ಮತ್ತೆ ಮದ್ವೆಯಾದ್ರಾ ಗಿಚ್ಚಿ ಗಿಲಿಗಿಲಿ ಜಾಹ್ನವಿ? ಬ್ರೈಡಲ್ ಲುಕ್ ಸಖತ್ ವೈರಲ್!
ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಕಾರ್ತಿಕ್. ಯಾವಾಗ್ಲೂ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಳ್ತಾರೆ. ಹಾಗೆಯೇ ಇತ್ತೀಚಿಗೆ ಅವ್ರು ಮಾಡಿರೋ ಬ್ರೈಡಲ್ ಲುಕ್ ಫೋಟೋ ಶೂಟ್ ಸಖತ್ ವೈರಲ್ ಆಗಿದೆ.
ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಕೆಲಸ ಮಾಡಿ, ಅಲ್ಲಿಂದ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿ ಜನ ಮೆಚ್ಚುಗೆ ಪಡೆದವರು ಜಾಹ್ನವಿ ಕಾರ್ತಿಕ್. ಯಾವಾಗ್ಲೂ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಳ್ತಾರೆ. ಹಾಗೆಯೇ ಇತ್ತೀಚಿಗೆ ಅವ್ರು ಮಾಡಿರೋ ಬ್ರೈಡಲ್ ಲುಕ್ ಫೋಟೋ ಶೂಟ್ ಸಖತ್ ವೈರಲ್ ಆಗಿದೆ.
ಕೆಂಪು ಸೀರೆ, ಜ್ಯುವೆಲ್ಲರಿ ಸೆಟ್ ಧರಿಸಿರುವ ಜಾಹ್ನವಿ ಪೋಟೋಗಳಿಗೆ ಮುದ್ದಾಗಿ ಫೋಸ್ ನೀಡಿದ್ದಾರೆ. ಇವರ ಫೋಟೋಗಳಿಗೆ ಫ್ಯಾನ್ಸ್ ಸೋ ಅಡೋರೆಬಲ್ ಎಂದು ಕಾಮೆಂಟ್ ಮಾಡಿದ್ದಾರೆ.
ಕಲರ್ ಕನ್ನಡ ವಾಹಿನಿಯಲ್ಲಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ನಂತರ ಜಾನ್ವಿ ಗಿಚ್ಚಿ ಗಿಲಿಗಿಲಿ ಸೀಸನ್ 2ರಲ್ಲಿ ಸ್ಪರ್ಧಿಸಿದರು. ಆರಂಭದಲ್ಲಿ ಸಣ್ಣ ಪುಟ್ಟ ಪಾತ್ರ ಮಾಡಿಕೊಂಡು ಸುಮ್ಮನಿದ್ದ ಜಾನ್ವಿ ಕೊನೆಯಲ್ಲಿ ಎರಡನೇ ಸ್ಥಾನ ಪಡೆದು ಟ್ರೋಫಿ ಹಿಡಿದಿರುವುದು ದೊಡ್ಡ ವಿಚಾರವೇ.
ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾ 'ಅಧಿಪತ್ರ' ಚಿತ್ರದಲ್ಲಿ ಜಾಹ್ನವಿ ನಾಯಕಿ ಪಾತ್ರ ಮಾಡಲಿದ್ದಾರೆ.
ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ರೂಪೇಶ್ ಶೆಟ್ಟಿಗೆ ಜೋಡಿಯಾಗಿದ್ದು, ಇನ್ನೇನು ಶೀಘ್ರದಲ್ಲಿ ಶೂಟಿಂಗ್ನಲ್ಲಿಯೂ ಭಾಗವಹಿಸಲಿದ್ದಾರೆ.
ಕೆ.ಆರ್ ಸಿನಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಈ ಚಿತ್ರವನ್ನು ಮಂಗಳೂರು, ಉಡುಪಿಯಲ್ಲಿ ಚಿತ್ರೀಕರಿಸಲು ನಿರ್ಧರಿಸಲಾಗಿದೆ.
ಜಾಹ್ನವಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದು, ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.
ಮಾರ್ಡನ್ ಹಾಗೂ ಟ್ರೆಡಿಷನಲ್ ಲುಕ್ ಎರಡರಲ್ಲಿಯೂ ಜಾಹ್ನವಿ ಕಾರ್ತಿಕ್ ಮುದ್ದಾಗಿ ಕಾಣುತ್ತಾರೆ. ಹೀಗಾಗಿಯೇ ಇವರಿಗೆ ಸಿಕ್ಕಾಪಟ್ಟೆ ಅಭಿಮಾನಿಗಳು, ಫಾಲೋವರ್ಸ್ ಇದ್ದಾರೆ.