- Home
- Sports
- Cricket
- ವೈಭವ್ ಸೂರ್ಯವಂಶಿ ಇಂದು ಭಾರತಕ್ಕೆ ಪಾದಾರ್ಪಣೆ ಮಾಡ್ತಾರಾ? ದೊಡ್ಡ ಸುಳಿವು ಬಿಟ್ಟುಕೊಟ್ಟ 15 ವರ್ಷದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ಇಂದು ಭಾರತಕ್ಕೆ ಪಾದಾರ್ಪಣೆ ಮಾಡ್ತಾರಾ? ದೊಡ್ಡ ಸುಳಿವು ಬಿಟ್ಟುಕೊಟ್ಟ 15 ವರ್ಷದ ಕ್ರಿಕೆಟಿಗ
ಡುರ್ಹಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಎಲ್ಲರ ಕಣ್ಣು ವೈಭವ್ ಸೂರ್ಯವಂಶಿ ಮೇಲಿದೆ. ಹೀಗಿರುವಾಗಲೇ ವೈಭವ್ ಹಾಕಿರುವ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದೆ.

ಇಂದು ಭಾರತ-ಇಂಗ್ಲೆಂಡ್ ಟಿ20 ಸರಣಿ ಆರಂಭ
ಐರ್ಲೆಂಡ್ ಎದುರಿನ ಟಿ20 ಸರಣಿಗೆ ಆಯ್ಕೆಯಾಗಿದ್ದರೂ 15 ವರ್ಷದ ವೈಭವ್ ಸೂರ್ಯವಂಶಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ಆ ಸರಣಿಯಲ್ಲಿ ಟೀಂ ಇಂಡಿಯಾ ವೈಟ್‌ವಾಷ್ ಮುಖಭಂಗ ಅನುಭವಿಸಿತ್ತು. ಇದೀಗ ಇಂದಿನಿಂದ ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಈ ಪಂದ್ಯದಲ್ಲಾದರೂ ವೈಭವ್ ಸೂರ್ಯವಂಶಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡ್ತಾರಾ ಅಥವಾ ಇಲ್ಲವಾ ಎನ್ನುವ ಕುತೂಹಲ ಜೋರಾಗಿದೆ.
ವೈಭವ್ ಸೂರ್ಯವಂಶಿಯ ಸೋಷಿಯಲ್ ಮೀಡಿಯಾ ಪೋಸ್ಟ್
ಐರ್ಲೆಂಡ್ ಎದುರು ಟೀಂ ಇಂಡಿಯಾ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದ್ದು. ಹೀಗಾಗಿ ಇಂದು ನಡೆಯಲಿರುವ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಅಥವಾ ಇಶಾನ್ ಕಿಶನ್ ಬದಲಿಗೆ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದರ ನಡುವೆ ವೈಭವ್ ಸೂರ್ಯವಂಶಿಯ ಸೋಷಿಯಲ್ ಮೀಡಿಯಾ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗ್ರೇಟ್‌ಫುಲ್ ಸಂದೇಶ ರವಾನಿಸಿರುವ ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ ಇದೀಗ ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮುನ್ನ ತಮ್ಮ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಕ್ಯಾಪ್ಷನ್‌ನಲ್ಲಿ ಗ್ರೇಟ್‌ಫುಲ್ ಎಂದು ಬರೆದುಕೊಂಡಿದ್ದಾರೆ. ಇದು ಭಾರತಕ್ಕೆ ಪಾದಾರ್ಪಣೆಗೆ ಸಜ್ಜಾಗುವ ಮುನ್ನ ಗ್ರೇಟ್‌ಫುಲ್ ಸಂದೇಶ ರವಾನಿಸಿದ್ದಾರೆ ಎನ್ನುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.
ಭರ್ಜರಿ ಪ್ರಾಕ್ಟೀಸ್ ನಡೆಸಿರುವ ವೈಭವ್ ಸೂರ್ಯವಂಶಿ
ಇಂಗ್ಲೆಂಡ್ ಎದುರಿನ ಸರಣಿಗೂ ಮುನ್ನ 15 ವರ್ಷದ ವೈಭವ್ ಸೂರ್ಯವಂಶಿ, ನೆಟ್ಸ್‌ನಲ್ಲಿ ಭರ್ಜರಿ ಪ್ರಾಕ್ಟೀಸ್ ಮಾಡುವ ಮೂಲಕ ಗಮನ ಸೆಳೆದಿದ್ದರು. ನೆಟ್ಸ್‌ನಲ್ಲಿ ಭಾರತೀಯ ಬೌಲರ್‌ಗಳ ಎದುರು ವೈಭವ್ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವರುಣ್ ಚಕ್ರವರ್ತಿ ಕಮ್‌ಬ್ಯಾಕ್?
ಇನ್ನು ವೈಭವ್ ಸೂರ್ಯವಂಶಿ ಮಾತ್ರವಲ್ಲದೇ ಅನುಭವಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡಾ ಇಂದು ಇಂಗ್ಲೆಂಡ್ ಎದುರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ವರುಣ್ ಚಕ್ರವರ್ತಿ ಗಾಯದ ಸಮಸ್ಯೆಯಿಂದಾಗಿ ಐರ್ಲೆಂಡ್ ಎದುರಿನ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ವರುಣ್ ಚಕ್ರವರ್ತಿ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ದಟ್ಟವಾಗಿದೆ.
ಭಾರತ ಸಂಭಾವ್ಯ ತಂಡ:
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್/ವೈಭವ್ ಸೂರ್ಯವಂಶಿ, ಇಶಾನ್ ಕಿಶನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

