ಬ್ಲ್ಯಾಕ್ ಡ್ರೆಸ್‌ನಲ್ಲಿ ಜಾಹ್ನವಿ: ನಿಮ್ಮ ಮುಖನೇ ಒಂದು ಕಲರ್, ಕಾಲು ಇನ್ನೊಂದು ಕಲರೆಂದು ಕಾಲೆಳೆದ ನೆಟ್ಟಿಗರು
ನನ್ನಮ್ಮ ಸೂಪರ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಎಂಬ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡು ಹೆಸರುವಾಸಿಯಾದ ಆ್ಯಂಕರ್, ನಟಿ ಜಾಹ್ನವಿ ಇದೀಗ ಬ್ಲ್ಯಾಕ್ ಡ್ರೆಸ್ ತೊಟ್ಟು ಎಲ್ಲರ ಗಮನ ಸೆಳೆದಿದ್ದಾರೆ.
ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡು, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋನಲ್ಲಿ ಚಿರಪರಿಚಿತರಾದ ಚೆಲುವೆ ಜಾಹ್ನವಿಯ ಸ್ಟೈಲಿಶ್ ಲುಕ್ ಫೋಟೋಗಳು ವೈರಲ್ ಆಗಿದೆ.
ಸುದ್ದಿ ಮನೆಯಲ್ಲಿ ನಿರೂಪಕಿಯಾಗಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋನಲ್ಲಿಯೂ ಅಭಿನಯವನ್ನೂ ಮಾಡಬಲ್ಲೆ ಎಂದು ತೋರಿಸಿಕೊಟ್ಟಿದ್ದರು. ಇದೀಗ ಜಾಹ್ನವಿ, ಬ್ಲ್ಯಾಕ್ ಡ್ರೆಸ್ ತೊಟ್ಟು ಎಲ್ಲರ ಗಮನ ಸೆಳೆದಿದ್ದು, ಅವರ ಸ್ಟೈಲಿಶ್ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಜಾಹ್ನವಿ ಬ್ಲ್ಯಾಕ್ ಡ್ರೆಸ್ ತೊಟ್ಟ ಪೋಟೋಸ್‌ಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಧಿಪತ್ರ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಸಿನಿಮಾ ಶೂಟಿಂಗ್ ಸಹ ಭರದಿಂದ ಸಾಗಿದೆ.
ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾ 'ಅಧಿಪತ್ರ' ಚಿತ್ರದಲ್ಲಿ ಜಾಹ್ನವಿ ನಾಯಕಿ ಪಾತ್ರ ಮಾಡಲಿದ್ದು, ಈ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.
ಸುದ್ದಿ ಮನೆಯಲ್ಲಿ ಸದ್ದು ಮಾಡಿದ್ದ ಜಾಹ್ನವಿ ಚಂದನದಲ್ಲಿ ಮಿಂಚಲು ಹೊರಟಿದ್ದಾರೆ. ಆದಿಪತ್ರ ಸಿನಿಮಾದ ಮೂಹೂರ್ತದ ಫೋಟೋಗಳನ್ನು ಸಹ ನಟಿ ಜಾಹ್ನವಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಕೆ.ಆರ್ ಸಿನಿಕಂಬೈನ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಅಧಿಪತ್ರ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಜಾಹ್ನವಿ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಮಾಡರ್ನ್ ಹಾಗೂ ಟ್ರೆಡಿಷನಲ್ ಲುಕ್ನಲ್ಲಿಯೂ ಕ್ಯೂಟ್ ಆಗಿ ಕಾಣುವ ಜಾಹ್ನವಿ ಸಿನಿಮಾದಲ್ಲಿ ಗೆದ್ದು ಬೀಗುತ್ತಾರಾ ಅನ್ನೋ ಪ್ರಶ್ನೆ ಇದೆ.