Chikkaballapur: 10 ಜಿಲ್ಲೆಗೆ ಹೊಸ ವೈದ್ಯಕೀಯ ಕಾಲೇಜು: ಸುಧಾಕರ್
ಚಿಕ್ಕಬಳ್ಳಾಪುರ(ಫೆ.06): ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲವೋ ಆ ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ 10 ವೈದ್ಯಕೀಯ ಕಾಲೇಜು(Medical College) ಸ್ಥಾಪಿಸುವುದಾಗಿ ಸಚಿವ ಡಾ.ಸುಧಾಕರ್(Dr K Sudhakar) ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಆರೂರು ಗ್ರಾಮದ ಬಳಿ ಶನಿವಾರ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಡಾ.ಸುಧಾಕರ್
ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರ ಹೆಚ್ಚು ಆದ್ಯತೆ ನೀಡಿದ್ದು, ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಉಳಿದ ಜಿಲ್ಲೆಗಳಲ್ಲಿ ಖಾಸಗಿ ಸಹ ಭಾಗಿತ್ವದಲ್ಲಿ 10 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಅಭಿವೃದ್ಧಿಪಡಿಸುವುದು ಸರ್ಕಾರದ(Government of Karnataka) ಉದ್ದೇಶವಾಗಿದೆ ಎಂದು ತಿಳಿಸಿದ ಸಚಿವರು
ಚಿತ್ರದುರ್ಗದಲ್ಲಿ(Chitradurga) ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವನ್ನು ಪ್ರಸಕ್ತ ಸಾಲಿನಲ್ಲೇ ಕೈಗೆತ್ತಿಕೊಳ್ಳಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಟೆಂಡರ್ ಕರೆದು, ಕಾಲೇಜು ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ರಾಮನಗರದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ವತಿಯಿಂದ ವಿವಿಯ ಆಡಳಿತ ಕೇಂದ್ರದ ಜೊತೆಗೆ ವೈದ್ಯಕೀಯ ಕಾಲೇಜನ್ನು ಆರಂಭಿಸಲಾಗುವುದು ಎಂದು ತಿಳಿಸಿದ ಸುಧಾಕರ್
ರಾಜ್ಯದಲ್ಲಿ(Karnataka) ಎಂಜಿನಿಯರಿಂಗ್, ಮೆಡಿಕಲ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು(Students) ಹೆಚ್ಚು ಒತ್ತು ನೀಡುತ್ತಿದ್ದಾರೆ. ಕೇರಳ, ತಮಿಳುನಾಡು, ಉತ್ತರ ಭಾರತ ರಾಜ್ಯಗಳ ವಿದ್ಯಾರ್ಥಿಗಳು, ಕರ್ನಾಟಕದ ಕೊಡಗು, ದಕ್ಷಿಣಕನ್ನಡ ಭಾಗದವರು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಆದರೆ ಉಳಿದ ಜಿಲ್ಲೆಯವರು ವೈದ್ಯಕೀಯ ಕ್ಷೇತ್ರದಲ್ಲಿರುವ ಅನೇಕ ಕೋರ್ಸ್‌ಗಳ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಉಳಿದೆಡೆಯೂ ಆರೋಗ್ಯ ಕ್ಷೇತ್ರದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುವುದು ಎಂದ ಸಚಿವ ಕೆ. ಸುಧಾಕರ್
ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿದೆ. 2023ರ ಸಂಕ್ರಾಂತಿ ವೇಳೆಗೆ ಉದ್ಘಾಟನೆಗೊಳ್ಳಲಿದೆ ಎಂದ ಸುಧಾಕರ್
ವೈದ್ಯಕೀಯ ಕಾಲೇಜಿಗೆ ಈಗಾಗಲೇ ಅಧ್ಯಾಪಕರ ನೇಮಕ ಆಗಿರುವ ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ 100 ಎಂಬಿಬಿಎಸ್(MBBS) ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ನೇಮಕಾತಿ(Recruitment) ಕಡತವನ್ನು ಕಳುಹಿಸಿಕೊಡಲಾಗಿದ್ದು, ಎರಡು ದಿನದಲ್ಲಿ ದಾಖಲಾಗಲಿದ್ದಾರೆ. ಈ ವಿದ್ಯಾರ್ಥಿಗಳ ಕಲಿಕೆಗೆ ತಾತ್ಕಾಲಿಕ ವ್ಯವಸ್ಥೆಯನ್ನು ಮುದ್ದೇನಹಳ್ಳಿ ಸಮೀಪದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದ ಸಚಿವರು