ಆಸ್ಟ್ರೇಲಿಯಾ ಸರಣಿಗೂ ಮುನ್ನ ಪತ್ನಿ ಜೊತೆ ರಿಷಿಕೇಶ ಆಶ್ರಮಕ್ಕೆ ಭೇಟಿ ನೀಡಿದ ವಿರಾಟ್ ಕೊಹ್ಲಿ
ಭಾರತ ತಂಡದ ಆಟಗಾರ ವಿರಾಟ್ ಕೊಹ್ಲಿ (Virat Kohli) ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೂ ಮೊದಲು ಪತ್ನಿ ಅನುಷ್ಕಾ ಶರ್ಮ (Anushka Sharma) ಅವರ ಜೊತೆ ರಿಷಿಕೇಶದಲ್ಲಿರುವ ಸ್ವಾಮಿ ದಯಾನಂದ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ತಾಯಿ ಸರೋಜ್ ಕೊಹ್ಲಿ ಕೂಡ ಕಾಣಿಸಿಕೊಂಡರು. ಈ ಸಮಯದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಮತ್ತು ಅವರ ತಾಯಿ ಸರೋಜ್ ಕೊಹ್ಲಿ ಆಶ್ರಮವನ್ನು ತಲುಪಿ ಬ್ರಹ್ಮಲಿನ್ ದಯಾನಂದ ಸರಸ್ವತಿಯ ಸಮಾಧಿಗೆ ಭೇಟಿ ನೀಡಿದರು. ಈ ವೇಳೆ ವಿರಾಟ್ ಕೊಹ್ಲಿ 20 ನಿಮಿಷಗಳ ಕಾಲ ಅಲ್ಲಿಯೇ ಕುಳಿತು ಧ್ಯಾನ ಮಾಡಿದರು.
ಸೆಪ್ಟೆಂಬರ್ 11, 2015 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಈ ಆಶ್ರಮಕ್ಕೆ ಭೇಟಿ ನೀಡಿದದ್ರು. ಅದೇ ಸಮಯದಲ್ಲಿ, ಸೌತ್ ಸೂಪರ್‌ಸ್ಟಾರ್ ರಜನಿಕಾಂತ್ ಸೇರಿ ಅನೇಕ ಸೆಲಬ್ರೆಟಿಗಳು ಇಲ್ಲಿಗೆ ಬೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಆಶ್ರಮದಲ್ಲಿರುವ ಬ್ರಹ್ಮಲಿನ್ ದಯಾನಂದ ಸರಸ್ವತಿ ಅವರ ಸಮಾಧಿಗೆ ಭೇಟಿ ನೀಡಿದ ನಂತರ, ವಿರಾಟ್ ಅನುಷ್ಕಾ ಗಂಗಾ ಘಾಟ್ ತಲುಪಿ ಇಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಂಡರು ಮತ್ತು ನಂತರ ಅವರು ಋಷಿಕೇಶದ ಬಳಿಯ ಯಮಕೇಶ್ವರದ ರೆಸಾರ್ಟ್‌ನಲ್ಲಿ ತಂಗಿದ್ದರು ಎಂದು ಹೇಳಲಾಗುತ್ತಿದೆ.
ಮಂಗಳವಾರ ವಿರಾಟ್ ಕೊಹ್ಲಿ ಮತ್ತು ಅವರ ಕುಟುಂಬವು ರಿಷಿಕೇಶದಲ್ಲಿ ಉಳಿದು, ಈ ಸಮಯದಲ್ಲಿ ಹವನ ಯಾಗದಲ್ಲಿ ಭಾಗವಹಿಸುತ್ತಾರೆ. ಅವರ ಪರವಾಗಿ ಭಂಡಾರವನ್ನು ಸಹ ಆಯೋಜಿಸುತ್ತಾರೆ ಎಂದು ಹೇಳಲಾಗುತ್ತಿದೆ.
ಸೋಮವಾರದಂದು ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಸೂರ್ಯನ ಬೆಳಕಿನಲ್ಲಿ ಪೋಸ್ ನೀಡುತ್ತಿದ್ದಾರೆ. ಅವರ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, 11 ಗಂಟೆಗಳಲ್ಲಿ 47 ಲಕ್ಷಕ್ಕೂ ಹೆಚ್ಚು ಜನರು ಅವರ ಫೋಟೋವನ್ನು ಲೈಕ್ ಮಾಡಿದ್ದಾರೆ.
ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಮಗಳ ಜೊತೆ ವೃಂದಾವನಕ್ಕೆ ಭೇಟಿ ನೀಡಿದರು. ನಂತರ ವಿರಾಟ್ ಕೊಹ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು.
ಫೆಬ್ರವರಿ 9 ರಿಂದ ಮಾರ್ಚ್ 13 ರವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಯೋಜಿಸಲಾಗುತ್ತಿದೆ ಇದಕ್ಕಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಭೇಟಿ ನೀಡಲಿದೆ. ಇತ್ತೀಚಿಗೆ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದರು.