ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್; ಸ್ಟಾರ್ ಆಟಗಾರ ಔಟ್..!
ನವದೆಹಲಿ: ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ತವರಿನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿದೆ.ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರುವ ನಿಟ್ಟಿನಲ್ಲಿ ಈ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಯಾರು ಆ ಕ್ರಿಕೆಟಿಗ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಫೆಬ್ರವರಿ 05ರಿಂದ ಇಂಗ್ಲೆಂಡ್ ವಿರುದ್ದ ಭಾರತದಲ್ಲಿ ನಡೆಯಲಿರುವ 4 ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

ಆಲ್ರೌಂಡರ್ ರವೀಂದ್ರ ಜಡೇಜಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಗಾಯಕ್ಕೆ ತುತ್ತಾಗಿದ್ದು, ಇದೀಗ ಇಂಗ್ಲೆಂಡ್ ವಿರುದ್ದದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

ಆಸ್ಪ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ 3ನೇ ಪಂದ್ಯದ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ರವೀಂದ್ರ ಜಡೇಜಾ ಎಡಗೈ ಹೆಬ್ಬೆರಳು ಮುರಿದುಕೊಂಡಿದ್ದರು. ಬಳಿಕ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.

ಆರಂಭದಲ್ಲಿ ಗಾಯದ ತೀವ್ರತೆಯನ್ನು ಗಮನಿಸಿ ಆರಂಭದಲ್ಲಿ ರವೀಂದ್ರ ಜಡೇಜಾಗೆ ಇಂಗ್ಲೆಂಡ್ ವಿರುದ್ದದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿತ್ತು.

ರವೀಂದ್ರ ಜಡೇಜಾ ಗಾಯದಿಂದ ಚೇತರಿಸಿಕೊಳ್ಳಲು 6 ವಾರಗಳ ಅಗತ್ಯವಿದೆ ಎಂದು ಹೇಳಲಾಗಿದೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಜಡೇಜಾ ಲಭ್ಯರಾಗುತ್ತಾರೋ, ಇಲ್ಲವೋ ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ.

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಗೆ ಬಂದು ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳುವ ಮೂಲಕ ಫಿಟ್ನೆಸ್ ಪರೀಕ್ಷೆ ಪಾಸ್ ಮಾಡಿದರೆ ಮಾತ್ರ ಸೀಮಿತ ಓವರ್‌ಗಳ ಸರಣಿಗೆ ರವೀಂದ್ರ ಜಡೇಜಾ ತಂಡ ಕೂಡಿಕೊಳ್ಳಬಹುದಾಗಿದೆ.

ಇಂಗ್ಲೆಂಡ್ ತಂಡವು ಮೊದಲಿಗೆ 4 ಪಂದ್ಯಗಳ ಟೆಸ್ಟ್ ಸರಣಿ, 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ.