- Home
- Entertainment
- Brahmagantu Serial ಮುಗಿಯುತ್ತಿದ್ದಂತೆಯೇ ನಟಿ ದಿಯಾ ಪಾಲಕ್ಕಲ್ ಕೊಟ್ಟರು ಭರ್ಜರಿ ಗುಡ್ನ್ಯೂಸ್
Brahmagantu Serial ಮುಗಿಯುತ್ತಿದ್ದಂತೆಯೇ ನಟಿ ದಿಯಾ ಪಾಲಕ್ಕಲ್ ಕೊಟ್ಟರು ಭರ್ಜರಿ ಗುಡ್ನ್ಯೂಸ್
'ಬ್ರಹ್ಮಗಂಟು' ಧಾರಾವಾಹಿಯಲ್ಲಿ ದೀಪಾ ಪಾತ್ರದ ಮೂಲಕ ಮನೆಮಾತಾದವರ ನಟಿ ದಿಯಾ ಪಾಲಕ್ಕಲ್ ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಗುಣವೇ ಶ್ರೇಷ್ಠ ಎಂಬ ಸಂದೇಶ ಸಾರಿದ ಈ ಧಾರಾವಾಹಿಯ ನಾಯಕಿ, ಬಾಲನಟಿಯಾಗಿ ಪಯಣ ಆರಂಭಿಸಿ ಇದೀಗ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುವ ಸೂಚನೆ ನೀಡಿದ್ದಾರೆ.

ಸೌಂದರ್ಯಕ್ಕಿಂತ ಗುಣ ಮುಖ್ಯ
ಸೋಡಾಬುಡ್ಡಿ, ಕಪ್ಪು ವರ್ಣ, ಹಲ್ಲಿಗೆ ಕ್ಲಿಪ್, ಎಣ್ಣೆ ಬಳಿದ ಎರಡು ಜಡೆ, ಅದಕ್ಕೊಂದು ರಿಬ್ಬನ್.... ಹೌದು. ಇವಳೇ ಜೀ ಕನ್ನಡ ಬ್ರಹ್ಮಗಂಟು ಧಾರಾವಾಹಿಯ ನಾಯಕಿ ದೀಪಾ. ಬಾಹ್ಯ ಸೌಂದರ್ಯವೇ ಸರ್ವಸ್ವ ಎಂದುಕೊಂಡು ನಿಜ ಜೀವನದಲ್ಲಿ ಅದೆಷ್ಟೋ ಮಂದಿ ಮದುವೆಯಾಗಿ ಮೋಸ ಹೋದವರಿದ್ದಾರೆ. ಹುಡುಗ ಮತ್ತು ಹುಡುಗಿ ಇಬ್ಬರದ್ದೂ ಇದೇ ಕಥೆ. ಯುವತಿಯ ಬಾಹ್ಯ ಸೌಂದರ್ಯಕ್ಕೆ ಮನಸೋತು ಹುಡುಗರು ಅವರ ಹಿಂದೆ ಬಿದ್ದರೆ, ಹುಡುಗ ಸೌಂದರ್ಯದ ಜೊತೆಗೆ ಅವರಲ್ಲಿರುವ ಐಷಾರಾಮಿ ಸೌಲಭ್ಯ ನೋಡಿ ಹುಡುಗಿಯರೇ ಹುಡುಗರ ಹಿಂದೆ ಬಿದ್ದು ನರಕವನ್ನು ನೋಡುತ್ತಿರುವ ಹಲವಾರು ಉದಾಹರಣೆಗಳು ನಮ್ಮ ಕಣ್ಣೆದುರೇ ಇವೆ. ಒಂದಿಷ್ಟು ವರ್ಷಗಳಲ್ಲಿ ಕೊನೆಯಾಗುವ ಬಾಹ್ಯ ಸೌಂದರ್ಯವೇ ಸರ್ವಸ್ವ ಎಂದುಕೊಂಡು ಬದುಕುವ ಮನಸ್ಥಿತಿಯವರೇ ಬಹಳಷ್ಟು ಮಂದಿ ಇದ್ದಾರೆ. ಅದಕ್ಕಾಗಿಯೇ ಆಂತರಿಕ ಸೌಂದರ್ಯ ಗೌಣವಾಗಿಬಿಡುತ್ತದೆ. ಅದಕ್ಕೆ ಸಾಕ್ಷಿಯಾಗಿ ನಿಂತ ಬ್ರಹ್ಮಗಂಟು ಸೀರಿಯಲ್ನಲ್ಲಿ, ಕೊನೆಗೂ ಗುಣನೇ ಮುಖ್ಯ ಎಂದು ತೋರಿಸಲಾಗಿದೆ.
