MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ವಿಂಡೀಸ್ ಎದುರಿನ 3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ?

ವಿಂಡೀಸ್ ಎದುರಿನ 3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ?

ಪೋರ್ಟ್ ಆಫ್‌ ಸ್ಪೇನ್‌: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ಏಕದಿನ ಸರಣಿ ಕ್ಲೀನ್‌ಸ್ವೀಪ್ ಮಾಡಲು ಎದುರು ನೋಡುತ್ತಿದೆ. ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಏಕದಿನ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ, ಎರಡು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ವಿಂಡೀಸ್ ಎದುರಿನ ಮೂರನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಇಲ್ಲಿದೆ ನೋಡಿ 

2 Min read
Author : Naveen Kodase
Published : Jul 27 2022, 05:07 PM IST
Share this Photo Gallery
  • FB
  • TW
  • Linkdin
  • Whatsapp
111
Image credit: Getty

Image credit: Getty

1. ಶಿಖರ್ ಧವನ್‌
ಟೀಂ ಇಂಡಿಯಾ ನಾಯಕ ಶಿಖರ್ ಧವನ್‌, ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ 97 ರನ್ ಚಚ್ಚಿದ್ದರು. ಎರಡನೇ ಪಂದ್ಯದಲ್ಲಿ ಧವನ್ ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲಿ ನಾಯಕನಾಗಿ ಹಾಗೂ ಬ್ಯಾಟರ್‌ ಆಗಿ ಯಶಸ್ವಿಯಾಗಲು ಎದುರು ನೋಡುತ್ತಿದ್ದಾರೆ.
 

211

2. ಶುಭ್‌ಮನ್‌ ಗಿಲ್‌
ಶಿಖರ್ ಧವನ್‌ ಜತೆಗೆ ಯುವ ಬ್ಯಾಟರ್ ಶುಭ್‌ಮನ್‌ ಗಿಲ್, ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುತ್ತಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಆರಂಭ ಪಡೆದಿದ್ದ ಗಿಲ್, ಇದೀಗ ಕೊನೆಯ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕಲು ಎದುರು ನೋಡುತ್ತಿದ್ದಾರೆ
 

311
Image credit: PTI

Image credit: PTI

3. ಶ್ರೇಯಸ್ ಅಯ್ಯರ್
ಹಂಗಾಮಿ ಉಪನಾಯಕ ಶ್ರೇಯಸ್ ಅಯ್ಯರ್, ಮೊದಲೆರಡು ಏಕದಿನ ಪಂದ್ಯಗಳಲ್ಲೂ ಆಕರ್ಷಕ ಅರ್ಧಶತಕ ಸಿಡಿಸಿದ್ದು, ಮೂರನೇ ಪಂದ್ಯದಲ್ಲಿ ಶತಕ ಸಿಡಿಸುವ ಯತ್ನ ನಡೆಸುವುದಾಗಿ ತಿಳಿಸಿದ್ದಾರೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ತೋರುತ್ತಿದ್ದಾರೆ.
 

411

4. ಸೂರ್ಯಕುಮಾರ್ ಯಾದವ್
ಟೀಂ ಇಂಡಿಯಾ ಪ್ರತಿಭಾನ್ವಿತ ಬ್ಯಾಟರ್ ಸೂರ್ಯಕುಮಾರ್ ಯಾದವ್, ಮೊದಲೆರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಮೊದಲೆರಡು ಪಂದ್ಯಗಳಿಂದ ಸೂರ್ಯ ಕೇವಲ 22 ರನ್‌ ಬಾರಿಸಿದ್ದರು. ಕೊನೆಯ ಪಂದ್ಯದಲ್ಲಿ ಫಾರ್ಮ್‌ಗೆ ಮರಳಲು ಸೂರ್ಯಕುಮಾರ್ ಯಾದವ್ ಚಿತ್ತ ನೆಟ್ಟಿದ್ದಾರೆ.
 

511
Sanju Samson

Sanju Samson

5. ಸಂಜು ಸ್ಯಾಮ್ಸನ್
ವಿಕೆಟ್‌ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ ಕಳೆದ ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಬಾರಿಸಿದ್ದರು. ಇದೀಗ ಸಂಜು ಮತ್ತೊಮ್ಮೆ ವಿಕೆಟ್‌ ಕೀಪಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರಲು ಎದುರು ನೋಡುತ್ತಿದ್ದಾರೆ.

611

6. ದೀಪಕ್ ಹೂಡಾ
ಪ್ರತಿಭಾನ್ವಿತ ಬ್ಯಾಟರ್ ಹೂಡಾ ಕೂಡಾ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಆರಂಭ ಪಡೆದರಾದರೂ, ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾಗಿದ್ದಾರೆ. ಮೂರನೇ ಏಕದಿನ ಪಂದ್ಯದಲ್ಲಿ ದೀಪಕ್ ಹೂಡಾ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ  

711

7. ರವೀಂದ್ರ ಜಡೇಜಾ
ಅನುಭವಿ ಆಲ್ರೌಂಡರ್ ಜಡೇಜಾ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಮೂರನೇ ಪಂದ್ಯಕ್ಕೆ ಸಂಪೂರ್ಣ ಫಿಟ್ ಆದರೆ ಯುಜುವೇಂದ್ರ ಚಹಲ್‌ಗೆ ವಿಶ್ರಾಂತಿ ಸಿಗಲಿದ್ದು, ಜಡ್ಡು ತಂಡ ಕೂಡಿಕೊಳ್ಳಲಿದ್ದಾರೆ.

811

8. ಅಕ್ಷರ್ ಪಟೇಲ್‌
ಕಳೆದ ಏಕದಿನ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಅಕ್ಷರ್ ಪಟೇಲ್ ಇಂದು ಕೂಡಾ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
 

911

9. ಶಾರ್ದೂಲ್ ಠಾಕೂರ್
ಅನುಭವಿ ವೇಗಿ ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಶಾರ್ದೂಲ್ ಠಾಕೂರ್ ಮಹತ್ವದ ಸಂದರ್ಭದಲ್ಲಿ ವಿಕೆಟ್ ಕಬಳಿಸುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಶಾರ್ದೂಲ್ ಠಾಕೂರ್ ಮೊದಲೆರಡು ಪಂದ್ಯಗಳಿಂದ 5 ವಿಕೆಟ್ ಕಬಳಿಸಿದ್ದು, ಸರಣಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ ಆಗಿ ಹೊರಹೊಮ್ಮಿದ್ದಾರೆ.

1011
Image credit: Getty

Image credit: Getty

10. ಮೊಹಮ್ಮದ್ ಸಿರಾಜ್
ಹೈದರಾಬಾದ್ ಮೂಲದ ಪ್ರತಿಭಾನ್ವಿತ ವೇಗಿ ಮೊಹಮ್ಮದ್ ಸಿರಾಜ್ ಶಿಸ್ತುಬದ್ದ ದಾಳಿ ನಡೆಸುವ ಮೂಲಕ ಗಮನ ಸೆಳೆದಿದ್ದು, ಮೂರನೇ ಪಂದ್ಯದಲ್ಲೂ ವಿಂಡೀಸ್ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಸಜ್ಜಾಗಿದ್ದಾರೆ.
 

1111

11. ಆರ್ಶದೀಪ್ ಸಿಂಗ್
ಕಳೆದ ಪಂದ್ಯದಲ್ಲಿ ಆವೇಶ್ ಖಾನ್ ಕೊಂಚ ದುಬಾರಿ ಎನಿಸಿಕೊಂಡಿದ್ದು, ಆವೇಶ್ ಖಾನ್ ಬದಲಿಗೆ ಆರ್ಶದೀಪ್ ಸಿಂಗ್ ಇಂದು ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Recommended image2
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
Recommended image3
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved