ಕನ್ನಡ ಚಿತ್ರರಂಗದ ಮತ್ತೊಂದು ತಾರೆ ಕಣ್ಮರೆ; ಪ್ರೀತಿಸಿ ಮದುವೆಯಾದವನೇ ಮಸಣ ಸೇರಿಸಿದ!
ಬೆಂಗಳೂರು (ಆ.28): ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಯುವತಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಳು.
ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಕಟ್ಟಿಕೊಂಡ ಗಂಡನೇ ತನ್ನ ಹೆಂಡತಿಯನ್ನು ಮಹಿಳೆಯ ಭೀಕರ ಹತ್ಯೆ ಮಾಡಿರುವ ದುರ್ಘನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ (25) ಎಂದು ಗುರುತಿಸಲಾಗಿದೆ.
ಕೊಲೆ ಮಾಡಿದ ವ್ಯಕ್ತಿಯನ್ನು ಈಕೆಯ ಗಂಡ ಕಿರಣ್ ಎಂದು ಹೇಳಲಾಗಿದೆ. ಕಿರಣ್ ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು, ನೀನು ಯಾರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದೀಯ ಹೇಳು ಎಂದು ಕೇಳಿದ್ದಾನೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊಲೆ ಮಾಡಿದ್ದು, ಸಂಜೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.
ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಮಯಕ್ಕೆ ಸರಿಯಾಗಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹೆಂಡತಿಯೊಂದಿಗೆ ಜಗಳ ಮಾಡಿದ್ದಾನೆ.
ಇನ್ನು ಕೆಲಸದ ಒತ್ತಡದಲ್ಲಿ ಮನೆಗೆ ಬರುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರ ನಡುವೆಯೂ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಆದರೆ, ಇದನ್ನು ಅರ್ಥ ಮಾಡಿಕೊಳ್ಳದ ಗಂಡ ಕಿರಣ್ ಹೆಂಡತಿಗೆ ಅನೈತಿಕ ಸಂಬಂಧವಿದೆ ಎಂದು ಆಕೆಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸುತ್ತಲೇ ಇದ್ದನು. ಗಂಡನಿಗೆ ಎಷ್ಟೇ ಪ್ರೀತಿಯಿಂದ ಹೇಳಿದರೂ, ಆತ ಮಾತ್ರ ಬದಲಾಗಲೇ ಇಲ್ಲ.
ಪ್ರೀತಿಸಿ ಮದುವೆ ಮಾಡಿಕೊಂಡ ಗಂಡನೇ ಈಗ ತನ್ನ ಮೇಲೆ ಅನುಮಾನ ಪಡುತ್ತಿದ್ದರೂ, ನವ್ಯಾಗೆ ಮನೆಯವರನ್ನು ಕರೆಸಿ ರಾಜಿ ಪಂಚಾಯಿತಿ ಮಾಡಿ ಎಂದು ಕೇಳುವ ನೈತಿಕತೆ ಉಳಿದಿರಲಿಲ್ಲ. ಆದ್ದರಿಂದ ಗಂಡ ಕಿರಣ್ ತನ್ನ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗಲಾಟೆ ಮಾಡುತ್ತಿದ್ದರೂ, ಅದನ್ನು ಸಹಿಸಿಕೊಂಡು ಹೊಂದಾಣಿಕೆಯಿಂದ ಹೋಗುತ್ತಿದ್ದಳು.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವಳಾದ ನವ್ಯಾ ಕಿರಣ್‌ನನ್ನು ಪ್ರೀತಿಸಿ ಮದುವೆಯಾದ ನಂತರ ಗಂಡನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಆದರೆ, ಈಗ ಗಂಡನಿಂದಲೇ ಭೀಕರವಾಗಿ, ಚಿತ್ರಹಿಂಸೆ ಅನುಭವಿಸಿ ಪ್ರಾಣ ಬಿಟ್ಟಿದ್ದಾಳೆ. ಇನ್ನು ಘಟನೆ ತಿಳಿದ ಬಳಿಕ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪತ್ನಿ ನವ್ಯಾಳನ್ನು ಕೊಲೆ ಮಾಡಿ ಪರಾರಿ ಆಗಿದ್ದ ಕಿರಣ್‌ನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಈಗ ಚಿಕ್ಕಬಳ್ಳಾಪುರ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕಾರ್ಯ ನಿರ್ಹಿಸುತ್ತಿದ್ದನು. ಆದರೆ, ಕಟ್ಟಿಕೊಂಡ ಹೆಂಡತಿಯ ಮೇಲೆ ಶೀಲ ಶಂಕಿಸಿ ಇಡೀ ಸಂಸಾರವನ್ನೇ ಹಾಳು ಮಾಡಿಕೊಂಡಿದ್ದಾನೆ. ಕೊಲೆ ಮಾಡಿದ್ದು ಸಾಬೀತಾದರೆ ಜೈಲು ಸೇರಲಿದ್ದಾನೆ. ಪ್ರತ್ಯಕ್ಷ್ಯವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು ಎಂಬುದಕ್ಕೆ ಇವರ ಸಂಸಾರ ಹಾಳಾಗಿರುವುದು ಪಾಠವಾಗಿದೆ.