ಎಲ್ಲರ ಮನಸ್ಸನ್ನು ಕದ್ದವರು
ಇಂತಿಪ್ಪ ದೀಪಾ ಇದೀಗ ದಿಶಾ ಆಗಿ ಎಲ್ಲರ ಮನಸ್ಸನ್ನು ಕದ್ದವರು ದಿಯಾ ಪಾಲಕ್ಕಲ್ (Diya Palakkal). ಇಂದು ದಿಯಾ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅಷ್ಟಕ್ಕೂ, ದಿಯಾ ಪಾಲಕ್ಕರ್ ನಿಜ ಜೀವನದಲ್ಲಿ ಸುರಸುಂದರಿ. ಸೀರಿಯಲ್, ಸಿನಿಮಾಗಳಲ್ಲಿ ನಟರನ್ನು ಸುಂದರವಾಗಿ ಕಾಣಿಸುವ ಸಲುವಾಗಿ ಕೆ.ಜಿಗಟ್ಟಲೆ ಮೇಕಪ್ ಮಾಡುವುದು ಇದೆ. ಆದರೆ ಈ ಸೀರಿಯಲ್ನಲ್ಲಿ, ದೀಪಾಳನ್ನು ಈ ಪರಿಯಲ್ಲಿ ಕಾಣುವಂತೆ ಮಾಡಲು ಕೂಡ ಮೇಕಪ್ ಮಾಡಲಾಗಿತ್ತು
ಬಾಲ ನಟಿಯಾಗಿ ಎಂಟ್ರಿ
ಅಷ್ಟಕ್ಕೂ ದಿಯಾ, ಕನ್ನಡದ ಹುಡುಗಿ. ಆದರೂ ತಮಿಳು ಸೀರಿಯಲ್ನಲ್ಲಿಯೂ ಗುರುತಿಸಿಕೊಂಡಿದ್ದಾರೆ. ಮೊದಲಿಗೆ ಬಾಲನಟಿಯಾಗಿ ಕನ್ನಡದಲ್ಲಿ ಗುರುತಿಸಿಕೊಂಡವರು. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕಿನ್ನರಿ (Kinnari) ಸೀರಿಯಲ್ನಲ್ಲಿ ಪುಟಾಣಿ ಐಶ್ವರ್ಯಾ ಪಾತ್ರದಲ್ಲಿ ಈಕೆ ನಟಿಸಿದ್ದರು. ಬಳಿಕ ಲಕ್ಷ್ಮೀ ಸ್ಟೋರ್ಸ್ ಎನ್ನುವ ಜನಪ್ರಿಯ ತಮಿಳು ಧಾರಾವಾಹಿಯಲ್ಲಿ ನಟಿ ಖುಷ್ಬು ಜೊತೆಗೂ ನಟಿಸಿದ್ದರು ಇವರು.
ಮೊದಲ ಬಾರಿ ನಾಯಕಿ
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಬ್ರಹ್ಮಗಂಟುವಿನಲ್ಲಿ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಗೆಟಪ್ಪೇ ಬದಲಾಗಿತ್ತು. ಅಂದಹಾಗೆ ದಿಯಾ ಅವರು ಸಿನಿಮಾದಲ್ಲಿಯೂ ಗುರುತಿಸಿಕೊಂಡಿದ್ದಾರೆ. 2018ರಲ್ಲಿ ಬಿಡುಗಡೆಯಾದ ಅಮ್ಮಚ್ಚಿಯೆಂಬ ನೆನಪು (Ammacchi emba nenapu) ಸಿನಿಮಾದಲ್ಲಿ ದಿಯಾ ಎನ್ನುವ ಪುಟ್ಟ ಹುಡುಗಿಯ ಪಾತ್ರ ನಿರ್ವಹಿಸಿದ್ದರು. ಈ ಸಿನಿಮಾದಲ್ಲಿ ರಾಜ್ ಬಿಶೆಟ್ಟಿ, ವೈಜಯಂತಿ ಅಡಿಗ ನಟಿಸಿದ್ದರು.
ಅಭಿಮಾನಿಗಳಿಗೆ ಗುಡ್ನ್ಯೂಸ್
ಇದೀಗ ದಿಯಾ ಅವರು ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. sumantvkannadaಕ್ಕೆ ನೀಡಿರುವ ಸಂದರ್ಶನದಲ್ಲಿ, ನಟಿ, ಸದ್ಯ ಫೈನಲ್ ಇಯರ್ ಡಿಗ್ರಿಯಲ್ಲಿ ಇದ್ದೇನೆ. ಶೀಘ್ರವೇ ಸಿನಿಮಾದಲ್ಲಿ ಬರುವ ಬಗ್ಗೆ ಘೋಷಣೆ ಮಾಡುತ್ತೇನೆ ಎನ್ನುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲು ರೆಡಿಯಾಗಿರುವುದಾಗಿ ತಿಳಿಸಿದ್ದಾರೆ
ಹೊಸ ಹೊಸ ಪ್ರಾಜೆಕ್ಟ್
ಕಾಲೇಜಿನ ಎಕ್ಸಾಂ ಮುಗಿದ ಮೇಲೆ ಹೊಸ ಹೊಸ ಪ್ರಾಜೆಕ್ಟ್ಗಳನ್ನು ತೆಗೆದುಕೊಳ್ಳುತ್ತೇನೆ ಸದ್ಯ ಪರೀಕ್ಷೆಯ ಮೇಲೆ ಗಮನ ಇದೆ, ಶೀಘ್ರದಲ್ಲಿಯೇ ನಿಮಗೆಲ್ಲಾ ಹೊಸ ವಿಷಯ ಹೇಳುತ್ತೇನೆ ಎಂದಿದ್ದಾರೆ ನಟಿ. ದಿಯಾ ಅವರನ್ನು ಮತ್ತೊಮ್ಮೆ ಸೀರಿಯಲ್ನಲ್ಲಿ ನೋಡುವ ಆಸೆ ಅವರ ಫ್ಯಾನ್ಸ್ದು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

