ಟೀಂ ಇಂಡಿಯಾಗೆ ಆಯ್ಕೆಯಾಗುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ
ಐಪಿಎಲ್‌ನಲ್ಲಿ ಜಗತ್ತನ್ನೆ ಬೆರಗುಗೊಳಿಸಿದ ವೈಭವ್ ಸೂರ್ಯವಂಶಿ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ವಿಶೇಷ ಅಂದರೆ ವೈಭವ್ ಭಾರತ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ದಾಖಲೆ ಮುರಿದಿದ್ದಾರೆ.

ಸ್ಫೋಟಕ ಆಟಕ್ಕೂ ಮೊದಲೇ ದಾಖಲೆ
ವೈಭವ್ ಸೂರ್ಯವಂಶಿ ದೇಶದ ಮನೆ ಮಾತಾಗಿದ್ದಾರೆ. 15ರ ಹರೆಯದ ಬಾಲಕ ಐಪಿಎಲ್ ಟೂರ್ನಿಯಲ್ಲಿ ದಿಗ್ಗಜ ಬೌಲರ್ಸ್‌ಗೆ ಹಿಗ್ಗಾ ಮುಗ್ಗಾ ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದಾರೆ. ಆರೇಂಜ್ ಕ್ಯಾಂಪ್ ಸೆಂಚುರಿ, ಅತೀ ವೇಗದಲ್ಲಿ ರನ್ ಸಾಧನೆ, ಗರಿಷ್ಠ ಸಿಕ್ಸರ್ ಹೀಗೆ ಹಲವು ದಾಖಲೆಗಳು ವೈಭವ್ ಸೂರ್ಯವಂಶಿ ಹೆಸರಲ್ಲಿದೆ. ಈ ಯಶಸ್ಸಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಆಯ್ಕೆಯಾದ ಸೂರ್ಯವಂಶಿ ಹೊಸ ದಾಖಲೆ ಬರೆದಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ದಾಖಲೆ ಬ್ರೇಕ್
ಐರ್ಲೆಂಡ್, ಇಂಗ್ಲೆಂಡ್ ಪ್ರವಾಸಕ್ಕೆ ಭಾರತದ ಪ್ರಕಟಗೊಂಡಾಗ ಅಚ್ಚರಿ ಕಾದಿತ್ತು. ವೈಭವ್ ಸೂರ್ಯವಂಶಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಆಯ್ಕೆಗೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಹಲವು ದಾಖಲೆಗಳ ಸರದಾರ ಈ ಪೋರ ಇದೀಗ ಟೀಂ ಇಂಡಿಯಾಗೆ ಆಯ್ಕೆಯಾಗುತ್ತಿದ್ದಂತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ.
36 ವರ್ಷಗಳ ಹಳೇ ದಾಖಲೆ ಬ್ರೇಕ್
ಟೀಂ ಇಂಡಿಯಾಗೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರ ಅನ್ನೋ ದಾಖಲೆಗೆ ವೈಭವ್ ಸೂರ್ಯವಂಶಿ ಪಾತ್ರರಾಗಿದ್ದಾರೆ. ವೈಭವ್ ಸೂರ್ಯವಂಶಿ ವಯಸ್ಸು ಕೇವಲ 15. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ. 36 ವರ್ಷ ಹಿಂದೆ 1989ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ 16ನೇ ವಯಸ್ಸಿನಲ್ಲಿ ಟೀಂ ಇಂಡಿಯಾಗೆ ಆಯ್ಕೆಯಗಿದ್ದರು. ಇದೀಗ ವೈಭವ್ 15ನೇ ವಯಸ್ಸಿಗೆ ಭಾರತ ತಂಡಕ್ಕೆ ಆಯ್ಕೆಯಾಗಿ ದಾಖಲೆ ಮುರಿದಿದ್ದಾರೆ.
ಸಚಿನ್ ಮೆಚ್ಚಿದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ಸ್ಫೋಟಕ ಆಟಕ್ಕೆ ಸಚಿನ್ ತೆಂಡೂಲ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಸಚಿನ್ ದಾಖಲೆಯನ್ನೇ ಮುರಿದು ಹೊಸ ಇತಿಹಾಸ ಬರೆದಿದ್ದಾರೆ. ವೈಭವ್ ದಾಖಲೆಯನ್ನು ಮುರಿಯುವುದು ಸುಲಭದ ಮಾತಲ್ಲ. ಕೇವಲ 15ನೇ ವಯಸ್ಸಿಗೆ ಭಾರತ ತಂಡಕ್ಕೆ ಆಯ್ಕೆ ಕಷ್ಟ ಸಾಧ್ಯ ಎಂದೇ ಹೇಳಲಾಗುತ್ತಿದೆ.
ಐಪಿಎಲ್‌ನಲ್ಲಿ ದಾಖಲೆಗಳ ಸುರಿಮಳೆ
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 776 ರನ್ ಸಿಡಿಸಿದ ವೈಭವ್ ಸೂರ್ಯವಂಶಿ 5 ಪ್ರಶಸ್ತಿ ಬಾಚಿಕೊಂಡಿದ್ದಾರೆ. ಆರೇಂಜ್ ಕ್ಯಾಪ್, ಸೂಪರ್ ಸ್ಟ್ರೈಕರ್, ವಾಲ್ಯುಯೆಬಲ್ ಪ್ಲೇಯರ್ ಸೇರಿದಂತೆ 5 ಅವಾರ್ಡ್ ಗೆದ್ದಿದ್ದಾರೆ. ಇನ್ನು ಒಂದೇ ಆವೃತ್ತಿಯಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿ ಕ್ರಿಸ್ ಗೇಲ್ ದಾಖಲೆಯನ್ನು ಮುರಿದಿದ್ದಾರೆ.
ಅಂಡರ್ 19 ವಿಶ್ವಕಪ್ ಹೀರೋ
ಐಪಿಎಲ್ 2026 ಟೂರ್ನಿಗೂ ಮೊದಲು ವೈಭವ್ ಸೂರ್ಯವಂಶಿ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ 175 ರನ್ ಸಿಡಿಸಿದ್ದರು. ಪ್ರತಿ ಟೂರ್ನಿ, ಪ್ರತಿ ಪಂದ್ಯದಲ್ಲಿ ದಾಖಲೆ ಬರೆಯುತ್ತಿರುವ ಸೂರ್ಯವಂಶಿ ಇದೀಗ ಟೀಂ ಇಂಡಿಯಾದಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

