ಲಂಕಾ ಎದುರಿನ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ..?
ಕೊಲಂಬೊ: ಭಾರತ ಹಾಗೂ ಶ್ರೀಲಂಕಾ ನಡುವಿನ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾಕಷ್ಟು ಪೈಪೋಟಿಯಿಂದ ಕೂಡಿರುವ ಸಾಧ್ಯತೆಯಿದೆ. ಮೊದಲ ಪಂದ್ಯವನ್ನು ಟೀಂ ಇಂಡಿಯಾ 38 ರನ್‌ಗಳ ಜಯ ಸಾಧಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಲಂಕಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಇದೀಗ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್ ಎದುರಾಗಿದ್ದು, ನವದೀಪ್ ಮೂರನೇ ಟಿ20 ಪಂದ್ಯದಲ್ಲಿ ಆಡುವುದು ಅನುಮಾನ ಎನಿಸಿದೆ. ಮೊದಲೇ ಕೋವಿಡ್ ಶಾಕ್‌ನಿಂದ ಕಂಗೆಟ್ಟಿರುವ ಭಾರತ ತಂಡಕ್ಕೆ ಇದು ಮತ್ತಷ್ಟು ಹಿನ್ನೆಡೆಯಾಗುವ ಸಾಧ್ಯತೆಯಿದೆ.ಲಂಕಾ ಎದುರಿನ ನಿರ್ಣಾಯಕ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿದೆ ನೋಡಿ

1. ಋತುರಾಜ್ ಗಾಯಕ್ವಾಡ್: ಯುವ ಆರಂಭಿಕ ಬ್ಯಾಟ್ಸ್‌ಮನ್
2. ಶಿಖರ್ ಧವನ್: ನಾಯಕ ಹಾಗೂ ಅನುಭವಿ ಬ್ಯಾಟ್ಸ್‌ಮನ್
3. ದೇವದತ್ ಪಡಿಕ್ಕಲ್: ರಾಜ್ಯದ ಪ್ರತಿಭಾನ್ವಿಯ ಬ್ಯಾಟ್ಸ್‌ಮನ್
4. ಸಂಜು ಸ್ಯಾಮ್ಸನ್: ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್
5. ನಿತೀಶ್ ರಾಣಾ: ಯುವ ಎಡಗೈ ಬ್ಯಾಟ್ಸ್‌ಮನ್
6. ಕೃಷ್ಣಪ್ಪ ಗೌತಮ್: ಅನುಭವಿ ಆಲ್ರೌಂಡರ್
7. ಭುವನೇಶ್ವರ್ ಕುಮಾರ್: ಅನುಭವಿ ವೇಗದ ಬೌಲರ್
8. ಚೇತನ್ ಸಕಾರಿಯಾ: ಯುವ ವೇಗದ ಬೌಲರ್
9. ಕುಲ್ದೀಪ್ ಯಾದವ್: ಮಣಿಕಟ್ಟು ಸ್ಪಿನ್ನರ್
10. ರಾಹುಲ್ ಚಹಾರ್: ಯುವ ಲೆಗ್‌ಸ್ಪಿನ್ನರ್
11. ವರುಣ್ ಚಕ್ರವರ್ತಿ: ಮಿಸ್ಟ್ರಿ ಸ್ಪಿನ್ನರ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.