- Home
- Sports
- Cricket
- ವೃಷಣಕ್ಕೆ ಪೆಟ್ಟು, ಹಠಾತ್ ಸರ್ಜರಿಗೊಳಗಾದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಕಿವೀಸ್ ಎದುರಿನ ಸರಣಿಯಿಂದ ಔಟ್
ವೃಷಣಕ್ಕೆ ಪೆಟ್ಟು, ಹಠಾತ್ ಸರ್ಜರಿಗೊಳಗಾದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಕಿವೀಸ್ ಎದುರಿನ ಸರಣಿಯಿಂದ ಔಟ್
ರಾಜ್‌ಕೋಟ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಭಾರತ ಕ್ರಿಕೆಟ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ಕ್ರಿಕೆಟಿಗ ಟೆಸ್ಟಿಕಲ್ಸ್‌ಗೆ ಗಾಯ ಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.

ಏಷ್ಯಾಕಪ್ ಗೆಲುವಿನ ಹೀರೋ ತಿಲಕ್ ವರ್ಮಾ
ಕಳೆದ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಪಾಕಿಸ್ತಾನ ಎದುರು ಕೆಚ್ಚೆದೆಯ ಹೋರಾಟ ನೀಡುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಿಲಕ್ ವರ್ಮಾ, ಇದೀಗ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬೀಳುವ ಭೀತಿಗೆ ಸಿಲುಕಿದ್ದಾರೆ.
ವಿಜಯ್ ಹಜಾರೆ ಟೂರ್ನಿ ಆಡುವ ವೇಳೆ ಗಾಯ
ಹೌದು, ಹೈದರಾಬಾದ್ ಮೂಲದ ಪ್ರತಿಭಾನ್ವಿತ ಕ್ರಿಕೆಟಿಗ ತಿಲಕ್ ವರ್ಮಾ ರಾಜ್‌ಕೋಟ್‌ನಲ್ಲಿ ಹೈದರಾಬಾದ್ ಪರ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ ತಿಲಕ್ ವರ್ಮಾಗೆ ಗಾಯವಾಗಿದೆ.
ತಿಲಕ್ ವರ್ಮಾ ವೃಷಣದಲ್ಲಿ ನೋವು
ಜನವರಿ 06ರಂದು ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಹೈದರಾಬಾದ್ ಹಾಗೂ ಬಂಗಾಳ ತಂಡಗಳು ಮುಖಾಮುಖಿಯಾಗಿದ್ದವು. ಹೈದರಾಬಾದ್ ನಾಯಕ ತಿಲಕ್ ವರ್ಮಾ 45 ಎಸೆತಗಳನ್ನು ಎದುರಿಸಿ 34 ರನ್ ಗಳಿಸಿದ್ದರು. ಇದಾದ ಮರುದಿನ ತಿಲಕ್ ಅವರ ವೃಷಣದಲ್ಲಿ ನೋವು ಕಾಣಿಸಿಕೊಂಡಿದೆ.
ಸರ್ಜರಿಗೆ ಸಲಹೆ
ಹೊಟ್ಟೆ ನೋವು ಕಾಣಿಸಿಕೊಂಡ ನಂತರ, ತಿಲಕ್ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಸ್ಕ್ಯಾನಿಂಗ್‌ಗೆ ಒಳಗಾದರು. ಇದೀಗ ವೈದ್ಯರು ತಿಲಕ್ ವರ್ಮಾ ಅವರಿಗೆ ಸರ್ಜರಿ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ.
ಮುಂದಿನ ನಾಲ್ಕು ವಾರಗಳ ಕಾಲ ಕ್ರಿಕೆಟ್‌ನಿಂದ ಔಟ್
ಇದೀಗ ತಿಲಕ್ ವರ್ಮಾ ಸರ್ಜರಿಗೆ ಒಳಗಾದರೇ, ಮುಂದಿನ ನಾಲ್ಕು ವಾರಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಬೀಳುವ ಸಾಧ್ಯತೆಯಿದೆ. ಹೀಗಾದಲ್ಲಿ ಕಿವೀಸ್ ಎದುರಿನ ಐದು ಪಂದ್ಯಗಳ ಟಿ20 ಸರಣಿ ಜತೆಗೆ ಫೆಬ್ರವರಿ 07ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯಗಳಿಂದಲೂ ಹೊರಬೀಳುವ ಭೀತಿಗೆ ಸಿಲುಕಿದ್ದಾರೆ.
ತಿಲಕ್ ಸ್ಥಾನಕ್ಕೆ ಶ್ರೇಯಸ್ ಅಯ್ಯರ್‌ಗೆ ಸ್ಥಾನ?
ಇದೀಗ ನ್ಯೂಜಿಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್, ಶುಭ್‌ಮನ್ ಗಿಲ್ ಹಾಗೂ ದೇವದತ್ ಪಡಿಕ್ಕಲ್ ಸ್ಥಾನ ಪಡೆಯಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

