ಡಿವೋರ್ಸ್ ಬಳಿಕ ಯುಜುವೇಂದ್ರ ಚಹಲ್, ಧನಶ್ರೀ ವರ್ಮಾ ಮತ್ತೆ ಒಂದಾಗ್ತಾರಾ? ಮೌನ ಮುರಿದ ಚಹಲ್!
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಮತ್ತೆ ಒಂದಾಗುತ್ತಿದ್ದಾರೆ. ರಿಯಾಲಿಟಿ ಶೋವೊಂದರಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದೆಲ್ಲಾ ಸುದ್ದಿ ವೈರಲ್ ಆಗಿತ್ತು. ಈ ಬಗ್ಗೆ ಯುಜಿ ಮೊದಲ ಬಾರಿಗೆ ತುಟಿಬಿಚ್ಚಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.

ಡಿವೋರ್ಸ್ ಪಡೆದುಕೊಂಡಿರುವ ತಾರಾ ಜೋಡಿ
ಟೀಂ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಹಲ್ ಹಾಗೂ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ಅತ್ಯಂತ ಜನಪ್ರಿಯ ತಾರಾ ಜೋಡಿಗಳಲ್ಲಿ ಒಂದಾಗಿತ್ತು. ಆದರೆ ಈ ಜೋಡಿಯ ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದ್ದರಿಂದ ಪರಸ್ಪರ ಸಮ್ಮತಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಾ ಪಡೆದುಕೊಂಡಿದ್ದರು.
ಒಬ್ಬರ ಮೇಲೆ ಮತ್ತೊಬ್ಬರ ಆರೋಪ
ಇನ್ನು ಯುಜುವೇಂದ್ರ ಚಹಲ್-ಧನಶ್ರೀ ವರ್ಮಾ ವಿವಾಹ ವಿಚ್ಛೇದನಾದ ಬಳಿಕವೂ ಗೂಡಾರ್ಥದ ಮೂಲಕ ಒಬ್ಬರ ಮೇಲೆ ಒಬ್ಬರು ಆರೋಪಗಳನ್ನು ಮಾಡುತ್ತಲೇ ಬಂದಿದ್ದರು. ಅದರಲ್ಲಿ ಯಾರದ್ದೂ ತಪ್ಪು, ಇನ್ಯಾರದ್ದು ಸರಿ ಎಂದು ಫ್ಯಾನ್ಸ್ ತಲೆ ಕೆಡಿಸಿಕೊಳ್ಳುತ್ತಿರುವಾಗಲೇ ಮತ್ತೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸೋಷಿಯಲ್ ಮೀಡಿಯಾ ಪೋಸ್ಟ್ ಬಗ್ಗೆ ಮೊದಲ ಬಾರಿ ಸ್ಪಷ್ಟನೆ
ಡಿವೋರ್ಸ್ ಬಳಿಕ ಮತ್ತೆ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ರಿಯಾಲಿಟಿ ಶೋನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಅವರ ಅಭಿಮಾನಿಗಳು ಹುಬ್ಬೇರಿಸುವಂತೆ ಮಾಡಿತ್ತು. ಈ ಕುರಿತಂತೆ ಇದೀಗ ಸ್ವತಃ ಯುಜುವೇಂದ್ರ ಚಹಲ್ ಮೊದಲ ಬಾರಿಗೆ ತುಟಿ ಬಿಚ್ಚಿದ್ದಾರೆ.
'ದಿ 50' ರಿಯಾಲಿಟ ಶೋನಲ್ಲಿ ಭಾಗವಹಿಸುತ್ತಿಲ್ಲ
'ದಿ 50' ಎನ್ನುವ ರಿಯಾಲಿಟಿ ಶೋನಲ್ಲಿ ಯುಜುವೇಂದ್ರ ಚಹಲ್ ಕಾಣಿಸಿಕೊಳ್ಳಲಿದ್ದಾರೆ. ಇದೇ ರಿಯಾಲಿಟಿ ಶೋನಲ್ಲಿ ಮಾಜಿ ಪತ್ನಿ ಧನಶ್ರೀ ವರ್ಮಾ ಅವರನ್ನು ಭೇಟಿಯಾಗಲಿದ್ದಾರೆ. ಈ ಜೋಡಿ ರಿಯಾಲಿಟಿ ಶೋ ಮೂಲಕ ಮತ್ತೆ ಒಂದಾಗಲಿದ್ದಾರೆ ಎನ್ನುವಂತ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಕಾಳ್ಗಿಚ್ಚಿನಂತೆ ಹಬ್ಬಿತ್ತು.
ಗಾಳಿ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಚಹಲ್
ಈ ಬಗ್ಗೆ ಮಾತನಾಡಿರುವ ಯುಜಿ, 'ನಾನು ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತೇನೆ ಎನ್ನುವ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ. ರಿಪೋರ್ಟ್‌ನಲ್ಲಿ ವರದಿಯಾದ ರಿಯಾಲಿಟಿ ಶೋನಲ್ಲಿ ನಾನು ಭಾಗವಹಿಸುತ್ತಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು' ಎಂದು ಹೇಳಿದ್ದಾರೆ.
ನೆಟ್ಟಿಗರಲ್ಲಿ ಯುಜಿ ಮನವಿ
ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಅದರ ಸತ್ಯಾಸತ್ಯತೆ ತಿಳಿದುಕೊಂಡು ಪೋಸ್ಟ್ ಮಾಡಿ. ಸುಳ್ಳು ಹಾಗೂ ತಪ್ಪಾದ ಮಾಹಿತಿಯನ್ನು ಹರಡಬೇಡಿ ಎಂದು ನೆಟ್ಟಿಗರಲ್ಲಿ ಚಹಲ್ ಮನವಿ ಮಾಡಿಕೊಂಡಿದ್ದಾರೆ.
2024ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ ಯುಜಿ
2024ರ ಐಸಿಸಿ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಚಹಲ್, ಆ ಬಳಿಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿಲ್ಲ. ಐಪಿಎಲ್‌ನಲ್ಲಿ ಯುಜಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದು, ಫ್ರಾಂಚೈಸಿಯು 18 ಕೋಟಿ ರುಪಾಯಿಗೆ ಮುಂಬರುವ ಐಪಿಎಲ್‌ಗೆ ರೀಟೈನ್ ಮಾಡಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

