ಮಗಳಿಗಾಗಿ ಸೀರಿಯಲ್ ನಟಿಯಾಗಿರೋ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ: ಅತ್ತೆಗೆ ಬೆದರಿಕೆ
ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದನಿರ್ಮಾಪಕ ಹರ್ಷವರ್ಧನ್, ತನ್ನ ಮಗಳಿಗಾಗಿ ಕಿರುತೆರೆ ನಟಿ ಪತ್ನಿ ಚೈತ್ರಾಳನ್ನು ಅಪಹರಿಸಿದ್ದಾರೆ. ಸೀರಿಯಲ್ ಶೂಟಿಂಗ್ ನೆಪದಲ್ಲಿ ಮೈಸೂರಿಗೆ ಕರೆಸಿ, ಪತ್ನಿಯನ್ನು ಬಿಡುಗಡೆ ಮಾಡಲು ಮಗಳನ್ನು ತನಗೆ ನೀಡುವಂತೆ ಬೇಡಿಕೆಯಿಟ್ಟ ಘಟನೆ ನಡೆದಿದೆ.

ಪತ್ನಿಯ ಅಪಹರಣ
ನಿರ್ಮಾಪಕರೊಬ್ಬರು ಮಗಳಿಗಾಗಿ ಪತ್ನಿಯನ್ನು ಅಪಹರಣ ಮಾಡಿರುವ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹರ್ಷರ್ಧನ್ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದು, 2023ರಲ್ಲಿ ಕಿರುತೆರೆ ನಟಿ ಚೈತ್ರಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು.
ದಂಪತಿಗೆ ಒಂದು ವರ್ಷದ ಮಗುವಿದೆ. ಇದೀಗ ಮಗಳಿಗಾಗಿ ಪತ್ನಿಯನ್ನು ಅಪಹರಣ ಮಾಡಿರುವ ಆರೋಪ ಹರ್ಷವರ್ಧನ್ ವಿರುದ್ಧ ಕೇಳಿ ಬಂದಿದೆ.
ವರ್ಧನ್ ಸಿನಿಮಾಸ್ ಕಂಪನಿ
ವರ್ಧನ್ ಸಿನಿಮಾಸ್ ಕಂಪನಿಯ ನಿರ್ಮಾಪಕರಾಗಿರುವ ಹರ್ಷವರ್ಧನ್, ನಿನ್ನಲೇನೋ ಹೇಳಬೇಕು ಎಂಬ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹರ್ಷವರ್ಧನ್ ಮತ್ತು ಚೈತ್ರಾ ಜೊತೆಯಾಗಿ ನಟಿಸಿದ್ದಾರೆ. ಪತ್ನಿಯನ್ನ ಕಿಡ್ನಾಪ್ ಮಾಡಿ, ನಿನ್ನ ಮಗಳು ಬೇಕು ಅಂದ್ರೆ ನನ್ನ ಮಗಳನ್ನ ಕೊಡು ಎಂದು ಅತ್ತೆಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.
ಕೌಟುಂಬಿಕ ಕಲಹ
ಮಗುವಾದ ಬಳಿಕ ಕೌಟುಂಬಿಕ ಕಲಹ ಹಿನ್ನೆಲೆ ಹರ್ಷವರ್ಧನ್ ಮತ್ತು ಚೈತ್ರಾ ಪ್ರತ್ಯೇಕವಾಗಿ ವಾಸ ಮಾಡಲು ಆರಂಭಿಸಿದ್ದರು. ಮುದ್ದಿನ ಮಗಳನ್ನು ಬಿಟ್ಟಿರಲು ಆಗದೇ ಪತ್ನಿಯನ್ನು ಅಪಹರಿಸಿದ್ದಾರೆ. ಪ್ಲಾನ್ ಮಾಡಿ ಮೈಸೂರಿನ ರಸ್ತೆ ಬಳಿ ಪತ್ನಿಯನ್ನು ಅಪಹರಿಸಿ ಅತ್ತೆಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದಾರೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು
ಸ್ನೇಹಿತ ಕೌಶಿಕ್ ಎಂಬಾತನ ಮೂಲಕ ಪತ್ನಿ ಚೈತ್ರಾಗೆ ಕರೆ ಮಾಡಿಸಿ, ಸೀರಿಯಲ್ ಚಿತ್ರೀಕರಣಕ್ಕಾಗಿ ಮೈಸೂರಿಗೆ ಬರುವಂತೆ ಹೇಳಿಸಲಾಗಿದೆ. ಅಡ್ವಾನ್ಸ್ ಅಂತ 20 ಸಾವಿರ ರೂಪಾಯಿ ನೀಡಲಾಗಿತ್ತು. ಮೈಸೂರಿಗೆ ಬಂದ ಸಂದರ್ಭದಲ್ಲಿ ಪತ್ನಿಯನ್ನು ಅಪಹರಿಸಿ ಮಗಳನ್ನು ಕಳುಹಿಸುವಂತೆ ಡಿಮ್ಯಾಂಡ್ ಮಾಡಲಾಗಿದೆ. ಅಪಹರಣದ ವಿಷಯ ತಿಳಿಯುತ್ತಿದ್ದಂತೆ ಚೈತ್ರಾ ಸೋದರಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರಿಂದ ವಿಚಾರಣೆ
ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಠಾಣೆಯ ಪೊಲೀಸರು ಸಂಪರ್ಕ ಮಾಡ್ತಿದ್ದಂತೆ ಪತ್ನಿಯನ್ನು ಬಿಟ್ಟು ಕಳುಹಿಸಿದ್ದಾರೆ. ಇದೀಗ ಎಲ್ಲರನ್ನು ಠಾಣೆಗೆ ಕರೆಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

