ಕಿವೀಸ್ ಎದುರಿನ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ; ಯಾರಿಗೆಲ್ಲಾ ಸಿಗಲಿದೆ ಸ್ಥಾನ?
ರಾಂಚಿ(ಜ.27): ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಕಿವೀಸ್ ಎದುರು ಟಿ20 ಸರಣಿಗೆ ಸಜ್ಜಾಗುತ್ತಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದು, ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ. ಕಿವೀಸ್ ಎದುರಿನ ಮೊದಲ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

1. ಶುಭ್‌ಮನ್ ಗಿಲ್: 23 ವರ್ಷದ ಆರಂಭಿಕ ಬ್ಯಾಟರ್ ಗಿಲ್, ಕಿವೀಸ್ ಎದುರಿನ ಏಕದಿನ ಸರಣಿಯಲ್ಲಿ ಒಂದು ದ್ವಿಶತಕ ಹಾಗೂ ಒಂದು ಶತಕ ಸಿಡಿಸಿ ಮಿಂಚಿದ್ದು, ಇದೀಗ ಅದೇ ಲಯವನ್ನು ಟಿ20 ಸರಣಿಯಲ್ಲಿ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
2. ಇಶಾನ್ ಕಿಶನ್: ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್, ಬ್ಯಾಟಿಂಗ್ ಜತೆಗೆ ವಿಕೆಟ್ ಕೀಪಿಂಗ್ ಕೂಡಾ ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದು, ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿಕೊಡುವ ಕ್ಷಮತೆ ಹೊಂದಿದ್ದಾರೆ.
3. ಸೂರ್ಯಕುಮಾರ್ ಯಾದವ್: ಲಂಕಾ ಎದುರಿನ ಕೊನೆಯ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದ ಸೂರ್ಯಕುಮಾರ್ ಯಾದವ್, ಇದೀಗ ಕಿವೀಸ್ ಮೇಲೂ ಸವಾರಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
4. ರಾಹುಲ್ ತ್ರಿಪಾಠಿ: ಬಲಗೈ ಬ್ಯಾಟರ್ ಲಂಕಾ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಆದರೆ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಇನ್ನು 3ನೇ ಟಿ20 ಪಂದ್ಯದಲ್ಲಿ 16 ಎಸೆತಗಳಲ್ಲಿ 35 ರನ್ ಚಚ್ಚಿದ್ದರು. ಇದೀಗ ಕಿವೀಸ್ ಎದುರು ಮಿಂಚುವ ನಿರೀಕ್ಷೆಯಲ್ಲಿದ್ದಾರೆ.
5. ಹಾರ್ದಿಕ್ ಪಾಂಡ್ಯ: ಟೀಂ ಇಂಡಿಯಾ ಸ್ಪೋಟಕ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾತ್ರವಲ್ಲದೇ ನಾಯಕತ್ವದಲ್ಲೂ ಮಿಂಚುತ್ತಿದ್ದು, ಇದೀಗ ಕಿವೀಸ್ ಎದುರು ನಾಯಕನಾಗಿ ಜಯದ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದಾರೆ.
6. ದೀಪಕ್ ಹೂಡಾ: ಬಲಗೈ ಬ್ಯಾಟರ್ ದೀಪಕ್ ಹೂಡಾ, ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದು, ಅಗತ್ಯ ಸಂದರ್ಭದಲ್ಲಿ ಬೌಲಿಂಗ್ ಕೂಡಾ ಮಾಡುವ ಕ್ಷಮತೆ ಹೊಂದಿದ್ದಾರೆ. ಹೂಡಾ ಮ್ಯಾಚ್ ಫಿನಿಶರ್ ಪಾತ್ರವನ್ನೂ ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ.
7. ಕುಲ್ದೀಪ್ ಯಾದವ್: ಮಣಿಕಟ್ಟು ಸ್ಪಿನ್ನರ್, ಕುಲ್ದೀಪ್ ಯಾದವ್, ಕಿವೀಸ್ ಎದುರಿನ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿದ್ದು, ಇದೀಗ ಚುಟುಕು ಕ್ರಿಕೆಟ್ ಸರಣಿಯಲ್ಲಿ ಚಹಲ್ ಜತೆ ಮೋಡಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
8. ಆರ್ಶದೀಪ್ ಸಿಂಗ್: ಟೀಂ ಇಂಡಿಯಾ ಪ್ರತಿಭಾನ್ವಿತ ಯುವ ವೇಗಿ ಆರ್ಶದೀಪ್ ಸಿಂಗ್, ತಮ್ಮ ಕರಾರುವಕ್ಕಾದ ದಾಳಿಯ ಮೂಲಕ ಗಮನ ಸೆಳೆದಿದ್ದು, ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದಾರೆ.
9. ಶಿವಂ ಮಾವಿ: ಚೊಚ್ಚಲ ಪಾದಾರ್ಪಣೆ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಮಿಂಚಿದ್ದ ಶಿವಂ ಮಾವಿ, ಇದಾದ ಬಳಿಕ ಉಳಿದೆರಡು ಪಂದ್ಯಗಳಲ್ಲಿ ವಿಕೆಟ್ ಕಬಳಿಸಲು ವಿಫಲವಾಗಿದ್ದರು. ಆದರೆ ಇದೀಗ ಮತ್ತೊಮ್ಮೆ ಶಿವಂ ಮಾವಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆ.
10. ಉಮ್ರಾನ್ ಮಲಿಕ್: ಜಮ್ಮು-ಕಾಶ್ಮೀರ ಮೂಲದ ಮಾರಕ ವೇಗಿ ಉಮ್ರಾನ್ ಮಲಿಕ್, ಲಂಕಾ ಎದುರಿನ ಟಿ20 ಸರಣಿಯಲ್ಲಿ 7 ವಿಕೆಟ್ ಕಬಳಿಸಿ ಮಿಂಚಿದ್ದರು. ಮಲಿಕ್ ಇದೀಗ ಬಲಿಷ್ಠ ಕಿವೀಸ್ ಎದುರು ಮಿಂಚಲು ಎದುರು ನೋಡುತ್ತಿದ್ದಾರೆ.
11. ಯುಜುವೇಂದ್ರ ಚಹಲ್: ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಹಲ್, ಲಂಕಾ ಎದುರು 3 ವಿಕೆಟ್ ಕಬಳಿಸಿದ್ದರು. ಇದೀಗ ಕಿವೀಸ್ ಎದುರು ಕಂಬ್ಯಾಕ್ ಮಾಡಲು ಚಹಲ್ ಎದುರು ನೋಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.