MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ವಿರಾಟ್ ಕೊಹ್ಲಿ ಟೀಂ ಇಂಡಿಯಾ ಪರ ಮುಂದಿನ ಮ್ಯಾಚ್ ಆಡೋದು ಯಾವಾಗ? ಈ ಡೇಟ್ ನೋಟ್ ಮಾಡ್ಕೊಳ್ಳಿ

ವಿರಾಟ್ ಕೊಹ್ಲಿ ಟೀಂ ಇಂಡಿಯಾ ಪರ ಮುಂದಿನ ಮ್ಯಾಚ್ ಆಡೋದು ಯಾವಾಗ? ಈ ಡೇಟ್ ನೋಟ್ ಮಾಡ್ಕೊಳ್ಳಿ

ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ವಿರಾಟ್ ಕೊಹ್ಲಿ, ಆರ್‌ಸಿಬಿ ತಂಡವು ಎರಡನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಣಕ್ಕಿಳಿಯೋದು ಯಾವಾಗ ಎನ್ನುವ ಕುತೂಹಲಕ್ಕೆ ಉತ್ತರ ಸಿಕ್ಕಿದೆ. 

2 Min read
Author : Naveen Kodase
Published : Jun 02 2026, 02:36 PM IST
Share this Photo Gallery
  • FB
  • TW
  • Linkdin
  • Whatsapp
16
ಆರ್‌ಸಿಬಿ ತಂಡವನ್ನು ಗೆಲ್ಲಿಸಿದ ವಿರಾಟ್ ಕೊಹ್ಲಿ
Image Credit : ANI

ಆರ್‌ಸಿಬಿ ತಂಡವನ್ನು ಗೆಲ್ಲಿಸಿದ ವಿರಾಟ್ ಕೊಹ್ಲಿ

19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗುಜರಾತ್ ಟೈಟಾನ್ಸ್ ಎದುರಿನ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಕೇವಲ 45 ಎಸೆತಗಳಲ್ಲಿ ಅಜೇಯ 75 ರನ್ ಸಿಡಿಸುವ ಮೂಲಕ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಟೀಂ ಇಂಡಿಯಾ ಪರ ಕೊಹ್ಲಿ ಮೈದಾನಕ್ಕಿಳಿಯೋದು ಯಾವಾಗ?
Image Credit : Asianet News

ಟೀಂ ಇಂಡಿಯಾ ಪರ ಕೊಹ್ಲಿ ಮೈದಾನಕ್ಕಿಳಿಯೋದು ಯಾವಾಗ?

ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ 16 ಪಂದ್ಯಗಳನ್ನಾಡಿ 675 ರನ್ ಸಿಡಿಸುವ ಮೂಲಕ ತಂಡದ ಪರ ಗರಿಷ್ಠ ರನ್ ಸರದಾರರಾಗಿ ಹೊರಹೊಮ್ಮಿದರು. ಇದೀಗ ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ಜೆರ್ಸಿಯಲ್ಲಿ ಮೈದಾನಕ್ಕಿಳಿಯುವುದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ. ಇದಕ್ಕೆ ಇದೀಗ ಉತ್ತರ ಸಿಕ್ಕಿದೆ.

Related Articles

Related image1
IPL 2026 ಟೂರ್ನಿಯ ಸರ್ವಶ್ರೇಷ್ಠ ತಂಡ ಪ್ರಕಟ; ಸಾಯಿ ಸುದರ್ಶನ್, ಶುಭ್‌ಮನ್ ಗಿಲ್‌ಗಿಲ್ಲ ಸ್ಥಾನ!
Related image2
ಇಷ್ಟು ಸಖತ್‌ ಆಗಿ ಕ್ರಿಕೆಟ್‌ ಆಡ್ತಿದ್ರೂ, ಬೆಂಗಳೂರಿನಲ್ಲಿ ತನಗಿರೋ ಕಾಯಿಲೆ ಬಗ್ಗೆ ಹೇಳಿದ Virat Kohli!
36
ಆಫ್ಘಾನಿಸ್ತಾನ ಎದುರು ವಿರಾಟ್ ಕೊಹ್ಲಿ ಮೈದಾನಕ್ಕೆ
Image Credit : Getty

ಆಫ್ಘಾನಿಸ್ತಾನ ಎದುರು ವಿರಾಟ್ ಕೊಹ್ಲಿ ಮೈದಾನಕ್ಕೆ

ಈಗಾಗಲೇ ಅಂತಾರಾಷ್ಟ್ರೀಯ ಟಿ20 ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ, ಸದ್ಯ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಮಾತ್ರ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೊಹ್ಲಿ ಇದೀಗ ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

46
ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಯಾವಾಗ?
Image Credit : stockPhoto

ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಯಾವಾಗ?

