ಇಂಗ್ಲೆಂಡ್ ಸರಣಿಯಲ್ಲಿ ಮಿಂಚಿದ ಟೀಂ ಇಂಡಿಯಾದ ಮೂವರು ಅನ್‌ಸಂಗ್ ಹೀರೋಗಳಿವರು!
ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್‌ಗಳ ಸರಣಿಯನ್ನು ಭಾರತ ಸಮಬಲಗೊಳಿಸುವಲ್ಲಿ ಬ್ಯಾಟರ್‌ಗಳ ಜೊತೆಗೆ ಬೌಲರ್‌ಗಳಾದ ಸಿರಾಜ್, ಬುಮ್ರಾ, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಇಂಗ್ಲೆಂಡ್ ನೆಲದಲ್ಲಿ ನಡೆದ ಐದು ಟೆಸ್ಟ್‌ಗಳ ಸರಣಿಯನ್ನು 2-2 ಅಂತರದಲ್ಲಿ ಸಮಬಲಗೊಳಿಸಿ ಯುವ ಭಾರತ ತಂಡ ಇತಿಹಾಸ ನಿರ್ಮಿಸಿದೆ. ಬ್ಯಾಟಿಂಗ್‌ನಲ್ಲಿ ಶುಭ್‌ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್ ಮಿಂಚಿದರು. ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ಮುಂತಾದವರು ಉತ್ತಮ ಪ್ರದರ್ಶನ ನೀಡಿದರು. ಸರಣಿಯನ್ನು ಸಮಬಲಗೊಳಿಸುವಲ್ಲಿ ಹೆಚ್ಚು ಗಮನಕ್ಕೆ ಬಾರದ ಆಟಗಾರರು ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಟೀಂ ಇಂಡಿಯಾ ಪ್ರದರ್ಶನದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಮತ್ತು ವಾಷಿಂಗ್ಟನ್ ಸುಂದರ್.
ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಪ್ರಸಿದ್ಧ್ ಕೃಷ್ಣ 14 ವಿಕೆಟ್‌ಗಳನ್ನು ಪಡೆದು ಬುಮ್ರಾ ಅವರಷ್ಟೇ ವಿಕೆಟ್ ಕಬಳಿಸಿದ ಸಾಧನೆ ಮಾಡಿದರು. ಬುಮ್ರಾ ಇಲ್ಲದ ಸಮಯದಲ್ಲಿ ಪ್ರತಿಸ್ಪರ್ಧಿಗಳನ್ನು ಕಟ್ಟಿಹಾಕುವಲ್ಲಿ ಪ್ರಸಿದ್ದ್ ಕೃಷ್ಣ ಮುಂಚೂಣಿಯಲ್ಲಿದ್ದರು. ಭಾರತ ತಂಡದ ಉತ್ತಮ ಬೌಲಿಂಗ್ ಪ್ರದರ್ಶನದಲ್ಲಿ ಪ್ರಸಿದ್ಧ್ ಪಾತ್ರ ಅಪೂರ್ವವಾದುದು.
ಪ್ರಸಿದ್ಧ್ ಬೌಲಿಂಗ್, ಆಕಾಶ್ ಆಕ್ರಮಣಕಾರಿ ಆಟ ಮತ್ತು ವಾಷಿಂಗ್ಟನ್ ಆಲ್‌ರೌಂಡ್ ಪ್ರದರ್ಶನ ಭಾರತವನ್ನು ಗೆಲುವಿನತ್ತ ಕೊಂಡೊಯ್ದವು. ಹೆಚ್ಚು ಪ್ರಚಾರ ಪಡೆಯದ ಈ ಮೂವರು ಅನ್‌ಸಂಗ್ ಆಟಗಾರರು ಟೀಂ ಇಂಡಿಯಾ ಹೆಮ್ಮೆಪಡುವಂತ ಸಾಧನೆ ಮಾಡಿದ್ದಾರೆ. ಈ ಮೂವರು ಆಟಗಾರರ ಅಸಾಧಾರಣ ಪ್ರದರ್ಶನವಿಲ್ಲದೆ ಅದು ಸಾಧ್ಯವಾಗುತ್ತಿರಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

