ಟೀಂ ಇಂಡಿಯಾಗೆ ಸಿಕ್ತು ಗುಡ್‌ ನ್ಯೂಸ್‌; ರೋಹಿತ್ ಫಿಟ್ನೆಸ್ ಪರೀಕ್ಷೆ ಪಾಸ್..!

First Published Dec 11, 2020, 1:40 PM IST

ಬೆಂಗಳೂರು: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಫಿಟ್ನೆಸ್ ಪರೀಕ್ಷೆಯನ್ನು ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ರೋಹಿತ್ ಕೊನೆಗೂ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಡಮಿ(ಎನ್‌ಸಿಎ)ಯಲ್ಲಿ ಫಿಟ್ನೆಸ್ ಪರೀಕ್ಷೆ ಪಾಸ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ರೋಹಿತ್ ಶರ್ಮಾ ಫಿಟ್ನೆಸ್ ಪರೀಕ್ಷೆ ಪಾಸಾದ ಬೆನ್ನಲ್ಲೇ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯಾಡಲು ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಇಂಜುರಿಯಿಂದ ಫಿಟ್ನೆಸ್ ಪರೀಕ್ಷೆ ಪಾಸ್‌ವರೆಗಿನ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ.

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.

ಇದಾದ ಬಳಿಕ ಕೆಲ ಪಂದ್ಯಗಳ ಮಟ್ಟಿಗೆ ವಿಶ್ರಾಂತಿ ಪಡೆದು ಮೊದಲ ಕ್ವಾಲಿಫೈಯರ್ ಹಾಗೂ ಫೈನಲ್‌ ಪಂದ್ಯವನ್ನಾಡುವುದರ ಮೂಲಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದರು.

ಇದೆಲ್ಲದರ ಹೊರತಾಗಿಯೂ ರೋಹಿತ್ ಶರ್ಮಾ ಫಿಟ್ನೆಸ್ ಸಮಸ್ಯೆ ಎದುರಿಸಿದ್ದರಿಂದ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ದ ಸೀಮಿತ ಓವರ್‌ ಕ್ರಿಕೆಟ್‌ ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು.

ಬಳಿಕ ಸಂಪೂರ್ಣ ಫಿಟ್ನೆಸ್ ಸಾಧಿಸುವ ಉದ್ದೇಶದಿಂದ ರೋಹಿತ್ ಶರ್ಮಾ ನವೆಂಬರ್ 19ರಂದು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್‌ ಅಕಡಮಿಗೆ ಬಂದಿಳಿದು, ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಹೀಗಿದ್ದೂ ರೋಹಿತ್ ಶರ್ಮಾಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ನಿಗದಿತ ಸಮಯದಲ್ಲಿ ಹಿಟ್‌ಮ್ಯಾನ್ ಫಿಟ್ನೆಸ್ ಪರೀಕ್ಷೆ ಪಾಸಾಗದ ಹಿನ್ನೆಲೆಯಲ್ಲಿ ಮೊದಲೆರಡು ಟೆಸ್ಟ್‌ ಪಂದ್ಯಗಳಿಂದ ಹೊರಬಿದ್ದಿದ್ದರು.

ಇದೀಗ ಇಂದು(ಡಿ.11) ಮತ್ತೆ ಎನ್‌ಸಿಎದಲ್ಲಿ ನಡೆದ ಪಿಟ್ನೆಸ್ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ ಸಂಪೂರ್ಣ ಫಿಟ್‌ ಆಗಿರುವುದನ್ನು ಸಾಬೀತು ಪಡಿಸಿದ್ದಾರೆ.

ರೋಹಿತ್ ಶರ್ಮಾ ಸಂಪೂರ್ಣ ಫಿಟ್‌ ಆಗಿದ್ದು, ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಬಿಟ್ಟಿದ್ದು ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ ಎಂದು ಎಎನ್‌ಐ ವೆಬ್‌ಸೈಟ್ ವರದಿ ಮಾಡಿದೆ.

ಮುಂಬರುವ 24 ಗಂಟೆಗಳೊಳಗಾಗಿ ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದರು, ಅಲ್ಲಿ 14 ದಿನಗಳ ಕಾಲ ಕಡ್ಡಾಯವಾಗಿ ಐಸೋಲೇಷನ್‌ಗೆ ಒಳಗಾಗಬೇಕಾಗಿದೆ.

ಹೀಗಾಗಿ ರೋಹಿತ್ ಶರ್ಮಾ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದು, ಜನವರಿ 07ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್‌ ಪಂದ್ಯದ ವೇಳೆಗೆ ಟೀಂ ಇಂಡಿಯಾ ಕೂಡಿಕೊಳ್ಳುವ ಸಾಧ್ಯತೆಯಿದೆ.

ವಿರಾಟ್ ಕೊಹ್ಲಿ ಮೊದಲ ಟೆಸ್ಟ್‌ ಪಂದ್ಯದ ಬಳಿಕ ತವರಿಗೆ ಮರಳಲಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ತಂಡ ಕೂಡಿಕೊಳ್ಳುತ್ತಿರುವುದು ಟೀಂ ಇಂಡಿಯಾ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?