- Home
- Sports
- Cricket
- WPL ಸತತ 5 ಪಂದ್ಯ ಗೆದ್ದು ಪ್ಲೇ-ಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ! ಇನ್ನೊಂದು ಕಪ್ ನಮ್ದೇ ಎಂದ ಫ್ಯಾನ್ಸ್
WPL ಸತತ 5 ಪಂದ್ಯ ಗೆದ್ದು ಪ್ಲೇ-ಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ! ಇನ್ನೊಂದು ಕಪ್ ನಮ್ದೇ ಎಂದ ಫ್ಯಾನ್ಸ್
ವಡೋದರಾ: ನಾಲ್ಕನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಅಜೇಯವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಇದರ ಬೆನ್ನಲ್ಲೇ ಆರ್‌ಸಿಬಿ ಫ್ಯಾನ್ಸ್ ಇನ್ನೊಂದು ಸಲ ಕಪ್ ನಮ್ದೇ ಎನ್ನುತ್ತಿದ್ದಾರೆ.

ಆರ್‌ಸಿಬಿ ಪ್ಲೇ ಆಫ್ ಸ್ಥಾನ ಕನ್ಫರ್ಮ್
ಮಾಜಿ ಚಾಂಪಿಯನ್ ಆರ್‌ಸಿಬಿ ತಂಡ ಈ ಬಾರಿ ಡಬ್ಲ್ಯುಪಿಎಲ್‌ನಲ್ಲಿ ಸತತ 5ನೇ ಗೆಲುವು ದಾಖಲಿಸಿದ್ದು, ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಗುಜರಾತ್ 5 ಪಂದ್ಯಗಳಲ್ಲಿ 3ನೇ ಸೋಲನುಭವಿಸಿದೆ.
ಆರ್‌ಸಿಬಿಗೆ ಆರಂಭಿಕ ಆಘಾತ
ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 6 ವಿಕೆಟ್‌ಗೆ 178 ರನ್ ಕಲೆಹಾಕಿತು. 9 ರನ್‌ಗೆ 2 ವಿಕೆಟ್ ಕಳೆದುಕೊಂಡರೂ ಬಳಿಕ ತಂಡ ಚೇತರಿಸಿಕೊಂಡಿತು. ಗೌತಮಿ ನಾಯ್ಕ್ 55 ಎಸೆತಕ್ಕೆ 73 ರನ್ ಸಿಡಿಸಿದರೆ ನಾಯಕಿ ಸ್ಮೃತಿ ಮಂಧನಾ 26, ರಿಚಾ ಘೋಷ್ 27 ರನ್ ಕೊಡುಗೆ ನೀಡಿದರು.
ಆರ್‌ಸಿಬಿ ಸಂಘಟಿತ ಬೌಲಿಂಗ್ ಪ್ರದರ್ಶನ
ದೊಡ್ಡ ಗುರಿ ಬೆನ್ನತ್ತಿದ ಗುಜರಾತ್ 8 ವಿಕೆಟ್ ನಷ್ಟದಲ್ಲಿ 111 ರನ್ ಗಳಿಸಿ ಸೋಲೊಪ್ಪಿಕೊಂಡಿತು. ನಾಯಕಿ ಆ್ಯಶ್ಲೆ ಗಾರ್ಡ್ನರ್(54 ರನ್) ಏಕಾಂಗಿ ಹೋರಾಟ ತಂಡಕ್ಕೆ ಗೆಲುವು ತಂದುಕೊಡಲಿಲ್ಲ. ಸಯಾಲಿ ಸತ್ಗಾರೆ 3, ನ್ಯಾಡಿನ್ ಡೆ ಕ್ಲರ್ಕ್ 2 ವಿಕೆಟ್ ಪಡೆದರು.
ಸತತ ಐದು ಪಂದ್ಯ ಗೆದ್ದ ಎರಡನೇ ತಂಡ ಆರ್‌ಸಿಬಿ
WPL ಇತಿಹಾಸದಲ್ಲಿ ಸತತ ಐದು ಪಂದ್ಯಗಳನ್ನು ಗೆದ್ದ ಎರಡನೇ ತಂಡ ಎನ್ನುವ ಕೀರ್ತಿಗೆ ಆರ್‌ಸಿಬಿ ಪಾತ್ರವಾಗಿದೆ. ಈ ಮೊದಲು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು 2023ರ WPLನಲ್ಲಿ ಸತತ 5 ಪಂದ್ಯಗಳನ್ನು ಗೆದ್ದಿತ್ತು. ಆ ದಾಖಲೆಯನ್ನು ಆರ್‌ಸಿಬಿ ಸರಿಗಟ್ಟಿದೆ.
ಇನ್ನೊಂದು ಸಲ ಕಪ್ ನಮ್ದೇ?
2024ರಲ್ಲಿ ನಡೆದ ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಸದ್ಯದ ಆರ್‌ಸಿಬಿ ತಂಡದ ಪ್ರದರ್ಶನ ಗಮನಿಸಿದ್ರೆ ಮತ್ತೊಂದು ಕಪ್ ನಮ್ದೇ ಎನ್ನುತ್ತಿದ್ದಾರೆ ಆರ್‌ಸಿಬಿ ಫ್ಯಾನ್ಸ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
