52ನೇ ಏಕದಿನ ಶತಕ ಸಿಡಿಸಿ ಅಪರೂಪದ ದಾಖಲೆ ಬರೆದ ವಿರಾಟ್ ಕೊಹ್ಲಿ!
ವಿರಾಟ್ ಕೊಹ್ಲಿ ರಾಂಚಿ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ಈ ಕ್ಲಾಸಿಕ್ ಇನ್ನಿಂಗ್ಸ್‌ನೊಂದಿಗೆ, ಅವರು ಅತಿ ಹೆಚ್ಚು ಶತಕಗಳ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ, ಸಚಿನ್ ತೆಂಡೂಲ್ಕರ್ ಮತ್ತು ರಿಕಿ ಪಾಂಟಿಂಗ್ ಅವರಂತಹ ದಿಗ್ಗಜರ ದಾಖಲೆಗಳನ್ನು ಮುರಿದಿದ್ದಾರೆ.

ರಾಂಚಿಯಲ್ಲಿ ಕೊಹ್ಲಿ ದಾಖಲೆಗಳ ಸುರಿಮಳೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ರಾಂಚಿಯ ಜೆಎಸ್‌ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ ಹೊಸ ಇತಿಹಾಸ ಬರೆದಿದ್ದಾರೆ.
102 ಎಸೆತಗಳಲ್ಲಿ ಶತಕ ಸಿಡಿಸಿದ ಕೊಹ್ಲಿ
ಈ ಪಂದ್ಯದಲ್ಲಿ ಸೂಪರ್ ಇನ್ನಿಂಗ್ಸ್ ಆಡಿದ ಕೊಹ್ಲಿ, ಏಕದಿನದಲ್ಲಿ 52ನೇ ಶತಕ ದಾಖಲಿಸಿದರು. ಇದಕ್ಕೂ ಮುನ್ನ ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
ದೇಶದಲ್ಲಿ ಅತಿ ಹೆಚ್ಚು 50+ ಸ್ಕೋರ್, ಅಗ್ರಸ್ಥಾನದಲ್ಲಿ ಕೊಹ್ಲಿ
ಭಾರತದ ನೆಲದಲ್ಲಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 50+ ಸ್ಕೋರ್ ಮಾಡಿದ ಬ್ಯಾಟರ್ ಆಗಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಇದು ತವರಿನಲ್ಲಿ ಅವರ 59ನೇ 50+ ಸ್ಕೋರ್ ಆಗಿದೆ. ಈ ಮೂಲಕ ಕೊಹ್ಲಿ ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ (58) ಅವರನ್ನು ಹಿಂದಿಕ್ಕಿದರು.
ಒಂದೇ ಮಾದರಿಯಲ್ಲಿ ಹೆಚ್ಚು ಶತಕ ಅಗ್ರಸ್ಥಾನದಲ್ಲಿ ಕೊಹ್ಲಿ!
ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ಎಂಬ ವಿಶ್ವದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದು ಅವರ ಏಕದಿನ ವೃತ್ತಿಜೀವನದ 52ನೇ ಶತಕವಾಗಿದೆ.
ಪಾಂಟಿಂಗ್, ತೆಂಡೂಲ್ಕರ್ ದಾಖಲೆಗಳು ಉಡೀಸ್
ರಾಂಚಿ ಏಕದಿನ ಪಂದ್ಯದಲ್ಲಿ ಕೊಹ್ಲಿ ಹಲವು ದಾಖಲೆಗಳನ್ನು ಮುರಿದರು. ಮೂರನೇ ಕ್ರಮಾಂಕದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್ ಎಂಬ ಹೊಸ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

