ಪಾಕಿಸ್ತಾನ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ; ಒಂದು ಮೇಜರ್ ಚೇಂಜ್?
ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡಲು ವೇದಿಕೆ ಸಜ್ಜಾಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

1. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಐರ್ಲೆಂಡ್ ಎದುರು ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ ಪಾಕ್ ಎದುರು ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಕೊಹ್ಲಿ, ಮತ್ತೆ ಅಬ್ಬರಿಸಲು ರೆಡಿಯಾಗಿದ್ದಾರೆ.
2. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇದೀಗ ಮತ್ತೊಮ್ಮೆ ಅದೇ ಲಯ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ ಹಿಟ್‌ಮ್ಯಾನ್
3. ರಿಷಭ್ ಪಂತ್:
ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಳೆದ ಪಂದ್ಯದಲ್ಲಿ ಅಜೇಯ ಬ್ಯಾಟಿಂಗ್ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಪಂತ್ ಪ್ರದರ್ಶನದ ಮೇಲೆ ಎಲ್ಲರ ನಿಗಾ ಇದೆ.
4. ಸೂರ್ಯಕುಮಾರ್ ಯಾದವ್:
ಅಪಾಯಕಾರಿ ಬ್ಯಾಟರ್ ಸೂರ್ಯಕುಮಾರ್ ಯಾದವ್, ಕಳೆದ ಪಂದ್ಯದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಸೂರ್ಯ ಇಂದು ಜವಾಬ್ದಾರಿಯುತ ಆಟವಾಡಬೇಕಿದೆ.
5. ಹಾರ್ದಿಕ್ ಪಾಂಡ್ಯ:
ಕಳೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಮುಖ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಬ್ಯಾಟಿಂಗ್‌ನಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ವಿಶ್ವಾಸದಲ್ಲಿದ್ದಾರೆ ಪಾಂಡ್ಯ.
6. ಶಿವಂ ದುಬೆ:
ನೀಳಕಾಯದ ಹಾರ್ಡ್ ಹಿಟ್ಟರ್ ಶಿವಂ ದುಬೆ, ಐಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿದ್ದರು. ಇದೀಗ ಪಾಕ್ ಎದುರು ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
7. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಜಡೇಜಾ ಕಳೆದ ಪಂದ್ಯದಲ್ಲಿ ಕೇವಲ ಒಂದು ಓವರ್ ಅಷ್ಟೇ ಬೌಲಿಂಗ್ ಮಾಡಿದ್ದರು. ಇಂದು ಜಡ್ಡು ತಮ್ಮ ಆಲ್ರೌಂಡ್ ಕೌಶಲ್ಯ ಅನಾವರಣ ಮಾಡಲು ರೆಡಿಯಾಗಿದ್ದಾರೆ.
8. ಕುಲ್ದೀಪ್ ಯಾದವ್:
ಮಹತ್ವದ ಪಂದ್ಯಕ್ಕೆ ಇಂದು ಅಕ್ಷರ್ ಪಟೇಲ್ ಬದಲಿಗೆ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್, ಪಾಕ್ ಬ್ಯಾಟರ್‌ಗಳನ್ನು ಕಾಡಲು ರೆಡಿಯಾಗಿದ್ದಾರೆ.
9. ಮೊಹಮ್ಮದ್ ಸಿರಾಜ್:
ವೇಗಿ ಸಿರಾಜ್ ಕಳೆದ ಪಂದ್ಯದಲ್ಲಿ 3 ಓವರ್ ಬೌಲಿಂಗ್ ಮಾಡಿ ಕೇವಲ 13 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಸಿರಾಜ್, ಇದೀಗ ಪಾಕ್ ಎದುರು ಮಿಂಚಿನ ದಾಳಿ ನಡೆಸಲು ಸಜ್ಜಾಗಿದ್ದಾರೆ.
10. ಜಸ್ಪ್ರೀತ್ ಬುಮ್ರಾ:
ಟೀಂ ಇಂಡಿಯಾ ಮಾರಕ ವೇಗಿ ಬುಮ್ರಾ ಎಷ್ಟು ಅಪಾಯಕಾರಿ ಬೌಲರ್ ಎನ್ನುವುದು ಜಗತ್ತಿಗೆ ಗೊತ್ತು. ಕಳೆದ ಪಂದ್ಯದಲ್ಲಿ ಬುಮ್ರಾ 3 ಓವರ್ ಬೌಲಿಂಗ್ ಮಾಡಿ ಒಂದು ಮೇಡನ್ ಓವರ್ ಸಹಿತ ಕೇವಲ 6 ರನ್ ನೀಡಿ 2 ವಿಕೆಟ್ ಪಡೆದಿದ್ದರು.
11. ಆರ್ಶದೀಪ್ ಸಿಂಗ್
ಎಡಗೈ ವೇಗಿ ಆರ್ಶದೀಪ್ ಸಿಂಗ್ ಕಳೆದ ಪಂದ್ಯದಲ್ಲಿ ಕೊಂಚ ದುಬಾರಿಯಾದರೂ 2 ವಿಕೆಟ್ ಉರುಳಿಸಿದ್ದರು. ಪಾಕ್ ಎದುರು ಆರ್ಶದೀಪ್ ಸಿಂಗ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.