ಶುಭ್‌ಮನ್ ಗಿಲ್ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇದೇ ಜೂನ್ 13ರಿಂದ ಆಫ್ಘಾನಿಸ್ತಾನ ಎದುರು ಏಕದಿನ ಸರಣಿಯನ್ನಾಡಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿ ತೊಟ್ಟು ಮೈದಾನಕ್ಕಿಳಿಯಲಿದ್ದಾರೆ. ಈ ಏಕದಿನ ಸರಣಿಗೂ ಮೊದಲು ಭಾರತ ತಂಡವು, ಆಫ್ಘಾನಿಸ್ತಾನ ಎದುರು ಏಕೈಕ ಟೆಸ್ಟ್ ಪಂದ್ಯವನ್ನಾಡಲಿದೆ.

56
ಭಾರತ-ಆಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ:
Image Credit : Asianet News

ಭಾರತ-ಆಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ:

ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜೂನ್ 13ರಿಂದ ಆರಂಭವಾಗಲಿದೆ. ಜೂನ್ 13ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಧರ್ಮಶಾಲಾ ಆತಿಥ್ಯ ವಹಿಸಿದೆ. ಇನ್ನು ಜೂನ್ 17ರಂದು ಲಖನೌದಲ್ಲಿ ಹಾಗೂ ಜೂನ್ 20ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ. ಈ ಮೂರು ಪಂದ್ಯಗಳಲ್ಲೂ ಕೊಹ್ಲಿ ಮೈದಾನಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

66
ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೆ ಭಾರತ ತಂಡ:
Image Credit : Team India\BCCI

ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೆ ಭಾರತ ತಂಡ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್(ಉಪನಾಯಕ), ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ, ಪ್ರಿನ್ಸ್ ಯಾದವ್, ಹರ್ಷ್ ದುಬೆ, ಗುರ್ನೂರ್ ಬ್ರಾರ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ

Latest Videos
Recommended Stories
Recommended image1
IPL 2026: ಈ ಆಟಗಾರನ ಒಂದು ರನ್‌ಗೆ ಫ್ರಾಂಚೈಸಿ ಖರ್ಚು ಮಾಡಿದ್ದು ₹86.66 ಲಕ್ಷ..! ಹರಾಜಿನಲ್ಲೇ ದೊಡ್ಡ ಎಡವಟ್ಟು
Recommended image2
ವಿರಾಟ್ ಕೊಹ್ಲಿಗೆ ಸವಾಲು ಹಾಕಿದ ಟಿ20 ದಿಗ್ಗಜರು; ಅತಿ ಹೆಚ್ಚು ರನ್ ಬಾರಿಸಿದವರು ಯಾರು?
Recommended image3
IPL 2026 ಟೂರ್ನಿಯ ಸರ್ವಶ್ರೇಷ್ಠ ತಂಡ ಪ್ರಕಟ; ಸಾಯಿ ಸುದರ್ಶನ್, ಶುಭ್‌ಮನ್ ಗಿಲ್‌ಗಿಲ್ಲ ಸ್ಥಾನ!
Related Stories
Recommended image1
IPL 2026 ಟೂರ್ನಿಯ ಸರ್ವಶ್ರೇಷ್ಠ ತಂಡ ಪ್ರಕಟ; ಸಾಯಿ ಸುದರ್ಶನ್, ಶುಭ್‌ಮನ್ ಗಿಲ್‌ಗಿಲ್ಲ ಸ್ಥಾನ!
Recommended image2
ಇಷ್ಟು ಸಖತ್‌ ಆಗಿ ಕ್ರಿಕೆಟ್‌ ಆಡ್ತಿದ್ರೂ, ಬೆಂಗಳೂರಿನಲ್ಲಿ ತನಗಿರೋ ಕಾಯಿಲೆ ಬಗ್ಗೆ ಹೇಳಿದ Virat Kohli!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved