ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳಿವರು..!
ಬೆಂಗಳೂರು: ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಜೂನ್ 01ರಿಂದ ಆರಂಭವಾಗಲಿದ್ದು, ಈ ಚುಟುಕು ಕ್ರಿಕೆಟ್ ಮಹಾಸಂಗ್ರಾಮಕ್ಕೆ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯ ವಹಿಸಿದೆ.
2007ರಲ್ಲಿ ಆರಂಭವಾದ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಟೂರ್ನಿ 17 ವರ್ಷ ಕಳೆದಿದ್ದು, ನಾವಿಂದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳನ್ನು ನೋಡೋಣ ಬನ್ನಿ.
1. ಶಕೀಬ್ ಅಲ್ ಹಸನ್:
ಬಾಂಗ್ಲಾದೇಶ ತಂಡದ ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ 36 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 47 ವಿಕೆಟ್ ಕಬಳಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.
2. ಶಾಹಿದ್ ಅಫ್ರಿದಿ:
ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ, 2024ನೇ ಸಾಲಿನ ಟಿ20 ವಿಶ್ವಕಪ್ ಟೂರ್ನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮವಾಗಿದ್ದಾರೆ. ಅಫ್ರಿದಿ 34 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 39 ವಿಕೆಟ್ ಕಬಳಿಸಿದ್ದಾರೆ.
3. ಲಸಿತ್ ಮಾಲಿಂಗ;
ಶ್ರೀಲಂಕಾದ ಮಾಜಿ ವೇಗಿ ಮಾಲಿಂಗ 31 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 38 ವಿಕೆಟ್ ಕಬಳಿಸುವ ಮೂಲಕ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
4. ಸಯೀದ್ ಅಜ್ಮಲ್:
ಪಾಕಿಸ್ತಾನದ ಮಾಜಿ ಆಫ್‌ಸ್ಪಿನ್ನರ್ ಸಯೀದ್ ಅಜ್ಮಲ್, 23 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 36 ವಿಕೆಟ್ ಕಬಳಿಸುವ ಮೂಲಕ, ಚುಟುಕು ಕ್ರಿಕೆಟ್ ವಿಶ್ವಕಪ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
5. ಅಜಂತಾ ಮೆಂಡಿಸ್:
ಶ್ರೀಲಂಕಾದ ಮಾಜಿ ಮಿಸ್ಟ್ರಿ ಸ್ಪಿನ್ನರ್ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 35 ವಿಕೆಟ್ ಕಬಳಿಸುವ ಮೂಲಕ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಮೆಂಡಿಸ್ 5ನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.