MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • Virat Kohli ಕಳಪೆ ಫಾರ್ಮ್‌ ಬಗ್ಗೆ ಮತ್ತೆ ತುಟಿ ಬಿಚ್ಚಿದ ನಾಯಕ ರೋಹಿತ್ ಶರ್ಮಾ..!

Virat Kohli ಕಳಪೆ ಫಾರ್ಮ್‌ ಬಗ್ಗೆ ಮತ್ತೆ ತುಟಿ ಬಿಚ್ಚಿದ ನಾಯಕ ರೋಹಿತ್ ಶರ್ಮಾ..!

ನಾಟಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 17 ರನ್‌ಗಳ ರೋಚಕ ಸೋಲು ಅನುಭವಿಸಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲೂ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಮುಂದುವರೆದಿದೆ. ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿ ಫಾರ್ಮ್‌ ಕುರಿತಂತೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತುಟಿ ಬಿಚ್ಚಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 

2 Min read
Author : Naveen Kodase
Published : Jul 11 2022, 10:38 AM IST
Share this Photo Gallery
  • FB
  • TW
  • Linkdin
  • Whatsapp
18

ಭಾರತ ಹಾಗೂ ಇಂಗ್ಲೆಂಡ್ ನಡುವೆ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬಾರಿಸಿದ ಕೆಚ್ಚೆದೆಯ ಶತಕದ ಹೊರತಾಗಿಯೂ ಟೀಂ ಇಂಡಿಯಾ 17 ರನ್‌ಗಳ ಅಂತರದ ರೋಚಕ ಸೋಲು ಅನುಭವಿಸಿದೆ.
 

28

ಬೌಲರ್‌ಗಳು ಹಾಗೂ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಇಂಗ್ಲೆಂಡ್ ಎದುರು ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡುವ ಅವಕಾಶವನ್ನು ರೋಹಿತ್ ಶರ್ಮಾ ಪಡೆ ಕೈಚೆಲ್ಲಿದೆ. 216 ರನ್‌ಗಳ ಗುರಿ ಬೆನ್ನತ್ತಿದ ಭಾರತ 198 ರನ್ ಗಳಿಸಲಷ್ಟೇ ಶಕ್ತವಾಯಿತು.

38
Image credit: Getty

Image credit: Getty

ಇನ್ನು ಕಳೆದ ಮೂರು ವರ್ಷಗಳಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ವಿಫಲವಾಗುತ್ತಾ ಬಂದಿರುವ ವಿರಾಟ್ ಕೊಹ್ಲಿ, ಇದೀಗ ಇಂಗ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಒಂದು ರನ್ ಹಾಗೂ ಮೂರನೇ ಟಿ20 ಪಂದ್ಯದಲ್ಲಿ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ.
 

48

ವಿರಾಟ್ ಕೊಹ್ಲಿಯ ದಯನೀಯ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕ್ರಿಕೆಟ್‌ ಪಂಡಿತರು ಕಟು ಟೀಕೆಗಳನ್ನು ಮಾಡಲಾರಂಭಿಸಿದ್ದಾರೆ. ಕಪಿಲ್ ದೇವ್, ಅಜಯ್ ಜಡೇಜಾ ಸೇರಿದಂತೆ ಹಲವು ಕ್ರಿಕೆಟಿಗರು ಕೊಹ್ಲಿ ಪ್ರದರ್ಶನದ ಬಗ್ಗೆ ಕಿಡಿ ಕಾರಿದ್ದಾರೆ.
 

58
Kohli Rohit

Kohli Rohit

ಇದೆಲ್ಲದರ ನಡುವೆ, ಮೂರನೇ ಟಿ20 ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಪರ ಬ್ಯಾಟ್ ಬೀಸಿದ್ದಾರೆ. ಕೊಹ್ಲಿ ಸಾಮರ್ಥ್ಯದ ಬಗ್ಗೆ ತಮಗೆ ವಿಶ್ವಾಸವಿದೆ ಎಂದು ಹಿಟ್‌ಮ್ಯಾನ್ ಹೇಳಿದ್ದಾರೆ.

68
<p>Virat Kohli Rohit Sharma</p>

<p>Virat Kohli Rohit Sharma</p>

ನಾವು ವಿರಾಟ್ ಕೊಹ್ಲಿ ಜತೆಗಿದ್ದೇವೆ. ಅವರು ದೀರ್ಘಕಾಲದಿಂದಲೂ ಸ್ಥಿರ ಪ್ರದರ್ಶನ ತೋರಿದ್ದಾರೆ. ಎಲ್ಲರೂ ಒಂದೆರಡು ಪಂದ್ಯ ಅಥವಾ ಒಂದೆರಡು ಸರಣಿಯಲ್ಲಿ ಕೆಟ್ಟ ಪ್ರದರ್ಶನ ತೋರುತ್ತಾರೆ. ನಮಗೆ ವಿರಾಟ್ ಕೊಹ್ಲಿಯವರ ಸಾಮರ್ಥ್ಯದ ಬಗ್ಗೆ ವಿಶ್ವಾಸವಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

78

ಆಟಗಾರರ ಸ್ಥಾನದ ಕುರಿತಂತೆ ಯಾವ ತಜ್ಞರು ಹೀಗೆಲ್ಲಾ ಮಾತನಾಡುತ್ತಾರೋ ನನಗಂತೂ ಗೊತ್ತಿಲ್ಲ. ನಾವು ಆಟಗಾರರ ಸಾಮರ್ಥ್ಯವನ್ನು ನೋಡಿಯೇ ಅವರನ್ನು ಬೆಂಬಲಿಸುತ್ತೇವೆ. ಒಂದು ದಶಕದವರೆಗೂ ಅದ್ಭುತ ಪ್ರದರ್ಶನ ತೋರಿದ ಆಟಗಾರನ ಬಗ್ಗೆ ಕೆಲ ವರ್ಷದಲ್ಲಿನ ಪ್ರದರ್ಶನ ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಬಾರದು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 

88
<p>Virat Kohli Rohit Sharma</p>

<p>Virat Kohli Rohit Sharma</p>

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ ಮುಕ್ತಾಯವಾದ ಬೆನ್ನಲ್ಲೇ ಇದೀಗ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 12ರಿಂದ ಆರಂಭವಾಗಲಿದೆ. ಏಕದಿನ ಸರಣಿಯಲ್ಲಾದರೂ ವಿರಾಟ್ ಕೊಹ್ಲಿ, ಫಾರ್ಮ್‌ಗೆ ಮರಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ

Latest Videos
Recommended Stories
Recommended image1
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
Recommended image2
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
Recommended image3
ಟಿ20 ವಿಶ್ವಕಪ್‌ನಲ್ಲಿ ಈ 2 ತಂಡಗಳೇ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ! ಅಚ್ಚರಿ ಭವಿಷ್ಯ ನುಡಿದ ಪಾಕ್ ದಿಗ್ಗಜ ಕ್ರಿಕೆಟಿಗ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved