Ind vs WI ವಿಂಡೀಸ್ ಎದುರಿನ ಗೆಲುವಿನ ಬೆನ್ನಲ್ಲೇ ಬೇಸರ ಹೊರಹಾಕಿದ ಶ್ರೇಯಸ್ ಅಯ್ಯರ್..!
ಪೋರ್ಟ್ ಆಫ್ ಸ್ಪೇನ್: ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ 2-0 ಅಂತರದಲ್ಲಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಶ್ರೇಯಸ್ ಅಯ್ಯರ್, ಗೆಲುವಿನ ಬೆನ್ನಲ್ಲೇ ಬೇಸರ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಇಲ್ಲಿನ ಕ್ವೀನ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 311 ರನ್ ಕಲೆಹಾಕುವ ಮೂಲಕ ಟೀಂ ಇಂಡಿಯಾಗೆ ಸವಾಲಿನ ಗುರಿ ನೀಡಿತ್ತು.
ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಒಂದು ಹಂತದಲ್ಲಿ 79 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್(63), ಸಂಜು ಸ್ಯಾಮ್ಸನ್ (54) ಹಾಗೂ ಅಕ್ಷರ್ ಪಟೇಲ್ (64*) ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಇನ್ನೂ 2 ಎಸೆತಗಳು ಬಾಕಿ ಇರುವಂತೆಯೇ ಭಾರತ ಗೆಲುವಿನ ನಗೆ ಬೀರಿತು.
Image credit: PTI
ಇನ್ನು ಪಂದ್ಯ ಗೆಲುವಿನ ಹೊರತಾಗಿಯೂ ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬೇಸರವನ್ನು ಹೊರಹಾಕಿದ್ದಾರೆ. ತಾವು ಔಟಾದ ರೀತಿಯ ಕುರಿತಂತೆ ಅಯ್ಯರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ನಾನು ವಿಂಡೀಸ್ ಎದುರು ಗಳಿಸಿದ ರನ್ ಬಗ್ಗೆ ಖುಷಿಯಿದೆ. ಆದರೆ ನಾನು ಔಟ್ ಆದ ರೀತಿಯ ಬಗ್ಗೆ ಬೇಸರವಿದೆ. ನಾನು ಸುಲಭವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತೇನೆ ಅಂದುಕೊಂಡಿದ್ದೆ. ಆದರೆ ವಿಕೆಟ್ ಕೈಚೆಲ್ಲಿದ್ದು ದುರಾದೃಷ್ಟಕರ. ಮುಂದಿನ ಪಂದ್ಯದಲ್ಲಿ ನಾನು ಶತಕ ಸಿಡಿಸುವ ವಿಶ್ವಾಸವಿದೆ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.
ವೆಸ್ಟ್ ಇಂಡೀಸ್ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 71 ಎಸೆತಗಳನ್ನು ಎದುರಿಸಿ 63 ರನ್‌ಗಳಿಸಿ ವಿಂಡೀಸ್ ವೇಗಿ ಅಲ್ಜೆರಿ ಜೋಸೆಫ್‌ಗೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು.
ಟೀಂ ಇಂಡಿಯಾ ಒಂದು ಹಂತದಲ್ಲಿ 79 ರನ್‌ಗಳಿಗೆ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಲ್ಕನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ 99 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು.
ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ಹಂಗಾಮಿ ಉಪನಾಯಕ ಶ್ರೇಯಸ್ ಅಯ್ಯರ್ ಸತತ ಎರಡು ಅರ್ಧಶತಕ ಬಾರಿಸಿ ಮಿಂಚಿದ್ದು, ಮೂರನೇ ಏಕದಿನ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ತೋರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.