RCB ಹಾಗೂ ಡೆಲ್ಲಿಗೆ ಅತಿದೊಡ್ಡ ಶಾಕ್; ಟೂರ್ನಿ ಆರಂಭಕ್ಕೆ 10 ದಿನಗಳಿರುವಾಗಲೇ ಔಟ್!
ಬೆಂಗಳೂರು:ಬಹುನಿರೀಕ್ಷಿತ ನಾಲ್ಕನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ್ತಿಯರಿಬ್ಬರು ಟೂರ್ನಿಯಿಂದ ಹೊರಬಿದ್ದಿದ್ದಾರೆ.

WPL ಟೂರ್ನಿಗೂ ಮುನ್ನ ಆರ್‌ಸಿಬಿ-ಡೆಲ್ಲಿಗೆ ಬಿಗ್ ಶಾಕ್!
2026ನೇ ಸಾಲಿನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಬಾಕಿ ಉಳಿದಿವೆ. ಮುಂಬರುವ ಜನವರಿ 09ರಿಂದ ಈ ಟೂರ್ನಿಗೆ ಚಾಲನೆ ಸಿಗಲಿದೆ. ಹೀಗಿರುವಾಗಲೇ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.
ಟೂರ್ನಿಯಿಂದ ಪೆರ್ರಿ-ಸದರ್‌ಲೆಂಡ್ ಹೊರಗೆ
ನಾಲ್ಕನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಆರ್‌ಸಿಬಿಯ ಸ್ಟಾರ್ ಆಟಗಾರ್ತಿ ಎಲೈಸಿ ಪೆರ್ರಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನಾಬೆಲ್ಲಾ ಸದರ್‌ಲೆಂಡ್ ಈ ಇಬ್ಬರು ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ.
ಎರಡೂ ತಂಡಕ್ಕೂ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ
ಆಸ್ಟ್ರೇಲಿಯಾ ಮೂಲದ ಸ್ಟಾರ್ ಆಲ್ರೌಂಡರ್‌ಗಳಾದ ಎಲೈಸಿ ಪೆರ್ರಿ ಹಾಗೂ ಅನಾಬೆಲ್ಲಾ ಸದರ್‌ಲೆಂಡ್ ಅವರ ಅನುಪಸ್ಥಿತಿ ಮುಂಬರುವ WPL ಟೂರ್ನಿಯಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.
ವೈಯುಕ್ತಿಕ ಕಾರಣಗಳಿಂದಾಗಿ WPL ಟೂರ್ನಿಯಿಂದ ಔಟ್
ಅಂದಹಾಗೆ ಈ ಇಬ್ಬರು ಆಟಗಾರ್ತಿಯರು ವೈಯುಕ್ತಿಕ ಕಾರಣಗಳಿಂದಾಗಿ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ಪರ ಮಿಂಚಿದ್ದ ಸದರ್‌ಲೆಂಡ್
ಸದರ್‌ಲೆಂಡ್ ಕಳೆದ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 9 ವಿಕೆಟ್ ಹಾಗೂ 95 ರನ್ ಸಿಡಿಸಿದ್ದರು. ಹೀಗಾಗಿ ಡೆಲ್ಲಿ ಫ್ರಾಂಚೈಸಿ ಸದರ್‌ಲೆಂಡ್ ಅವರನ್ನು ರೀಟೈನ್ ಮಾಡಿಕೊಂಡಿತ್ತು.
WPL ಎರಡನೇ ಸೀಸನ್‌ನಲ್ಲಿ ಪೆರ್ರಿ ಗರಿಷ್ಠ ರನ್ ಸಾಧನೆ
ಎರಡನೇ ಆವೃತ್ತಿಯ WPL ಟೂರ್ನಿಯಲ್ಲಿ ಪೆರ್ರಿ ಗರಿಷ್ಠ ರನ್ ಬಾರಿಸಿದ ಆಟಗಾರ್ತಿ ಎನಿಸಿಕೊಂಡಿದ್ದರು.
ಪೆರ್ರಿ ಸೇರಿ ನಾಲ್ವರನ್ನು ರೀಟೈನ್ ಮಾಡಿಕೊಂಡಿದ್ದ ಆರ್‌ಸಿಬಿ
WPL ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಫ್ರಾಂಚೈಸಿಯು ಎಲೈಸಿ ಪೆರ್ರಿ ಸೇರಿದಂತೆ ಸ್ಮೃತಿ ಮಂಧನಾ, ರಿಚಾ ಘೋಷ್ ಹಾಗೂ ಶ್ರೇಯಾಂಕ ಪಾಟೀಲ್ ಅವರನ್ನು ರೀಟೈನ್ ಮಾಡಿಕೊಂಡಿತ್ತು.
ಬದಲಿ ಆಟಗಾರ್ತಿಯರ ನೇಮಕ
ಇದೀಗ ಆರ್‌ಸಿಬಿ ಫ್ರಾಂಚೈಸಿಯು ಪೆರ್ರಿ ಬದಲಿಗೆ ಸಯಾಲಿ ಸತ್ಗೆರೆ ಹಾಗೂ ಡೆಲ್ಲಿ ಫ್ರಾಂಚೈಸಿಯು ಸದರ್‌ಲೆಂಡ್ ಬದಲಿಗೆ ಆಸೀಸ್ ಮೂಲದ ಲೆಗ್ ಸ್ಪಿನ್ನರ್ ಅಲಾನಾ ಕಿಂಗ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

