ಸಂಜನಾ ಜತೆಗಿನ ಮುದ್ದಾದ ಫೋಟೊಗಳನ್ನು ಹಂಚಿಕೊಂಡ ಜಸ್ಪ್ರೀತ್ ಬುಮ್ರಾ

First Published Mar 19, 2021, 5:51 PM IST

ನವದೆಹಲಿ: ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಕೆಲದಿನಗಳ ಹಿಂದಷ್ಟೇ ಟಿವಿ ನಿರೂಪಕಿ ಸಂಜನಾ ಗಣೇಶನ್‌ರನ್ನು ವಿವಾಹವಾಗಿದ್ದರು. ಇದೀಗ ತಮ್ಮ ವಿವಾಹಕ್ಕೆ ಶುಭಕೋರಿದ ಎಲ್ಲಾ ಅಭಿಮಾನಿಗಳಿಗೆ ಈ ತಾರಾ ಜೋಡಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ ಹಾಗೂ ಟ್ವಿಟರ್‌ನಲ್ಲಿ ಕೆಲವು ಆರತಕ್ಷತೆಯ ಫೋಟೋಗಳನ್ನು ಹಂಚಿಕೊಂಡಿರುವ ಬುಮ್ರಾ, ನಿಮ್ಮ ಪ್ರೀತಿ ಹಾಗೂ ಹಾರೈಕೆಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.