MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಇಂಗ್ಲೆಂಡ್ ಎದುರು ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ; ವಿಶ್ವಕಪ್ ಸ್ಟಾರ್ ಜಿಂಬಾಬ್ವೆ ಎದುರಿನ ಸರಣಿಯಿಂದ ಔಟ್?

ಇಂಗ್ಲೆಂಡ್ ಎದುರು ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ; ವಿಶ್ವಕಪ್ ಸ್ಟಾರ್ ಜಿಂಬಾಬ್ವೆ ಎದುರಿನ ಸರಣಿಯಿಂದ ಔಟ್?

ಬೆಂಗಳೂರು: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರು ಟಿ20 ಸರಣಿ ವೈಟ್‌ವಾಷ್ ಬೆನ್ನಲ್ಲೇ ಇದೀಗ, ಭಾರತ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಿಂದ ಭಾರತದ ಮತ್ತೋರ್ವ ವಿಶ್ವಕಪ್ ವಿಜೇತ ತಂಡದ ಆಟಗಾರ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

2 Min read
Author : Naveen Kodase
Published : Jul 12 2026, 02:27 PM IST
Share this Photo Gallery
  • FB
  • TW
  • Linkdin
  • Whatsapp
16
ಟೀಂ ಇಂಡಿಯಾಗೆ ಮತ್ತೊಂದು ಆಘಾತ
Image Credit : bcci

ಟೀಂ ಇಂಡಿಯಾಗೆ ಮತ್ತೊಂದು ಆಘಾತ

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಿದ ಏಳು ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಭಾರತ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು, ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯ ಮುಂಬರುವ ಜಿಂಬಾಬ್ವೆ ಎದುರಿನ ಟಿ20 ಸರಣಿಯಿಂದ ಹೊರಬೀಳುವ ಭೀತಿಗೆ ಸಿಲುಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ವರುಣ್ ಚಕ್ರವರ್ತಿಗೆ ಗಾಯದ ಸಮಸ್ಯೆ
Image Credit : Getty

ವರುಣ್ ಚಕ್ರವರ್ತಿಗೆ ಗಾಯದ ಸಮಸ್ಯೆ

ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇದೇ ಜುಲೈ 23ರಿಂದ ಆರಂಭವಾಗಲಿದೆ. ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಗಾಯಗೊಂಡಿರುವ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಸ್ನಾಯು ಸೆಳೆತದಿಂದ ಇನ್ನೂ ಸರಿಯಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಜಿಂಬಾಬ್ವೆ ಎದುರಿನ ಟಿ20 ಸರಣಿಯಿಂದ ಹೊರಬೀಳುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Related Articles

Related image1
ಮತ್ತೆ ಮತ್ತೆ ಅದೇ ತಪ್ಪು ಮಾಡ್ತಿದ್ದಾರೆ ವೈಭವ್ ಸೂರ್ಯವಂಶಿ! ಈ 3 ತಪ್ಪು ತಿದ್ದಿಕೊಳ್ಳದಿದ್ರೆ, ಟೀಂ ಇಂಡಿಯಾದಿಂದ ಗೇಟ್‌ಪಾಸ್ ಗ್ಯಾರಂಟಿ!
Related image2
Vaibhav Sooryavanshi ಗೆ ಮುಚ್ಚಿತಾ ಟೀಂ ಇಂಡಿಯಾ ಬಾಗಿಲು? ಸೋಲಿನ ಹೊರತಾಗಿಯೂ ಈ ಆಟಗಾರನನ್ನು ಕೊಂಡಾಡಿದ ಶ್ರೇಯಸ್ ಅಯ್ಯರ್!
36
ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಸೇರಿದ ವರುಣ್‌ ಚಕ್ರವರ್ತಿ
Image Credit : Getty

ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಸೇರಿದ ವರುಣ್‌ ಚಕ್ರವರ್ತಿ

ವರುಣ್ ಚಕ್ರವರ್ತಿ ಕೆಲ ತಿಂಗಳ ಹಿಂದಷ್ಟೇ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ವರುಣ್ ಚಕ್ರವರ್ತಿ, ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಸಹ ಆಟಗಾರ ಹರ್ಷಿತ್ ರಾಣಾ ಅವರ ಜತೆ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

46
ರವಿ ಬಿಷ್ಣೋಯ್‌ಗೆ ಮತ್ತೊಂದು ಚಾನ್ಸ್?
Image Credit : bcci

ರವಿ ಬಿಷ್ಣೋಯ್‌ಗೆ ಮತ್ತೊಂದು ಚಾನ್ಸ್?

