MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Asha Bhosle: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ, ಗಂಭೀರ? ಐಸಿಯುನಲ್ಲಿ ಚಿಕಿತ್ಸೆ

Asha Bhosle: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ, ಗಂಭೀರ? ಐಸಿಯುನಲ್ಲಿ ಚಿಕಿತ್ಸೆ

ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಹೃದಯಾಘಾತದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಮತ್ತು ಸೋಂಕಿನಿಂದ ಬಳಲುತ್ತಿರುವುದಾಗಿ ಅವರ ಮೊಮ್ಮಗಳು ಖಚಿತಪಡಿಸಿದ್ದು, ವದಂತಿಗಳಿಗೆ ಕಿವಿಗೊಡದಂತೆ ಕುಟುಂಬ ಮನವಿ ಮಾಡಿದೆ.

1 Min read
Author : Mahmad Rafik
Published : Apr 11 2026, 10:05 PM IST
Share this Photo Gallery
  • FB
  • TW
  • Linkdin
  • Whatsapp
15
ಹಿರಿಯ ಗಾಯಕಿ ಆಶಾ ಭೋಸ್ಲೆ
Image Credit : instagram

ಹಿರಿಯ ಗಾಯಕಿ ಆಶಾ ಭೋಸ್ಲೆ

ಹಿರಿಯ ಗಾಯಕಿ ಆಶಾ ಭೋಸ್ಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಆಶಾ ಬೋಸ್ಲೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಸದ್ಯ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

25
ಆಸ್ಪತ್ರೆಗೆ ದಾಖಲು
Image Credit : Google

ಆಸ್ಪತ್ರೆಗೆ ದಾಖಲು

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮ್ದಾನಿ ಪ್ರತಿಕ್ರಿಯಿಸಿದ್ದು, ಏಪ್ರಿಲ್ 11 ರ ಶನಿವಾರ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಯಿತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ಸೇವೆಗಳ ಘಟಕಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

Related Articles

Related image1
ವಿಶ್ವ ಕಪ್​ ಫೈನಲ್​ನಲ್ಲಿ ಹೃದಯ ಗೆದ್ದ ಶಾರುಖ್​ ಖಾನ್​! ಆಶಾ ಭೋಸ್ಲೆ ಜತೆಗಿನ ವಿಡಿಯೋ ವೈರಲ್
Related image2
ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಆಶಾ ಭೋಸ್ಲೆ ಮೊಮ್ಮಗಳು; ಎಂಥಾ ಸುಂದರಿ ಈ ಝನಾಯ್ ಭೋಸ್ಲೆ!
35
ಅಜ್ಜಿಗೆ ಎದೆನೋವು ಎಂದ ಮೊಮ್ಮಗಳು
Image Credit : Getty

ಅಜ್ಜಿಗೆ ಎದೆನೋವು ಎಂದ ಮೊಮ್ಮಗಳು

ಆಶಾ ಭೋಸ್ಲೆ ಅವರ ಮೊಮ್ಮಗಳು ಜನೈ ಬೋಸ್ಲೆ, ನನ್ನ ಅಜ್ಜಿ ಎದೆನೋವು ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ. ಅಜ್ಜಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಗ ಗುಣಮುಖರಾಗುತ್ತಾರೆ ಎಂದು ಭಾವಿಸಿದ್ದು, ಶೀಘ್ರದಲ್ಲಿಯೇ ಆರೋಗ್ಯದ ಕುರಿತು ಮಾಹಿತಿ ನೀಡುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

45
92 ವರ್ಷದ ಗಾಯಕಿ
Image Credit : our own

92 ವರ್ಷದ ಗಾಯಕಿ

ಇದೇ ಪೋಸ್ಟ್‌ನಲ್ಲಿ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಆಶಾ ಭೋಸ್ಲೆ ಕುಟುಂಬ ಮನವಿ ಮಾಡಿಕೊಂಡಿದೆ. 92 ವರ್ಷದ ಗಾಯಕಿ ಸುಮಾರು 70 ವರ್ಷಗಳಿಂದ ಸಿನಿ ಇಂಡಸ್ಟ್ರಿಯಲ್ಲಿ ಸಕ್ರಿಯರಾಗಿದ್ದಾರೆ. ಹಿಂದಿ ಮಾತ್ರವಲ್ಲದೆ 20 ಭಾರತೀಯ ಮತ್ತು ಹಲವಾರು ವಿದೇಶಿ ಭಾಷೆಗಳಲ್ಲಿ ಆಶಾ ಭೋಸ್ಲೆ ಹಾಡಿದ್ದಾರೆ.

55
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
Image Credit : Asianet News

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ತಮ್ಮ ವೃತ್ತಿಜೀವನದಲ್ಲಿ ಅನೇಕ ಸಾಧನೆಗಳನ್ನು ಮಾಡಿರುವ ಆಶಾ ಭೋಸ್ಲೆ ಅವರಿಗೆ 2000 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 2008 ರಲ್ಲಿ ಭಾರತ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೇ ರೀತಿ ಹಲವು ಪ್ರಶಸ್ತಿಗಳನ್ನು ಆಶಾ ಬೋಸ್ಲೆ ಪಡೆದುಕೊಂಡಿದ್ದಾರೆ.

Legendary singer and Padma Vibhushan awardee Asha Bhosle has been admitted to Breach Candy Hospital: Breach Candy Hospital Trust

(File Pic) pic.twitter.com/xpgKfvLzhG

— ANI (@ANI) April 11, 2026

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಾಲಿವುಡ್
ಮನರಂಜನಾ ಸುದ್ದಿ

Latest Videos
Recommended Stories
Recommended image1
ಪರೀಕ್ಷೆ ಟೆನ್ಶನ್‌ಗೆ ಗುಡ್‌ಬೈ ಹೇಳಿ! ಇಲ್ಲಿದೆ ಮಕ್ಕಳಿಗೆ ನಟಿ ಅನನ್ಯಾ ಪಾಂಡೆ ಕೊಟ್ಟ ಸಿಂಪಲ್ ಟಿಪ್ಸ್
Recommended image2
Tripti Dimri: ವಿಕ್ಟೋರಿಯಾ'ಸ್ ಸೀಕ್ರೆಟ್‌ನ ಮೊದಲ ಭಾರತೀಯ ರಾಯಭಾರಿಯಾದ 'ಅನಿಮಲ್' ಬೆಡಗಿ!
Recommended image3
ಅಟ್ಲಿ ಕಾಪಿ ಮಾಡಿದ್ದು ನಿಜಾನಾ? ಅಲ್ಲು ಅರ್ಜುನ್ ಚಿತ್ರದ 'ರಾಕಾ' ಪದದ ಅಸಲಿ ಅರ್ಥವೇನು?
Related Stories
Recommended image1
ವಿಶ್ವ ಕಪ್​ ಫೈನಲ್​ನಲ್ಲಿ ಹೃದಯ ಗೆದ್ದ ಶಾರುಖ್​ ಖಾನ್​! ಆಶಾ ಭೋಸ್ಲೆ ಜತೆಗಿನ ವಿಡಿಯೋ ವೈರಲ್
Recommended image2
ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಆಶಾ ಭೋಸ್ಲೆ ಮೊಮ್ಮಗಳು; ಎಂಥಾ ಸುಂದರಿ ಈ ಝನಾಯ್ ಭೋಸ್ಲೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved