ಎಜ್‌ಬಾಸ್ಟನ್‌ನಲ್ಲಿ ಅತಿಹೆಚ್ಚು ಟೆಸ್ಟ್ ರನ್ ಬಾರಿಸಿದ ಟಾಪ್ 6 ಭಾರತೀಯ ಬ್ಯಾಟರ್‌ಗಳಿವರು
ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಜುಲೈ 2 ರಿಂದ ಎಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿದೆ. ಈ ಮೈದಾನದಲ್ಲಿ ಅತಿಹೆಚ್ಚು ಟೆಸ್ಟ್ ರನ್ ಬಾರಿಸಿದ ಟಾಪ್ 6 ಭಾರತೀಯ ಬ್ಯಾಟರ್‌ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಜುಲೈ 2 ರಿಂದ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಭಾರತೀಯರು ತಮ್ಮ ಪ್ರಾಬಲ್ಯವನ್ನು ಮುಂದುವರೆಸಿದ್ದಾರೆ.
1. ವಿರಾಟ್ ಕೊಹ್ಲಿ:
ಎಜ್‌ಬಾಸ್ಟನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ವಿರಾಟ್ ಕೊಹ್ಲಿ. ಅವರು ಈ ಮೈದಾನದಲ್ಲಿ ಎರಡು ಪಂದ್ಯಗಳ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 231 ರನ್ ಗಳಿಸಿದ್ದಾರೆ. ಈ ಮೈದಾನದಲ್ಲಿ ಅವರ ಹೆಸರಿನಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕವೂ ಇದೆ.
2. ಸುನಿಲ್ ಗವಾಸ್ಕರ್:
ಎಜ್‌ಬಾಸ್ಟನ್‌ನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದವರು ಸುನಿಲ್ ಗವಾಸ್ಕರ್. 1974 ರಿಂದ 1986 ರವರೆಗೆ ಇಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಆಡಿ ಆರು ಇನ್ನಿಂಗ್ಸ್‌ಗಳಲ್ಲಿ 216 ರನ್ ಗಳಿಸಿದ್ದಾರೆ.
3. ರಿಷಭ್ ಪಂತ್:
ಭಾರತ ಟೆಸ್ಟ್ ತಂಡದ ಉಪನಾಯಕ ರಿಷಭ್ ಪಂತ್, ಎಜ್‌ಬಾಸ್ಟನ್‌ನಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಒಂದು ಟೆಸ್ಟ್‌ನ ಎರಡು ಇನ್ನಿಂಗ್ಸ್‌ಗಳಲ್ಲಿ 203 ರನ್ ಗಳಿಸಿದ್ದಾರೆ. ಜುಲೈ 2 ರ ಟೆಸ್ಟ್‌ನಲ್ಲಿ ಪಂತ್‌ರಿಂದ ಸಾಕಷ್ಟು ನಿರೀಕ್ಷೆಗಳಿವೆ.
4. ಸಚಿನ್ ತೆಂಡುಲ್ಕರ್
ಸಚಿನ್ ತೆಂಡುಲ್ಕರ್ ಕೂಡ ಈ ಪಟ್ಟಿಯಲ್ಲಿದ್ದಾರೆ. 1996 ರಿಂದ 2011 ರ ನಡುವೆ ಎಡ್ಜ್‌ಬಾಸ್ಟನ್‌ನಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 187 ರನ್ ಗಳಿಸಿದ್ದಾರೆ.
5. ಗುಂಡಪ್ಪ ವಿಶ್ವನಾಥ್
ವಿಶ್ವನಾಥ್ ಎಜ್‌ಬಾಸ್ಟನ್‌ನಲ್ಲಿ ಎರಡು ಟೆಸ್ಟ್ ಪಂದ್ಯಗಳಲ್ಲಿ 182 ರನ್ ಗಳಿಸಿದ್ದಾರೆ. ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ.
6. ಎಂ ಎಸ್ ಧೋನಿ
ಧೋನಿ ಎಜ್‌ಬಾಸ್ಟನ್‌ನಲ್ಲಿ ಒಂದು ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 151 ರನ್ ಗಳಿಸಿದ್ದಾರೆ. ಅವರ ಅತ್ಯಧಿಕ ಸ್ಕೋರ್ 77 ರನ್.