MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Education
  • ನೀಟ್ ಮರುಪರೀಕ್ಷೆ ಘೋಷಣೆಯಾದ ಬೆನ್ನಲ್ಲೇ ವಿದ್ಯಾರ್ಥಿಗಳ ಸರಣಿ ಆತ್ಮ*ಹತ್ಯೆ, ಇದು ವ್ಯವಸ್ಥೆಯ ಕೊಲೆ: ರಾಹುಲ್ ಕಿಡಿ

ನೀಟ್ ಮರುಪರೀಕ್ಷೆ ಘೋಷಣೆಯಾದ ಬೆನ್ನಲ್ಲೇ ವಿದ್ಯಾರ್ಥಿಗಳ ಸರಣಿ ಆತ್ಮ*ಹತ್ಯೆ, ಇದು ವ್ಯವಸ್ಥೆಯ ಕೊಲೆ: ರಾಹುಲ್ ಕಿಡಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ನಂತರ ದೇಶದ ಹಲವೆಡೆ ವಿದ್ಯಾರ್ಥಿಗಳು ಆತ್ಮ*ಹತ್ಯೆ ಮಾಡಿಕೊಳ್ಳುತ್ತಿದ್ದು, ಇದನ್ನು 'ವ್ಯವಸ್ಥೆಯ ಕೊಲೆ' ಎಂದು ಕರೆದಿರುವ ರಾಹುಲ್ ಗಾಂಧಿ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ರದ್ದು, ಮರುಪರೀಕ್ಷೆ ಘೋಷಣೆ .

2 Min read
Author : Gowthami K
Published : May 16 2026, 01:28 PM IST
Share this Photo Gallery
  • FB
  • TW
  • Linkdin
  • Whatsapp
16
 ಇದು ವ್ಯವಸ್ಥೆಯ ಕೊಲೆ, ರಾಹುಲ್ ಗಾಂಧಿ ಕಿಡಿ
Image Credit : Asianet News

ಇದು ವ್ಯವಸ್ಥೆಯ ಕೊಲೆ, ರಾಹುಲ್ ಗಾಂಧಿ ಕಿಡಿ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ನಂತರ ಪರೀಕ್ಷೆ ರದ್ದಾದ ದಿನದಿಂದ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಆತ್ಮ*ಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಆಘಾತಕಾರಿ ಘಟನೆ ನಡೆಯುತ್ತಿದೆ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಈ ಘಟನೆ ಆತ್ಮ*ಹತ್ಯೆ ಅಲ್ಲ ಇದು ವ್ಯವಸ್ಥೆಯ ಕೊಲೆ ಎಂದು ಕಿಡಿಕಾರಿದ್ದಾರೆ.

Add Asianetnews Kannada as a Preferred SourcegooglePreferred
26
ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ
Image Credit : X

ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ

ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ 21 ವರ್ಷದ ರಿತಿಕ್ ಮಿಶ್ರಾ ಆತ್ಮ*ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಇನ್ನು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಲ್ಲ ಎಂಬುದು ರಿತಿಕ್ ಅವರ ಕೊನೆಯ ಮಾತುಗಳಾಗಿದ್ದವು. ಮೂರನೇ ಬಾರಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ಈ ಯುವಕ, ಪರೀಕ್ಷೆ ರದ್ದಾದ ಬಳಿಕ ತೀವ್ರ ಮನನೊಂದು ಖಿನ್ನತೆಗೆ ಒಳಗಾಗಿದ್ದನು. ಗೋವಾದಲ್ಲಿಯೂ ಇದೇ ರೀತಿಯ ಘಟನೆಯೊಂದು ನಡೆದಿದೆ. ಈ ಯುವಕರು ಪರೀಕ್ಷೆಯಲ್ಲಿ ಸೋತಿಲ್ಲ. ಅವರನ್ನು ಭ್ರಷ್ಟ ವ್ಯವಸ್ಥೆಯೇ ಕೊಂದಿದೆ. ಇದು ಆತ್ಮ*ಹತ್ಯೆಯಲ್ಲ – ಇದು ವ್ಯವಸ್ಥೆಯ ಕೊಲೆ, ಎಂದು ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪರೀಕ್ಷಾ ಹಗರಣಗಳ ಬಗ್ಗೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

Related Articles

Related image1
NEET Scam: ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ
Related image2
ನೀಟ್ ವಿವಾದದ ಬೆನ್ನಲ್ಲೇ ಲಕ್ನೋದಲ್ಲಿ ಮತ್ತೊಂದು ಶಾಕ್, ವಿದ್ಯಾರ್ಥಿನಿಗೆ ಕಿರುಕುಳ, ಪೇಪರ್ ಲೀಕ್, ಪ್ರೊಫೆಸರ್ ಅರೆಸ್ಟ್!
36
 ಒಟ್ಟು 148 ಪರೀಕ್ಷಾ ಹಗರಣ
Image Credit : X

ಒಟ್ಟು 148 ಪರೀಕ್ಷಾ ಹಗರಣ

2015ರಿಂದ 2026ರವರೆಗೆ ಒಟ್ಟು 148 ಪರೀಕ್ಷಾ ಹಗರಣಗಳು ನಡೆದಿವೆ. 87 ಪರೀಕ್ಷೆಗಳು ರದ್ದಾಗಿದ್ದು, ಸುಮಾರು 9 ಕೋಟಿ ವಿದ್ಯಾರ್ಥಿಗಳ ಭವಿಷ್ಯ ಹಾನಿಗೊಳಗಾಗಿದೆ. ಈ 148 ಪ್ರಕರಣಗಳಲ್ಲಿ ಕೇವಲ ಒಂದೇ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಸಿಬಿಐ 17 ಪ್ರಕರಣಗಳನ್ನು, ಇಡಿ 11 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದರೂ, ಯಾರಿಗೂ ಶಿಕ್ಷೆಯಾಗಿಲ್ಲ. ವಿಶೇಷವಾಗಿ NEET, AIPMT ಸೇರಿದಂತೆ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲೇ 15 ಹಗರಣಗಳು ನಡೆದಿವೆ ಎಂದು ರಾಹುಲ್ ಆರೋಪಿಸಿದರು.

ಇದಲ್ಲದೆ, ಯಾವುದೇ ಜವಾಬ್ದಾರಿಯುತ ಅಧಿಕಾರಿ ಅಥವಾ ಸಚಿವರು ರಾಜೀನಾಮೆ ನೀಡದಿರುವುದನ್ನು ಪ್ರಶ್ನಿಸಿದರು. ಅವರನ್ನು ಕೆಲಕಾಲಕ್ಕೆ ಸ್ಥಾನದಿಂದ ತೆಗೆದುಹಾಕಿ, ನಂತರ ಮರು ನೇಮಕ ಮಾಡಲಾಗುತ್ತಿದೆ. ಹಗರಣ ನಡೆಸುವವರಿಗೆ ಬಹುಮಾನ ಸಿಗುತ್ತಿದ್ದು, ಪರಿಶ್ರಮ ಪಡುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

46
ವಿದ್ಯಾರ್ಥಿಗಳ ಸರಣಿ ಸಾವು
Image Credit : ANI

ವಿದ್ಯಾರ್ಥಿಗಳ ಸರಣಿ ಸಾವು

ಉತ್ತರ ಪ್ರದೇಶದ ರಿತಿಕ್ ಮಿಶ್ರಾ ಗುರುವಾರ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಯಾವುದೇ ಆತ್ಮ*ಹತ್ಯೆ ಪತ್ರ ಪತ್ತೆಯಾಗದಿದ್ದರೂ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆ ಪರೀಕ್ಷೆ ರದ್ದಾದ ನಂತರ ಅವರು ತೀವ್ರ ಒತ್ತಡದಲ್ಲಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಈ ಬಾರಿ ಉತ್ತಮ ಅಂಕಗಳನ್ನು ಗಳಿಸುವ ವಿಶ್ವಾಸ ರಿತಿಕ್ ಅವರಿಗೆ ಇತ್ತು ಎಂದು ಅವರ ತಂದೆ ಅನೂಪ್ ಮಿಶ್ರಾ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ಪ್ರದೀಪ್ ಮಹಿಚ್ ಎಂಬ ವಿದ್ಯಾರ್ಥಿ ಕೂಡ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮೂರನೇ ಪ್ರಯತ್ನದಲ್ಲಿ 650 ಅಂಕಗಳನ್ನು ನಿರೀಕ್ಷಿಸಿದ್ದ ಅವರು, ಪರೀಕ್ಷೆ ರದ್ದಾದ ಸುದ್ದಿ ಕೇಳಿ ಖಿನ್ನತೆಗೆ ಒಳಗಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಅವರು ತಮ್ಮ ಸಹೋದರಿಯ ಸ್ಕಾರ್ಫ್ ಬಳಸಿ ನೇಣು ಬಿಗಿದುಕೊಂಡಿದ್ದರೆ ಎಂದು ವರದಿ ತಿಳಿಸಿದೆ.

ಇನ್ನು ದೆಹಲಿಯ ಆಜಾದ್‌ಪುರದಲ್ಲಿಯೂ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗೋವಾದ ಮಾರ್ಗೋವ್‌ನಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬನು ಶೈಕ್ಷಣಿಕ ಒತ್ತಡವನ್ನು ಉಲ್ಲೇಖಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ.

56
22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ
Image Credit : ANI

22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ

ಪ್ರಶ್ನೆ ಪತ್ರಿಕೆ ಸೋರಿಯಾದ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮೇ 3ರಂದು ನಡೆದ ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಈ ನಿರ್ಧಾರವು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ಸ್ಪಷ್ಟಪಡಿಸಿತ್ತು.

66
ನೀಟ್ ಮರುಪರೀಕ್ಷೆ
Image Credit : Getty

ನೀಟ್ ಮರುಪರೀಕ್ಷೆ

ಇನ್ನು ನೀಟ್ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ತೀರ್ಮಾನಿಸಲಾಗೊದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ಜೊತೆಗೆ, ಮುಂದಿನ ವರ್ಷದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಮಾದರಿಯಲ್ಲಿ ನಡೆಸುವ ಯೋಜನೆ ಇದೆ ಎಂದು ತಿಳಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಸಿಬಿಐ ತನಿಖೆಗೂ ಕೇಂದ್ರ ಸರ್ಕಾರ ಆದೇಶ ನೀಡಿದೆ.

ಒಟ್ಟಿನಲ್ಲಿ, ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಮೇಲಿನ ಪ್ರಶ್ನೆಗಳು ಹಾಗೂ ಹಗರಣಗಳ ಸರಮಾಲೆ ಇವೆಲ್ಲವೂ ಶಿಕ್ಷಣ ವ್ಯವಸ್ಥೆಯ ಗಂಭೀರ ಸಂಕಷ್ಟವನ್ನು ಬಯಲಿಗೆಳೆಯುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಮುಂದಿನ ದೊಡ್ಡ ಸವಾಲಾಗಿ ಪರಿಣಮಿಸಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ರಾಹುಲ್ ಗಾಂಧಿ
ನೀಟ್
ಪರೀಕ್ಷೆ
ಕೇಂದ್ರೀಯ ತನಿಖಾ ದಳ
ಶಿಕ್ಷಣ

Latest Videos
Recommended Stories
Recommended image1
NEET Re-exam: ಜೂನ್ 21ಕ್ಕೆ ಮರುಪರೀಕ್ಷೆ ಫಿಕ್ಸ್! ಮುಂದಿನ ವರ್ಷದಿಂದ NEET ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ
Recommended image2
NEET UG 2026 ಮರು-ಪರೀಕ್ಷೆ ದಿನಾಂಕ ಪ್ರಕಟ: ಜೂನ್ 21 ರಂದು 22 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ!
Recommended image3
ಬೆಂಗಳೂರಿನ ಐಐಎಸ್‌ಸಿಗೆ ಬಂತು ಸೂಪರ್ ಕಂಪ್ಯೂಟಿಂಗ್ ಲ್ಯಾಬ್, ಸಂಶೋಧನೆಗೆ ಭರ್ಜರಿ ಬೂಸ್ಟ್ ನೀಡಿದ ಶೆಫ್ಲರ್ ಇಂಡಿಯಾ
Related Stories
Recommended image1
NEET Scam: ನೀಟ್ ಪರೀಕ್ಷೆ ರದ್ದು ಬೆನ್ನಲ್ಲೇ ರಾಜಕೀಯ ಕದನ! ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರು ವಾಗ್ದಾಳಿ
Recommended image2
ನೀಟ್ ವಿವಾದದ ಬೆನ್ನಲ್ಲೇ ಲಕ್ನೋದಲ್ಲಿ ಮತ್ತೊಂದು ಶಾಕ್, ವಿದ್ಯಾರ್ಥಿನಿಗೆ ಕಿರುಕುಳ, ಪೇಪರ್ ಲೀಕ್, ಪ್ರೊಫೆಸರ್ ಅರೆಸ್ಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved