ಸಿಬಿಎಸ್‌ಇ 10, 12 ಬೋರ್ಡ್ ಎಕ್ಸಾಂ 2024 ಬಗ್ಗೆ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸರ್ಕಾರ
10 ಮತ್ತು 12 ನೇ ತರಗತಿಯ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯನ್ನು ವಿದ್ಯಾರ್ಥಿಗಳು 2 ಬಾರಿ ಬರೆಯಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೇಳಿತ್ತು. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ.
ಸಿಬಿಎಸ್‌ಇ ಬೋರ್ಡ್ ಪರೀಕ್ಷೆ 2024 ರ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ. 10 ಮತ್ತು 12 ನೇ ತರಗತಿಯ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯನ್ನು ವಿದ್ಯಾರ್ಥಿಗಳು 2 ಬಾರಿ ಬರೆಯಬೇಕು ಎಂದು ಕೇಂದ್ರ ಈ ಹಿಂದೆ ಹೇಳಿತ್ತು. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ.
ಸಿಬಿಎಸ್‌ಇ ವಿದ್ಯಾರ್ಥಿಗಳು ವರ್ಷಕ್ಕೆ 2 ಬಾರಿ 10 ಮತ್ತು 12 ನೇ ತರಗತಿ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಲ್ಲ ಮತ್ತು ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಮಾಹಿತಿ ನೀಡಿದ್ದಾರೆ.
ಇನ್ನು, 'ಡಮ್ಮಿ ಶಾಲೆಗಳ' ವಿಷಯವನ್ನು ನಿರ್ಲಕ್ಷಿಸಲಾಗುವುದಿಲ್ಲ ಮತ್ತು ಅದರ ಬಗ್ಗೆ ಗಂಭೀರ ಚರ್ಚೆ ನಡೆಸುವ ಸಮಯ ಬಂದಿದೆ. ಸಿಬಿಎಸ್‌ಇ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ (JEE) ಯಂತೆಯೇ ವರ್ಷಕ್ಕೆ ಎರಡು ಬಾರಿ (10 ಮತ್ತು 12 ನೇ ತರಗತಿ) ಪರೀಕ್ಷೆಗಳಿಗೆ ಹಾಜರಾಗುವ ಆಯ್ಕೆಯನ್ನು ಹೊಂದಿರುತ್ತಾರೆ. ಅವರು ಉತ್ತಮ ಸ್ಕೋರ್ ಅನ್ನು ಸಹ ಆಯ್ಕೆ ಮಾಡಬಹುದು. ಆದರೆ ಇದು ಸಂಪೂರ್ಣವಾಗಿ ಐಚ್ಛಿಕವಾಗಿರುತ್ತದೆ, ಯಾವುದೇ ಒತ್ತಾಯವಿಲ್ಲ ಎಂದೂ ಕೇಂದ್ರ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿಗಳು ಸಾಮಾನ್ಯವಾಗಿ ಒಂದು ವರ್ಷ ಕಳೆದುಕೊಂಡರೆ, ಅವರ ಅವಕಾಶವು ಕಳೆದುಹೋಗಿದೆ ಅಥವಾ ಅಂತಿಮ ಪರೀಕ್ಷೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದಿತ್ತು ಎಂದು ಭಾವಿಸಿ ಒತ್ತಡಕ್ಕೆ ಒಳಗಾಗುತ್ತಾರೆ. ಒಂದೇ ಅವಕಾಶ ಇರುವ ಕಾರಣ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಎರಡು ಪರೀಕ್ಷೆಯ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ" ಎಂದು ದರ್ಮೇಂದ್ರ ಪ್ರಧಾನ್ ಹೇಳಿದರು.
ಹಾಗೂ, ಯಾವುದೇ ವಿದ್ಯಾರ್ಥಿಯು ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಮೊದಲ ಸೆಟ್ ಪರೀಕ್ಷೆಗಳಲ್ಲಿನ ಸ್ಕೋರ್‌ನಿಂದ ತೃಪ್ತನಾಗಿದ್ದೇನೆ ಎಂದು ಭಾವಿಸಿದರೆ, ಅವರು ಮುಂದಿನ ಪರೀಕ್ಷೆಗೆ ಹಾಜರಾಗದಿರಲು ಆಯ್ಕೆ ಮಾಡಬಹುದು. ಯಾವುದೂ ಕಡ್ಡಾಯವಾಗುವುದಿಲ್ಲ’’ ಎಂದೂ ಅವರು ಹೇಳಿದರು. ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಲು ಮತ್ತು ಉತ್ತಮ ಸ್ಕೋರ್ ಉಳಿಸಿಕೊಳ್ಳಲು ಆಯ್ಕೆಯನ್ನು ಪಡೆಯಲು ಸಾಕಷ್ಟು ಸಮಯ ಮತ್ತು ಅವಕಾಶವನ್ನು ಖಚಿತಪಡಿಸಿಕೊಳ್ಳಲು ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದೂ ತಿಳಿಸಿದರು.
ಶಿಕ್ಷಣ ಸಚಿವಾಲಯವು ಆಗಸ್ಟ್‌ನಲ್ಲಿ ಪ್ರಕಟಿಸಿದ ಹೊಸ ಪಠ್ಯಕ್ರಮ ಚೌಕಟ್ಟಿನ (NCF) ಪ್ರಕಾರ, ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದ್ದೇನೆ ಎಂದೂ ಧರ್ಮೇಂದ್ರ ಪ್ರಧಾನ್ ಹೇಳಿದರು. ಹೊಸ ಪಠ್ಯಕ್ರಮ ಚೌಕಟ್ಟನ್ನು (ಎನ್‌ಸಿಎಫ್) ಘೋಷಿಸಿದ ನಂತರ ನಾನು ವಿದ್ಯಾರ್ಥಿಗಳನ್ನು ಭೇಟಿಯಾದೆ. ಅವರು ಇದನ್ನು ಮೆಚ್ಚಿದ್ದಾರೆ ಮತ್ತು ಆಲೋಚನೆಯಿಂದ ಸಂತೋಷಪಟ್ಟಿದ್ದಾರೆ. 2024ರಿಂದಲೇ ವರ್ಷಕ್ಕೆ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.