ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪತ್ನಿ ಹಸೀನಾ ಜಹಾನ್ ಡ್ಯಾನ್ಸ್ ವಿಡಿಯೋ ವೈರಲ್..!
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಹಾಗೂ ಪತ್ನಿ ಹಸೀನಾ ಜಹಾನ್ ಜಗಳ-ಜಟಾಪಟಿ ಈಗ ಗುಟ್ಟಾಗಿ ಏನು ಉಳಿದಿಲ್ಲ. ಕೆಲ ದಿನಗಳ ಹಿಂದಷ್ಟೇ ರೋಹಿತ್ ಶರ್ಮಾ ಅವರೊಂದಿಗೆ ಇನ್‌ಸ್ಟಾಗ್ರಾಂ ಚಾಟ್‌ನಲ್ಲಿ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಬಿಚ್ಚಿಟ್ಟಿದ್ದರು.ಕೌಟುಂಬಿಕ ಕಿರಿಕಿರಿಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ರೋಹಿತ್ ಬಳಿ ಶಮಿ ಆ ದಿನಗಳ ಕಹಿ ಘಟನೆಗಳನ್ನು ಹಂಚಿಕೊಂಡಿದ್ದರು. ಲಾಕ್‌ಡೌನ್ ಸಂದರ್ಭದಲ್ಲಿ ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ. ಹೀಗಿರುವಾಗಲೇ ಮೊಹಮ್ಮದ್ ಶಮಿ ಪತ್ನಿ ಹಸೀನಾ ಜಹಾನ್ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೋಹಿತ್ ಜತೆಗಿನ ಲೈವ್ ಚಾಟ್ ವೇಳೆ ಕೌಟುಂಬಿಕ ಕಿರಿಕಿರಿಯಿಂದಾಗಿ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ಶಮಿ ಬಾಯ್ಬಿಟ್ಟಿದ್ದರು.

ಕಳೆದ ಎರಡು ವರ್ಷಗಳಿಂದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಹಾಗೂ ಹಸೀನಾ ಜಹಾನ್ ನಡುವಿನ ಸಂಬಂಧ ಚನ್ನಾಗಿಲ್ಲ. ಶಮಿ ಮೇಲೆ ಹಸೀನಾ ಮ್ಯಾಚ್ ಫಿಕ್ಸಿಂಗ್, ಕೌಟುಂಬಿಕ ದೌರ್ಜನ್ಯ, ಬೇರೆ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದರು.

ಆದರೆ ಶಮಿ ಈ ವಿಚಾರದ ಕುರಿತಂತೆ ಎಲ್ಲಿಯೂ ತುಟಿ ಬಿಚ್ಚಿರಲಿಲ್ಲ. ಆದರೆ ರೋಹಿತ್ ಶರ್ಮಾ ಜತೆಗಿನ ಲೈವ್ ಚಾಟ್ ವೇಳೆ ಮೊದಲ ಬಾರಿಗೆ ಕಹಿ ಘಟನೆಯನ್ನು ಹಂಚಿಕೊಂಡಿದ್ದರು.

ಶಮಿ ಈ ವಿಚಾರವನ್ನು ಹಂಚಿಕೊಂಡ ಬೆನ್ನಲ್ಲೇ ಹಸೀನಾ ಜಹಾನ್ ಬಾಲಿವುಡ್ ಹಾಡುಗಳಿಗೆ ಸಿಕ್ಕಾಪಟ್ಟೆ ಸ್ಟೆಪ್ ಹಾಕಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ

2018ರಲ್ಲಿ ಶಮಿ ಅನ್ಯ ಮಹಿಳೆಯರೊಂದಿಗೆ ಚಾಟ್ ಮಾಡಿರುವ ಸ್ಕ್ರೀನ್ ಶಾಟ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಜಹಾನ್ ಹಂಚಿಕೊಂಡಿದ್ದರು.

ಹಸೀನಾ ಡ್ಯಾನ್ಸ್ ನೋಡಿದ ಜನರು ಶಮಿ ಜತೆ ಸಂಸಾರ ನಡೆಸಿ ಒಟ್ಟಿಗೆ ಬಾಳಿ ಎಂದು ಸಲಹೆ ನೀಡುತ್ತಿದ್ದಾರೆ. ಮತ್ತೆ ಕೆಲವರು ಗಂಡ-ಹೆಂಡತಿ ಜಗಳದಿಂದ ಕೂಸು ಬಡವಾಗುತ್ತಿದೆ ಎಂದು ಮರುಕ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.