MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಮುಂಬೈ ಇಂಡಿಯನ್ಸ್‌ಗೆ ಬರ್ತೀನಿ, ಆದರೆ ಒಂದು ಕಂಡೀಷನ್! ಯಶಸ್ವಿ ಜೈಸ್ವಾಲ್ ಬೇಡಿಕೆಯಿಂದ ನೀತಾ ಅಂಬಾನಿಗೆ ಹೊಸ ತಲೆನೋವು

ಮುಂಬೈ ಇಂಡಿಯನ್ಸ್‌ಗೆ ಬರ್ತೀನಿ, ಆದರೆ ಒಂದು ಕಂಡೀಷನ್! ಯಶಸ್ವಿ ಜೈಸ್ವಾಲ್ ಬೇಡಿಕೆಯಿಂದ ನೀತಾ ಅಂಬಾನಿಗೆ ಹೊಸ ತಲೆನೋವು

ಬೆಂಗಳೂರು: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಟ್ರೇಡಿಂಗ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮುಂಬೈ ಫ್ರಾಂಚೈಸಿ ಯಶಸ್ವಿ ಜೈಸ್ವಾಲ್‌ಗೆ ಗಾಳ ಹಾಕಿದೆ ಎಂದು ವರದಿಯಾದ ಬೆನ್ನಲ್ಲೇ ಜೈಸ್ವಾಲ್ ಮುಂಬೈ ಬಳಿಕ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ವರದಿಯಾಗಿದೆ.

2 Min read
Author : Naveen Kodase
Published : Jun 22 2026, 02:33 PM IST
Share this Photo Gallery
  • FB
  • TW
  • Linkdin
  • Whatsapp
16
ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ನೀರಸ ಪ್ರದರ್ಶನ
Image Credit : ANI

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ನೀರಸ ಪ್ರದರ್ಶನ

19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4 ಗೆಲುವು ಹಾಗೂ 10 ಸೋಲು ಸಹಿತ ಕೇವಲ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ತನ್ನ ಅಭಿಯಾನ ಮುಗಿಸಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್‌ ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ?
Image Credit : ANI

ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್‌ ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ?

ಹಾರ್ದಿಕ್ ಪಾಂಡ್ಯ ಈಗಾಗಲೇ ಮುಂಬೈ ಇಂಡಿಯನ್ಸ್ ತಂಡದಿಂದ ದೂರವಾಗಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ತಂಡ ತೊರೆದರೆ ತಮಗೆ ನಾಯಕತ್ವ ಸಿಗಲಿದೆ ಎಂದು ಕನಸು ಕಾಣುತ್ತಿದ್ದ ಸೂರ್ಯಕುಮಾರ್ ಯಾದವ್‌ಗೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಶಾಕ್ ನೀಡಲು ರೆಡಿಯಾಗಿದೆ. ಯಾಕೆಂದರೆ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಭಾರತ ಟಿ20 ತಂಡದ ಉಪನಾಯಕ ತಿಲಕ್ ವರ್ಮಾಗೆ ನಾಯಕತ್ವ ಪಟ್ಟ ಕಟ್ಟಲು ಮುಂಬೈ ಇಂಡಿಯನ್ಸ್ ಓನರ್ ನೀತಾ ಅಂಬಾನಿ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಕೂಡಾ ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ.

Related Articles

Related image1
ಅದೊಂದು ಕಾರಣಕ್ಕಾಗಿ ಐಪಿಎಲ್ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾಗಿದ್ದ ಹಾರ್ದಿಕ್ ಪಾಂಡ್ಯ..!
Related image2
ವಿರಾಟ್ ಕೊಹ್ಲಿ ಇನ್ನೆಷ್ಟು ಐಪಿಎಲ್ ಟೂರ್ನಿ ಆಡ್ತಾರೆ? ಕೊನೆಗೂ ಬೆಂಗಳೂರು ಫ್ಯಾನ್ಸ್‌ಗೆ ಸಿಹಿ ಸುದ್ದಿ ಕೊಟ್ಟ RCB CEO
36
ಕಳೆದ ಬಾರಿಯೇ ಜೈಸ್ವಾಲ್‌ಗೆ ಗಾಳ ಹಾಕಿದ್ದ ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್
Image Credit : Getty

ಕಳೆದ ಬಾರಿಯೇ ಜೈಸ್ವಾಲ್‌ಗೆ ಗಾಳ ಹಾಕಿದ್ದ ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್

ಇನ್ನು ಇದೆಲ್ಲದರ ನಡುವೆ ಕಳೆದ ವರ್ಷವೇ ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್, ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಕರೆತರಲು ಮುಂದಾಗಿತ್ತು. ಆದರೆ ಯಶಸ್ವಿ ಜೈಸ್ವಾಲ್, ಮುಂಬೈ ಇಂಡಿಯನ್ಸ್ ಟ್ರೇಡ್‌ ಡೀಲ್ ಅನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು ಎನ್ನಲಾಗುತ್ತಿದೆ.

