ಕುಲ್ದೀಪ್ ಎಂಟ್ರಿ, ಸಂಜು ಕಮ್‌ಬಾಕ್, ಜಿಂಬಾಬ್ವೆ ವಿರುದ್ಧ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ
ಕುಲ್ದೀಪ್ ಎಂಟ್ರಿ, ಸಂಜು ಕಮ್‌ಬಾಕ್, ಜಿಂಬಾಬ್ವೆ ವಿರುದ್ಧ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ, ಟಿ20 ವಿಶ್ವಕಪ್ ಟೂರ್ನಿ ಸೆಮಿಫೈನಲ್ ಆಸೆ ಜೀವಂತವಾಗಿರಿಸಲು ಇಂದು ಭಾರಿ ಅಂತರದ ಗೆಲುವು ಬೇಕೆ ಬೇಕು.

ಟಿ20 ಮಾಡು ಇಲ್ಲವೆ ಮಡಿ ಹೋರಾಟ
ಇಂದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ. ಸೂಪರ್ಮೊ 8 ಹಂತದ ಮೊದಲ ಪಂದ್ಲಯದ ಸೋಲು, ಇದೀಗ ಜಿಂಬಾಬ್ವೆ ವಿರುದ್ದ ಭಾರಿ ಗೆಲುವು ಬೇಕಾಗಿದೆ. ಮೂರು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದ ಅಭಿಷೇಕ್ ಶರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧ 15 ರನ್ ಗಳಿಸಿದ್ದರು. ಆದರೆ, ಅವರಿಗೆ ತಮ್ಮ ಸಹಜ ಶೈಲಿಯಲ್ಲಿ ಆಡಲು ಸಾಧ್ಯವಾಗಿಲ್ಲ. ಆದರೂ, ಟೀಮ್ ಮ್ಯಾನೇಜ್‌ಮೆಂಟ್ ಅಭಿಷೇಕ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಫಾರ್ಮ್‌ಗೆ ಮರಳಿದರೆ, ಅವರು ಏಕಾಂಗಿಯಾಗಿ ಪಂದ್ಯ ಗೆಲ್ಲಿಸಬಲ್ಲರು.
ಸಂಜು ಸ್ಯಾಮ್ಸನ್
ಇಶಾನ್ ಕಿಶನ್
ಟೀಂ ಬ್ಯಾಲೆನ್ಸ್
ನಾಯಕ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿಯೇ ಮುಂದುವರಿಯಲಿದ್ದಾರೆ. ಮೊದಲ ಪಂದ್ಯದ ನಂತರ ಸೂರ್ಯ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಅವರು 18 ರನ್‌ಗಳಿಗೆ ಔಟಾಗಿದ್ದರು.ಭರ್ಜರಿ ಫಾರ್ಮ್‌ನಲ್ಲಿರುವ ಶಿವಂ ದುಬೆ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ದುಬೆ ಟಾಪ್ ಸ್ಕೋರರ್ ಆಗಿದ್ದರು. ಇಶಾನ್ ಕಿಶನ್ ಜೊತೆಗೆ ತಂಡದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರರಲ್ಲಿ ದುಬೆ ಕೂಡ ಒಬ್ಬರು.
ಅಲ್ರೌಂಡರ್
ಹಾರ್ದಿಕ್ ಪಾಂಡ್ಯ ಅವರ ಸ್ಥಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿರುವ ಹಾರ್ದಿಕ್, 4 ಓವರ್ ಬೌಲ್ ಮಾಡುವುದರ ಜೊತೆಗೆ ಬ್ಯಾಟಿಂಗ್‌ನಲ್ಲೂ ಮಿಂಚುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರ ಉಪಸ್ಥಿತಿ ತಂಡಕ್ಕೆ ಆತ್ಮವಿಶ್ವಾಸ ನೀಡುತ್ತದೆ.ವಾಷಿಂಗ್ಟನ್ ಸುಂದರ್ ಬದಲಿಗೆ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅಕ್ಷರ್ ಪಟೇಲ್ ತಂಡಕ್ಕೆ ಮರಳಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸುಂದರ್ 2 ಓವರ್‌ಗಳಲ್ಲಿ 17 ರನ್ ನೀಡಿ, ಬ್ಯಾಟಿಂಗ್‌ನಲ್ಲೂ ವಿಫಲರಾಗಿದ್ದರು.
ಬೌಲಿಂಗ್ ಶಕ್ತಿ
ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಜಸ್ಪ್ರೀತ್ ಬುಮ್ರಾಗೆ ಉತ್ತಮ ಬೆಂಬಲ ನೀಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಪಡೆದಿದ್ದರು.ದಕ್ಷಿಣ ಆಫ್ರಿಕಾ ವಿರುದ್ಧ ದುಬಾರಿಯಾದರೂ, ವರುಣ್ ಚಕ್ರವರ್ತಿಯನ್ನು ತಂಡದಿಂದ ಕೈಬಿಡುವ ಸಾಧ್ಯತೆ ಇಲ್ಲ. ಅವರು 4 ಓವರ್‌ಗಳಲ್ಲಿ 47 ರನ್ ನೀಡಿದ್ದರು. ಚೆನ್ನೈನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ವರುಣ್ ಆಡುವುದು ಖಚಿತ.ಚೆನ್ನೈನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ರಿಂಕು ಸಿಂಗ್ ಬದಲಿಗೆ ಕುಲ್‌ದೀಪ್ ಯಾದವ್ ಆಡಲಿದ್ದಾರೆ. ಫಿನಿಶರ್ ಪಾತ್ರದಲ್ಲಿರುವ ರಿಂಕು, ಕಳೆದ 5 ಪಂದ್ಯಗಳಲ್ಲಿ ಎರಡಂಕಿ ದಾಟಿಲ್ಲ. ತಂದೆಯ ಅನಾರೋಗ್ಯದ ಕಾರಣ ರಿಂಕು ತವರಿಗೆ ಮರಳಿದ್ದು, ಈ ಪಂದ್ಯದಲ್ಲಿ ಆಡುವುದು ಅನುಮಾನ.ದಕ್ಷಿಣ ಆಫ್ರಿಕಾ ವಿರುದ್ಧ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್ ಪಡೆದಿದ್ದ ಜಸ್ಪ್ರೀತ್ ಬುಮ್ರಾ, ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

