- Home
- Sports
- Cricket
- T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಮುಲ್ಲನ್‌ಪುರ: ದಕ್ಷಿಣ ಆಫ್ರಿಕಾ ಎದುರಿನ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 100 ಸಿಕ್ಸರ್ ಸಿಡಿಸಿದ ಎಲೈಟ್ ಬ್ಯಾಟರ್‌ಗಳ ಕ್ಲಬ್ ಸೇರಿದ್ದಾರೆ. ಬನ್ನಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಭಾರತೀಯ ಬ್ಯಾಟರ್ ಯಾರು ನೋಡೋಣ.

5. ಕೆ ಎಲ್ ರಾಹುಲ್: 99 ಸಿಕ್ಸರ್
ಭಾರತದ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ 72 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 99 ಸಿಕ್ಸರ್ ಸಿಡಿಸುವ ಮೂಲಕ ಐದನೇ ಸ್ಥಾನದಲ್ಲಿದ್ದಾರೆ.
4. ಹಾರ್ದಿಕ್ ಪಾಂಡ್ಯ: 100 ಸಿಕ್ಸರ್
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ಪರ 121 ಟಿ20 ಪಂದ್ಯಗಳನ್ನಾಡಿ 100 ಸಿಕ್ಸರ್ ಸಿಡಿಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ.
3. ವಿರಾಟ್ ಕೊಹ್ಲಿ: 124 ಸಿಕ್ಸರ್
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಭಾರತ ಪರ 125 ಟಿ20 ಪಂದ್ಯಗಳನ್ನಾಡಿ 124 ಸಿಕ್ಸರ್ ಸಿಡಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
2. ಸೂರ್ಯಕುಮಾರ್ ಯಾದವ್: 156 ಸಿಕ್ಸರ್
ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಭಾರತ ಪರ ಕೇವಲ 96 ಟಿ20 ಪಂದ್ಯಗಳನ್ನಾಡಿ 155 ಸಿಕ್ಸರ್ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
1. ರೋಹಿತ್ ಶರ್ಮಾ
ಟೀಂ ಇಂಡಿಯಾ ಮಾಜಿ ನಾಯಕ, ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 159 ಪಂದ್ಯಗಳನ್ನಾಡಿ 205 ಸಿಕ್ಸರ್ ಸಿಡಿಸಿದ್ದು, ಈ ದಾಖಲೆ ಪಾಂಡ್ಯ ಬ್ರೇಕ್ ಮಾಡ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