46
ಕಳೆದ ಬಾರಿ ಜೈಸ್ವಾಲ್‌ಗೆ ಮುಖಭಂಗ
Image Credit : ANI

ಕಳೆದ ಬಾರಿ ಜೈಸ್ವಾಲ್‌ಗೆ ಮುಖಭಂಗ

ಹೌದು, ಯಾಕೆಂದರೆ ಸಂಜು ಸ್ಯಾಮ್ಸನ್, ರಾಜಸ್ಥಾನ ರಾಯಲ್ಸ್ ತಂಡ ತೊರೆಯುವುದು ಬಹುತೇಕ ಕನ್ಫರ್ಮ್ ಆಗಿರುವುದರಿಂದ ಜೈಸ್ವಾಲ್, ತಮಗೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವ ಸಿಗಬಹುದು ಎಂದುಕೊಂಡಿದ್ದರು. ಆದರೆ 19ನೇ ಸೀಸನ್‌ ಐಪಿಎಲ್ ಟೂರ್ನಿಗೂ ಮುನ್ನ ರಾಜಸ್ಥಾನ ರಾಯಲ್ಸ್ ಮ್ಯಾನೇಜ್‌ಮೆಂಟ್, ರಿಯಾನ್ ಪರಾಗ್‌ಗೆ ನಾಯಕತ್ವ ಪಟ್ಟ ಕಟ್ಟಿತು. ಹೀಗಾಗಿ ಜೈಸ್ವಾಲ್‌ಗೆ ದೊಡ್ಡ ಮುಖಭಂಗವಾಗಿತ್ತು.

56
ಮುಂಬೈ ಇಂಡಿಯನ್ಸ್ ನಾಯಕತ್ವದ ಡಿಮ್ಯಾಂಡ್ ಇಟ್ಟ ಜೈಸ್ವಾಲ್
Image Credit : ANI

ಮುಂಬೈ ಇಂಡಿಯನ್ಸ್ ನಾಯಕತ್ವದ ಡಿಮ್ಯಾಂಡ್ ಇಟ್ಟ ಜೈಸ್ವಾಲ್

ಇದೀಗ ಯಶಸ್ವಿ ಜೈಸ್ವಾಲ್ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಳ್ಳಲು ರೆಡಿಯಿರುವುದಾಗಿ ಹೇಳಿದ್ದಾರೆ. ಆದರೆ ತಾವು ಮುಂಬೈ ಇಂಡಿಯನ್ಸ್ ತಂಡಕ್ಕೆ ಬರಬೇಕಿದ್ದರೇ ನನಗೆ ನಾಯಕತ್ವ ಕೊಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ವರದಿಯಾಗಿದೆ.

66
ಇಕ್ಕಟ್ಟಿಗೆ ಸಿಲುಕಿದ್ರಾ ನೀತಾ ಅಂಬಾನಿ
Image Credit : Social Media

ಇಕ್ಕಟ್ಟಿಗೆ ಸಿಲುಕಿದ್ರಾ ನೀತಾ ಅಂಬಾನಿ

ಈಗಾಗಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಭವಿಷ್ಯದ ತಂಡವನ್ನು ಗಮನದಲ್ಲಿಟ್ಟುಕೊಂಡು ತಿಲಕ್ ವರ್ಮಾಗೆ ನಾಯಕತ್ವ ನೀಡಲು ಮುಂದಾಗಿತ್ತು. ಜೈಸ್ವಾಲ್ ಅವರ ಈ ಕಂಡೀಷನ್, ನೀತಾ ಅಂಬಾನಿಯನ್ನು ಇಕ್ಕಟ್ಟಿಗೆ ಸಿಲುಕಿಸಿರುವುದಂತೂ ಸುಳ್ಳಲ್ಲ. ಮುಂಬರುವ ದಿನಗಳಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಮುಂಬೈ ಇಂಡಿಯನ್ಸ್
ನೀತಾ ಅಂಬಾನಿ

Latest Videos
Recommended Stories
Recommended image1
ಸುಂದರಿಯ ಪ್ರೀತಿಯಲ್ಲಿ ಬಿದ್ದ ಕ್ರಿಕೆಟರ್, ಮುಂಬೈ ಹುಡುಗಿ ಜೊತೆ ‘ಸೀಕ್ರೆಟ್’ ಡೇಟಿಂಗ್ ಮಾಡ್ತಿದ್ದಾರಾ RCB ಸ್ಟಾರ್‌?
Recommended image2
11 ಎಸೆತಗಳಲ್ಲಿ ಫಿಫ್ಟಿ, 29 ಎಸೆತಗಳಲ್ಲಿ 94 ರನ್..! ಲಂಕಾ ನೆಲದಿಂದಲೇ BCCI ಸೆಲೆಕ್ಟರ್ಸ್‌ಗೆ ವೈಭವ್ ಸೂರ್ಯವಂಶಿ ಖಡಕ್ ಮೆಸೇಜ್
Recommended image3
ಮಹಿಳಾ ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ಎದುರು ಸೋಲುತ್ತಿದ್ದಂತೆಯೇ ತಲೆಕೆಳಗಾದ ಭಾರತದ ಸೆಮೀಸ್ ಲೆಕ್ಕಾಚಾರ..! ಮುಂದಿನ ಹಾದಿ ಏನು?
Related Stories
Recommended image1
ಅದೊಂದು ಕಾರಣಕ್ಕಾಗಿ ಐಪಿಎಲ್ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾಗಿದ್ದ ಹಾರ್ದಿಕ್ ಪಾಂಡ್ಯ..!
Recommended image2
ವಿರಾಟ್ ಕೊಹ್ಲಿ ಇನ್ನೆಷ್ಟು ಐಪಿಎಲ್ ಟೂರ್ನಿ ಆಡ್ತಾರೆ? ಕೊನೆಗೂ ಬೆಂಗಳೂರು ಫ್ಯಾನ್ಸ್‌ಗೆ ಸಿಹಿ ಸುದ್ದಿ ಕೊಟ್ಟ RCB CEO
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved