ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್‌ಗೆ ಸಂಭಾವ್ಯ ಟೀಂ ಇಂಡಿಯಾ ಪ್ರಕಟ..!

First Published Mar 3, 2021, 3:27 PM IST

ಅಹಮದಾಬಾದ್‌: ಇಂಗ್ಲೆಂಡ್‌ ವಿರುದ್ದ ಮಾರ್ಚ್‌ 04ರಂದು ಕೊನೆಯ ಟೆಸ್ಟ್ ಪಂದ್ಯವನ್ನಾಡಲು ಟೀಂ ಇಂಡಿಯಾ ಕಣಕ್ಕಿಳಿಯಲಿದ್ದು, ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು, ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳಲು ವಿರಾಟ್ ಕೊಹ್ಲಿ ಪಡೆ ತುದಿಗಾಲಿನಲ್ಲಿ ನಿಂತಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಮುಖವಾಗಿ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇಂಗ್ಲೆಂಡ್ ಎದುರಿನ ಕೊನೆಯ ಟೆಸ್ಟ್‌ಗೆ ಸಂಭಾವ್ಯ ಟೀಂ ಇಂಡಿಯಾ ಹೀಗಿದೆ ನೋಡಿ