10 ವರ್ಷಗಳ ವಿರಾಟ್ ಕೊಹ್ಲಿಯ ದಾಖಲೆಯನ್ನು ಕೇವಲ 3 ವರ್ಷದಲ್ಲೇ ಬ್ರೇಕ್ ಮಾಡಲು ಸೂರ್ಯಕುಮಾರ್ ರೆಡಿ
ಸೂರ್ಯಕುಮಾರ್ ಯಾದವ್ ಕೇವಲ 3 ವರ್ಷಗಳಲ್ಲಿ ವಿರಾಟ್ ಕೊಹ್ಲಿಯವರ 10 ವರ್ಷಗಳ ಟಿ20 ದಾಖಲೆಯನ್ನು ಮುರಿಯಲು ಸಜ್ಜಾಗಿದ್ದಾರೆ
ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ನಂತರ ಹೆಚ್ಚು ಜನಪ್ರಿಯತೆ ಗಳಿಸಿದವರು ವಿರಾಟ್ ಕೊಹ್ಲಿ.ಮಾಜಿ ನಾಯಕ ಕೊಹ್ಲಿಯನ್ನು ರನ್ ಮೆಷಿನ್ ಎಂದೇ ಕರೆಯುತ್ತಾರೆ. ಎಲ್ಲಾ ದಾಖಲೆ ಪುಸ್ತಕಗಳಲ್ಲೂ ವಿರಾಟ್ ಕೊಹ್ಲಿಯವರ ಹೆಸರು ಇದ್ದೇ ಇರುತ್ತದೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 27000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಭಾರತಕ್ಕೆ ಬಂದ ಬಾಂಗ್ಲಾದೇಶ ತಂಡ 2 ಟೆಸ್ಟ್ ಪಂದ್ಯಗಳಲ್ಲಿ ಸೋತು, ಈಗ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದೆ. ಈ ಎರಡು ತಂಡಗಳ ನಡುವಿನ ಮೊದಲ ಟಿ20 ಪಂದ್ಯವು ಜುಲೈ 6 ರಂದು ಗುವಾಹಟಿಯಲ್ಲಿ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.
ವಿರಾಟ್ ಕೊಹ್ಲಿಯವರ ದಾಖಲೆಯನ್ನು ಮುರಿಯುವ ಸಾಮರ್ಥ್ಯವುಳ್ಳವರು ಸೂರ್ಯಕುಮಾರ್ ಯಾದವ್. ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ 10 ವರ್ಷಗಳಲ್ಲಿ ನಿರ್ಮಿಸಿದ ದಾಖಲೆಯನ್ನು ಕೇವಲ 3 ವರ್ಷಗಳಲ್ಲಿ ಸೂರ್ಯಕುಮಾರ್ ಯಾದವ್ ಮುರಿಯಲಿದ್ದಾರೆ.
30ನೇ ವಯಸ್ಸಿನಲ್ಲಿ ಪದಾರ್ಪಣೆ: ಸೂರ್ಯಕುಮಾರ್ ಯಾದವ್ ಅವರ ಪ್ರತಿಭೆಯನ್ನು ಯಾರೂ ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಈಗ ಟಿ20 ಕಿಂಗ್ ಎಂದೇ ಕರೆಯುತ್ತಾರೆ. ಇಷ್ಟು ವರ್ಷಗಳ ನಂತರ ಆಯ್ಕೆದಾರರು ಸೂರ್ಯಕುಮಾರ್ ಯಾದವ್ ಅವರ ಪ್ರತಿಭೆಯನ್ನು ಗುರುತಿಸಿದ್ದಾರೆ. ಹಲವು ಏರಿಳಿತಗಳ ನಂತರ 30ನೇ ವಯಸ್ಸಿನಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸ್ಥಿರ ಪ್ರದರ್ಶನ ನೀಡಲು ವಿಫಲರಾಗಿದ್ದರೂ, ಟಿ20 ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ.
ಪಂದ್ಯಶ್ರೇಷ್ಠ ಪ್ರಶಸ್ತಿ ಸಾಧನೆ: ವಿರಾಟ್ ಕೊಹ್ಲಿಯವರ ವಿಶ್ವ ದಾಖಲೆಯನ್ನು 3 ವರ್ಷಗಳಲ್ಲಿ ಸೂರ್ಯಕುಮಾರ್ ಯಾದವ್ ಬ್ರೇಕ್ ಮಾಡಲು ರೆಡಿಯಾಗಿದ್ದಾರೆ. ವಿರಾಟ್ ಕೊಹ್ಲಿ ಕಳೆದ 10 ವರ್ಷಗಳಲ್ಲಿ 125 ಟಿ20 ಪಂದ್ಯಗಳನ್ನು ಆಡಿ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಆದರೆ, ಈವರೆಗೆ 71 ಟಿ20 ಪಂದ್ಯಗಳನ್ನು ಆಡಿರುವ ಸೂರ್ಯಕುಮಾರ್ ಯಾದವ್ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇನ್ನೂ ಒಂದು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸೂರ್ಯಕುಮಾರ್ ಯಾದವ್ ನಿಜವಾದ ಟಿ20 ಕಿಂಗ್. ಮುಂದಿನ ದಿನಗಳಲ್ಲಿ ದಾಖಲೆ ಪುಸ್ತಕಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ಹೆಸರು ಇರಲಿದೆ.
ಮುಂದಿನ ಪ್ರತಿಯೊಂದು ಟಿ20 ಸರಣಿಯಲ್ಲೂ ಸೂರ್ಯಕುಮಾರ್ ಯಾದವ್ ನಾಯಕರಾಗಿ ಗೆಲುವು ಸಾಧಿಸಿದರೆ, 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಟಿ20 ಸರಣಿಯಲ್ಲಿ ಗೆಲುವಿನತ್ತ ಮುನ್ನಡೆಸಿದ್ದರು.
ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲಲು ಸೂರ್ಯಕುಮಾರ್ ಯಾದವ್ ಕೂಡ ಒಂದು ಕಾರಣ. ಹೇಗೆಂದರೆ, ಡೇವಿಡ್ ಮಿಲ್ಲರ್ ಕ್ಯಾಚ್ ಅನ್ನು ಸೂರ್ಯಕುಮಾರ್ ಯಾದವ್ ಬಿಟ್ಟಿದ್ದರೆ, ಚೆಂಡು ಸಿಕ್ಸರ್‌ಗೆ ಹೋಗುತ್ತಿತ್ತು. ಮುಂದಿನ ಎಸೆತದಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿರುತ್ತಿತ್ತು. ಆದರೆ, ಹಾಗೇನೂ ಆಗಲಿಲ್ಲ.