ಸ್ಪೋರ್ಟ್ಸ್ ಸ್ಟಾರ್ ವರದಿಯ ಪ್ರಕಾರ, ವರುಣ್ ಚಕ್ರವರ್ತಿ ಜಿಂಬಾಬ್ವೆ ಸರಣಿಯಿಂದ ಹೊರಬಿದ್ದರೇ ರವಿ ಬಿಷ್ಣೋಯ್‌ಗೆ ಮತ್ತೊಮ್ಮೆ ಭಾರತ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಅವಕಾಶದಲ್ಲಿ ರವಿ ಬಿಷ್ಣೋಯ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ಅಂದಹಾಗೆ ಈ ಬದಲಾವಣೆಯ ಬಗ್ಗೆ ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

56
ಜಿಂಬಾಬ್ವೆ ಎದುರಿನ ಸರಣಿಗೆ ಹಲವು ಸ್ಟಾರ್ ಆಟಗಾರರಿಗೆ ರೆಸ್ಟ್:
Image Credit : ACC

ಜಿಂಬಾಬ್ವೆ ಎದುರಿನ ಸರಣಿಗೆ ಹಲವು ಸ್ಟಾರ್ ಆಟಗಾರರಿಗೆ ರೆಸ್ಟ್:

ಹೌದು, ಜಿಂಬಾಬ್ವೆ ಎದುರಿನ ಸರಣಿಯಲ್ಲಿ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ ಅವರಂತಹ ಆಟಗಾರರಿಗೆ ರೆಸ್ಟ್ ನೀಡಲಾಗಿದೆ. ಇನ್ನು ಈಗಾಗಲೇ ಪ್ರಕಟಿಸಿರುವ ತಂಡದಲ್ಲಿ ರವಿ ಬಿಷ್ಣೋಯ್ ಅವರನ್ನೂ ತಂಡದಿಂದ ಕೈಬಿಡಲಾಗಿದೆ.

66
ಜಿಂಬಾಬ್ವೆ ಎದುರಿನ ಸರಣಿಗೆ ಭಾರತ ತಂಡ ಹೀಗಿದೆ:
Image Credit : bcci

ಜಿಂಬಾಬ್ವೆ ಎದುರಿನ ಸರಣಿಗೆ ಭಾರತ ತಂಡ ಹೀಗಿದೆ:

ಶ್ರೇಯಸ್ ಅಯ್ಯರ್(ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ(ಉಪನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಶಿವಂ ದುಬೆ, ಸೂರ್ಯಾನ್ಶ್‌ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಾಂಕ್ ಯಾದವ್, ಪ್ರಭ್‌ಸಿಮ್ರನ್ ಸಿಂಗ್(ವಿಕೆಟ್ ಕೀಪರ್).

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಶ್ರೇಯಸ್ ಅಯ್ಯರ್
ಬಿಸಿಸಿಐ

Latest Videos
Recommended Stories
Recommended image1
IND vs ZIM : ಹೊಸ ಕೋಚ್ ನೇಮಕ.. ಪಂದ್ಯ ಸೋತರೆ ಗಂಭೀರ್‌ಗೆ ಬೈಯುವಂತಿಲ್ಲ!
Recommended image2
ಏನೂ ಹೇಳದೇ 'ಕ್ಯಾಪ್ಟನ್' ಟಿ-ಶರ್ಟ್ ಧರಿಸಿ ಅಗರ್ಕರ್-ಗಂಭೀರ್‌ರನ್ನು ಟ್ರೋಲ್ ಮಾಡಿದ ಸೂರ್ಯಕುಮಾರ್ ಯಾದವ್!
Recommended image3
IND vs ENG 5th T20 Highlights: 0-4 ಅಂತರದ ಹೀನಾಯ ಸೋಲು, ಕೋಚ್ ಗಂಭೀರ್‌ಗೆ ಶಿಕ್ಷೆ ಯಾವಾಗ?
Related Stories
Recommended image1
ಮತ್ತೆ ಮತ್ತೆ ಅದೇ ತಪ್ಪು ಮಾಡ್ತಿದ್ದಾರೆ ವೈಭವ್ ಸೂರ್ಯವಂಶಿ! ಈ 3 ತಪ್ಪು ತಿದ್ದಿಕೊಳ್ಳದಿದ್ರೆ, ಟೀಂ ಇಂಡಿಯಾದಿಂದ ಗೇಟ್‌ಪಾಸ್ ಗ್ಯಾರಂಟಿ!
Recommended image2
Vaibhav Sooryavanshi ಗೆ ಮುಚ್ಚಿತಾ ಟೀಂ ಇಂಡಿಯಾ ಬಾಗಿಲು? ಸೋಲಿನ ಹೊರತಾಗಿಯೂ ಈ ಆಟಗಾರನನ್ನು ಕೊಂಡಾಡಿದ ಶ್ರೇಯಸ್ ಅಯ್ಯರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved