2012ರ ಐಪಿಎಲ್ ಫಲಿತಾಂಶ 2021ರಲ್ಲಿ ಸಂಪೂರ್ಣ ಉಲ್ಟಾ! ಅಚ್ಚರಿಯಾದ್ರೂ ಇದು ಸತ್ಯ..!
ಬೆಂಗಳೂರು: 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಯಾನ್ ಮಾರ್ಗನ್ (Eoin Morgan) ನೇತೃತ್ವದ ಕೋಲ್ಕತ ನೈಟ್ ರೈಡರ್ಸ್ (Kolkata Knight Riders) ತಂಡವನ್ನು ಮಣಿಸುವ ಮೂಲಕ ಎಂ ಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಳೆದ 4 ವರ್ಷಗಳ ಅವಧಿಯಲ್ಲಿ ಚೆನ್ನೈ ತಂಡವು ಎರಡು ಬಾರಿ ಚಾಂಪಿಯನ್ ಹಾಗೂ ಒಮ್ಮೆ ರನ್ನರ್ ಅಪ್ ಸ್ಥಾನ ಪಡೆದಿದೆ. ಕೆಕೆಆರ್ (CSK) ವಿರುದ್ದ ಫೈನಲ್‌ನಲ್ಲಿ ಗೆಲ್ಲುವುದರೊಂದಿಗೆ ಒಂದು ರೀತಿ ಕಾಕತಾಳೀಯ ಸನ್ನೀವೇಷಕ್ಕೆ ಸಾಕ್ಷಿಯಾಗಿದೆ. 2012ರ ಐಪಿಎಲ್‌ನಲ್ಲಿ ಆದ ಫಲಿತಾಂಶ 2021ರಲ್ಲಿ ಸರಿಯಾಗಿ ಉಲ್ಟಾ ಆಗಿದೆ. ಹೇಗೆ ಅದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
2012ರ ಐಪಿಎಲ್ ಆವೃತ್ತಿಯಲ್ಲಿ ಏನಾಗಿತ್ತೋ 2021ರ ಆವೃತ್ತಿಯಲ್ಲಿ ಅದಕ್ಕೆ ಎಲ್ಲವೂ ಉಲ್ಟಾ ಆಗಿದೆ. ಕೆಲ ಅಂಕಿ-ಅಂಶಗಳನ್ನು ಗಮನಿಸಿದರೆ ನಿಮಗೂ ಅಚ್ಚರಿ ಆಗದೆ ಇರುವುದಿಲ್ಲ.
2012ರಲ್ಲಿ ಲೀಗ್ ಹಂತದ ಮುಕ್ತಾಯಕ್ಕೆ ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದರೆ, ಚೆನ್ನೈ 4ನೇ ಸ್ಥಾನ ಪಡೆದಿತ್ತು. 2021ರಲ್ಲಿ ಚೆನ್ನೈ 2ನೇ ಸ್ಥಾನ ಪಡೆದರೆ, ಕೆಕೆಆರ್ 4ನೇ ಸ್ಥಾನ ಪಡೆಯಿತು.
2012ರ ಮೊದಲ ಕ್ವಾಲಿಫೈಯರ್‌ನಲ್ಲಿ ಕೆಕೆಆರ್, ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಗೆದ್ದಿತ್ತು. 2021ರ ಮೊದಲ ಕ್ವಾಲಿಫೈಯರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಿಸಿತು.
2012ರ ಎಲಿಮಿನೇಟರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಗೆ ಬೀರಿತ್ತು. 2021ರ ಎಲಿಮಿನೇಟರ್‌ನಲ್ಲಿ ಕೋಲ್ಕತ ನೈಟ್ ರೈಡರ್ಸ್ ತಂಡವು ಜಯಗಳಿಸಿತು.
2012ರ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಗೆದ್ದು ಫೈನಲ್‌ಗೇರಿತ್ತು. 2021ರ 2ನೇ ಕ್ವಾಲಿಫೈಯರ್‌ನಲ್ಲಿ ಕೆಕೆಆರ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಫೈನಲ್‌ಗೇರಿತು.
2012ರ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದ ಕೋಲ್ಕತ ನೈಟ್ ರೈಡರ್ಸ್ ಚಾಂಪಿಯನ್ ಆಗಿತ್ತು. 2021ರ ಫೈನಲ್‌ನಲ್ಲಿ ಕೆಕೆಆರ್ ವಿರುದ್ಧ ಗೆದ್ದು ಚೆನ್ನೈ ಸೂಪರ್ ಕಿಂಗ್ಸ್ ಪ್ರಶಸ್ತಿ ಎತ್ತಿಹಿಡಿಯಿತು.
(photo source- iplt20.com)
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ ನೈಟ್ ರೈಡರ್ಸ್ ವಿರುದ್ದ 27 ರನ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
सबसे ज्यादा अर्धशतक
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತ್ತು. ಫಾಫ್ ಡು ಪ್ಲೆಸಿಸ್ 86 ರನ್ ಬಾರಿಸಿದರೆ, ಉತ್ತಪ್ಪ 31, ಗಾಯಕ್ವಾಡ್ 32 ಹಾಗೂ ಮೋಯಿನ್ ಅಲಿ ಅಜೇಯ 37 ರನ್ ಚಚ್ಚುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಇನ್ನು ಸವಾಲಿನ ಮೊತ್ತ ಬೆನ್ನತ್ತಿದ ಕೆಕೆಆರ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಶುಭ್‌ಮನ್ ಗಿಲ್(51) ಹಾಗೂ ವೆಂಕಟೇಶ್ ಅಯ್ಯರ್(50) ರನ್ ಬಾರಿಸಿದರಾದರೂ ಆ ಬಳಿಕ ನಾಟಕೀಯ ಕುಸಿತ ಕಂಡ ಇಯಾನ್ ಮಾರ್ಗನ್ ಪಡೆ 165 ರನ್ ಗಳಿಸಲಷ್ಟೇ ಶಕ್ತವಾಯಿತು.
(photo source- iplt20.com)