ಪಂದ್ಯದ ಮಹತ್ವದ ಘಟ್ಟದಲ್ಲಿ ವಿರಾಟ್‌ ಕೊಹ್ಲಿ ಮೈದಾನ ತೊರೆದಿದ್ದೇಕೆ..?

First Published Mar 19, 2021, 3:10 PM IST

ಅಹಮದಾಬಾದ್‌: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಟಿ20 ಸರಣಿ ರೋಚಕ ಘಟ್ಟ ತಲುಪಿದ್ದು, 4ನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 8 ರನ್‌ಗಳ ರೋಚಕ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ. 
ಇಂಗ್ಲೆಂಡ್‌ ವಿರುದ್ದ 4ನೇ ಟಿ20 ಪಂದ್ಯದ ಕೊನೆಯ ನಾಲ್ಕು ಓವರ್‌ಗಳು ಬಾಕಿ ಇದ್ದಾಗ ಪಂದ್ಯ ರೋಚಕ ಹಂತ ತಲುಪಿತ್ತು. ಇಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮೈದಾನ ತೊರೆದಿದ್ದರು. ಇದು ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲಗಳನ್ನುಂಟು ಮಾಡಿತ್ತು. ಅಷ್ಟಕ್ಕೂ ಕೊಹ್ಲಿ ಮೈದಾನ ತೊರೆದಿದ್ದೇಕೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.