ಚಲಿಸುವ ರೈಲಿಗೆ ಹಾರಿ ಪ್ರಾಣ ಕಳೆದುಕೊಂಡ ಬೆಂಗಳೂರಿನ ವಿವಾಹಿತೆ ಸಹನಾ, ಯುವಕ ರಾಹುಲ್
ಮಂಡ್ಯದ ವಿಸಿ ಫಾರಂ ರೈಲ್ವೆ ಗೇಟ್ ಬಳಿ ಬೆಂಗಳೂರು ಮೂಲದ ವಿವಾಹಿತ ಮಹಿಳೆ ಮತ್ತು ಯುವಕ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ರೈಲ್ವೆ ಪೊಲೀಸರು ಮೃತದೇಹಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಸಾವಿಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

ಮಂಡ್ಯ ನಗರದ ಹೊರವಲಯದಲ್ಲಿರುವ ವಿಸಿ ಫಾರಂ ರೈಲ್ವೆ ಗೇಟ್ ಬಳಿ ಇಂದು ಬೆಳಿಗ್ಗೆ ವಿವಾಹಿತ ಮಹಿಳೆ ಹಾಗೂ ಯುವಕ ರೈಲಿಗೆ ಸಿಲುಕಿ ಭೀಕರವಾಗಿ ಸಾವಿಗೆ ಶರಣಾಗಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಸಹನ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ ಚಲಿಸುವ ರೈಲಿಗೆ ಅಡ್ಡಲಾಗಿ ಹಾರಿ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಮಂಡ್ಯ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ರೈಲ್ವೆ ಪೊಲೀಸರು ಸ್ಥಳದಲ್ಲಿದ್ದ ಮೃತದೇಹಗಳನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಮೃತರ ಕಡೆಯವರಿಗೆ ಘಟನೆಯ ಕುರಿತು ಮಂಡ್ಯ ರೈಲ್ವೆ ಪೊಲೀಸರು ಈಗಾಗಲೇ ಮಾಹಿತಿ ರವಾನಿಸಿದ್ದಾರೆ.
ಜೀವ ಕಳೆದುಕೊಳ್ಳಲು ನಿಖರ ಕಾರಣವೇನು ಎಂಬ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ





