ಪ್ರೀತಿ ಪಾತ್ರರೇ ಕ್ಷಮಿಸಿ, ನಾನು ಸ್ವಲ್ಪ ತಡ ಮಾಡಿದೆ: ರಶ್ಮಿಕಾ ಮಂದಣ್ಣ ಹೀಗೆ ಹೇಳಿದ್ಯಾಕೆ?
ಸೀರೆಯುಟ್ಟಿರುವ ಮೋಹಕ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಇದೀಗ ಅಭಿಮಾನಿಗಳಿಗೆ ಕ್ಷಮೆ ಯಾಚಿಸಿದ್ದಾರೆ. ಯಾಕೆ ಗೊತ್ತಾ?
ನ್ಯಾಷ್‌ನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಸಿಕ್ಕಿದೆ. ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಅವರಿಗೆ ಬೇಡಿಕೆ ಇದೆ. ಸದ್ಯ ವಿವಿಧ ಭಾಷೆಗಳಲ್ಲಿ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.
ಸ್ಯಾಂಡಲ್ವುಡ್ನಿಂದ ವೃತ್ತಿಜೀವನ ಆರಂಭಿಸಿ ಇದೀಗ ಬಹುಭಾಷೆಗಳಲ್ಲಿ ಮಿಂಚು ಹರಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.
ಸೀರೆಯುಟ್ಟಿರುವ ಮೋಹಕ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಇದೀಗ ಅಭಿಮಾನಿಗಳಿಗೆ ಕ್ಷಮೆ ಯಾಚಿಸಿದ್ದಾರೆ.
ಪ್ರೀತಿ ಪಾತ್ರರೇ ಕ್ಷಮಿಸಿ, ನಾನು ಸ್ವಲ್ಪ ತಡ ಮಾಡಿದೆ. ಗಣೇಶ ಚತುರ್ಥಿಯ ಶುಭಾಶಯಗಳು. ದೇವರು ನಿಮಗೆ ಆರೋಗ್ಯ, ಸಂಪತ್ತು ಸೇರಿದಂತೆ ನೀವು ಬಯಸಿದ ಎಲ್ಲವನ್ನೂ ನೀಡಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಹೌದು! ಅಭಿಮಾನಿಗಳಿಗೆ ಗಣೇಶ ಚತುರ್ಥಿಯ ಶುಭಾಶಯ ಕೋರುವುದು ತಡವಾದ ಹಿನ್ನೆಲೆಯಲ್ಲಿ ಕ್ಷಮೆ ಕೇಳಿದ್ದಾರೆ. ನಟಿಯ ಈ ಗುಣ ಅಭಿಮಾನಿಗಳ ಹೃದಯ ಗೆದ್ದಿದೆ. ಫೋಟೋಗಳಿಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.
ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಆಗಾಗ ಹೊಸ ಫೋಟೋಶೂಟ್ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.