ ಸಿಡಿಸಿ ಫಾರ್ಮ್ ಕಂಡುಕೊಂಡಿದ್ದಾರೆ. ಸೂರ್ಯ ಫಾರ್ಮ್‌ಗೆ ಬಂದರೆ ಎಷ್ಟು ಡೇಂಜರಸ್ ಬ್ಯಾಟರ್ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
5. ಸಂಜು ಸ್ಯಾಮ್ಸನ್:
ಗ್ರೂಪ್ ಹಂತದಲ್ಲಿ ಶಿವಂ ದುಬೆಗೆ ಅವಕಾಶ ನೀಡಲಾಗಿತ್ತು. ಯುಎಸ್‌ಎ ಎದುರಿನ ಪಂದ್ಯ ಹೊರತುಪಡಿಸಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ದುಬೆ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.
6. ಹಾರ್ದಿಕ್ ಪಾಂಡ್ಯ:
ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಮಾರಕ ದಾಳಿ ನಡೆಸಿ ಆಸರೆಯಾಗುತ್ತಿದ್ದಾರೆ. ಪಾಂಡ್ಯ ಬ್ಯಾಟಿಂಗ್‌ನಲ್ಲಿ ಉತ್ತಮ ಫಿನಿಶರ್ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.
7. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಗ್ರೂಪ್ ಹಂತದಲ್ಲಿ ಶೂನ್ಯ ಸಾಧನೆ ಮಾಡಿದ್ದಾರೆ. ಹೀಗಿದ್ದೂ ಜಡ್ಡುಗೆ ಮತ್ತೊಮ್ಮೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ.
8. ಅಕ್ಷರ್ ಪಟೇಲ್:
ಒಂದು ಕಡೆ ಜಡೇಜಾ ವೈಪಲ್ಯ ಅನುಭವಿಸಿದರೂ ಮತ್ತೊಂದು ತುದಿಯಲ್ಲಿ ಅಕ್ಷರ್ ಪಟೇಲ್ ಸಿಕ್ಕ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಳ್ಳುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.
9. ಕುಲ್ದೀಪ್ ಯಾದವ್:
ವೆಸ್ಟ್ ಇಂಡೀಸ್‌ನಲ್ಲಿ ಸ್ಪಿನ್ ಸ್ನೇಹಿ ಪಿಚ್ ಇರುವುದರಿಂದ ತಜ್ಞ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಹೀಗಾದಲ್ಲಿ ಬಹುತೇಕ ಸಿರಾಜ್ ತಮ್ಮ ಸ್ಥಾನ ಬಿಟ್ಟುಕೊಡಬೇಕಾಗಿ ಬರಬಹುದು.
10. ಆರ್ಶದೀಪ್ ಸಿಂಗ್:
ಟೀಂ ಇಂಡಿಯಾ ಎಡಗೈ ವೇಗಿ ಆರ್ಶದೀಪ್ ಸಿಂಗ್, ಮಾರಕ ದಾಳಿ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದು, ಆರಂಭದಲ್ಲೇ ವಿಕೆಟ್ ಕಬಳಿಸಿ ತಂಡಕ್ಕೆ ನೆರವಾಗುತ್ತಿದ್ದಾರೆ
11. ಜಸ್ಪ್ರೀತ್ ಬುಮ್ರಾ:
ಟೀಂ ಇಂಡಿಯಾದ ವೇಗದ ದಾಳಿಯನ್ನು ಮುನ್ನಡೆಸುತ್ತಿರುವ ಬುಮ್ರಾ, ಮತ್ತೊಮ್ಮೆ ಎದುರಾಳಿ ಬ್ಯಾಟರ್‌ಗಳನ್ನು ಕಾಡಲು ರೆಡಿಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.