- Home
- Sports
- Cricket
- ರಿಂಕು ಸಿಂಗ್ ಇದ್ದರೂ ಸಂಜು ಸ್ಯಾಮ್ಸನ್‌ಗೆ ಚಾನ್ಸ್ ಕೊಟ್ಟಿದ್ದೇಕೆ? ಇಲ್ಲಿದೆ 4 ಇಂಟ್ರೆಸ್ಟಿಂಗ್ ಕಾರಣ
ರಿಂಕು ಸಿಂಗ್ ಇದ್ದರೂ ಸಂಜು ಸ್ಯಾಮ್ಸನ್‌ಗೆ ಚಾನ್ಸ್ ಕೊಟ್ಟಿದ್ದೇಕೆ? ಇಲ್ಲಿದೆ 4 ಇಂಟ್ರೆಸ್ಟಿಂಗ್ ಕಾರಣ
ತಂದೆಯ ನಿಧನದಿಂದಾಗಿ ರಿಂಕು ಸಿಂಗ್ ಜಿಂಬಾಬ್ವೆ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಆ ಜಾಗದಲ್ಲಿ ಬಂದ ಸಂಜು ಸ್ಯಾಮ್ಸನ್‌ಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಆದರೂ, ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೆ ರಿಂಕು ಲಭ್ಯವಿದ್ದರೂ ಸಂಜು ಅವರನ್ನೇ ಯಾಕೆ ಆಡಿಸಲಾಯಿತು ಗೊತ್ತಾ?

ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ ಸಂಜು ಸ್ಯಾಮ್ಸನ್
ಟಿ20 ವಿಶ್ವಕಪ್ 2026ರಲ್ಲಿ ಟೀಂ ಇಂಡಿಯಾ ಮತ್ತೊಂದು ಅದ್ಭುತ ಜಯ ಸಾಧಿಸಿದೆ. ಸೂಪರ್-8 ಹಂತವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನೊಂದಿಗೆ ಆರಂಭಿಸಿದರೂ, ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಮುಗಿಸಿತು. ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ತಂಡಗಳನ್ನು ಸತತವಾಗಿ ಸೋಲಿಸಿ, ನೆಟ್ ರನ್ ರೇಟ್ ಅಥವಾ ಬೇರೆ ಯಾವುದೇ ಲೆಕ್ಕಾಚಾರದ ಹಂಗಿಲ್ಲದೆ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಸೂಪರ್ 8 ಪಯಣದಲ್ಲಿ ಸಂಜು ಸ್ಯಾಮ್ಸನ್ ತಂಡಕ್ಕೆ ಬಂದಿದ್ದು ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಯಿತು. ಸಂಜು ಇಲ್ಲದಿದ್ದರೆ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಅವರು ಅಬ್ಬರಿಸಿದರು.
ರಿಂಕು ಸಿಂಗ್ ಬದಲು ಸಂಜುಗೆ ಮಣೆ ಹಾಕಿದ್ದೇಕೆ?
ತಂದೆಯ ನಿಧನದಿಂದಾಗಿ ರಿಂಕು ಸಿಂಗ್ ಜಿಂಬಾಬ್ವೆ ಪಂದ್ಯಕ್ಕೆ ಅಲಭ್ಯರಾಗಿದ್ದರು. ಅವರ ಜಾಗದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿತ್ತು. ಆದರೆ, ಸಂಜು ಕೇವಲ 24 ರನ್ ಗಳಿಸಿ ನಿರೀಕ್ಷೆ ತಲುಪಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೆ ರಿಂಕು ಲಭ್ಯವಿದ್ದರೂ, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ಗೌತಮ್ ಗಂಭೀರ್ ಸಂಜುಗೆ ಮತ್ತೊಂದು ಅವಕಾಶ ನೀಡಿದರು. ಈ ನಿರ್ಧಾರವೇ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿತು. ನಾಯಕ ಹಾಗೂ ಕೋಚ್ ಇಟ್ಟ ನಂಬಿಕೆ ಉಳಿಸಿಕೊಳ್ಳುವಲ್ಲಿ ಸಂಜು ಯಶಸ್ವಿಯಾದರು.
ಓಪನಿಂಗ್ ದಾಖಲೆ.
ಸೂಪರ್ ವಿಕೆಟ್ ಕೀಪರ್
ಈಡನ್ ಗಾರ್ಡನ್ ಕಿಂಗ್ ಸಂಜು
ಸ್ಪಿನ್ನರ್‌ಗಳೆದುರು ಉತ್ತಮ ಟ್ರ್ಯಾಕ್ ರೆಕಾರ್ಡ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
