MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • Bengaluru Karaga 2025 ವಿಶ್ವವಿಖ್ಯಾತ ಐತಿಹಾಸಿಕ ಕರಗ ಹಬ್ಬದ ನೋಟ

Bengaluru Karaga 2025 ವಿಶ್ವವಿಖ್ಯಾತ ಐತಿಹಾಸಿಕ ಕರಗ ಹಬ್ಬದ ನೋಟ

ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಶಕ್ತ್ಯೋತ್ಸವ ಮತ್ತು ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಅರ್ಚಕ ಜ್ಞಾನೇಂದ್ರ 15ನೇ ಬಾರಿ ಕರಗ ಹೊತ್ತರು. ತಮಿಳುನಾಡು, ಆಂಧ್ರಪ್ರದೇಶದಿಂದ ಭಕ್ತರು ಆಗಮಿಸಿದ್ದರು.

2 Min read
Gowthami K
Published : Apr 13 2025, 05:35 PM IST| Updated : Apr 13 2025, 05:46 PM IST
Share this Photo Gallery
  • FB
  • TW
  • Linkdin
  • Whatsapp
19

ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಶಕ್ತ್ಯೋತ್ಸವ (ಹೂವಿನ ಕರಗ) ಹಾಗೂ ಶ್ರೀ ಧರ್ಮರಾಯಸ್ವಾಮಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. 15ನೇ ಬಾರಿ  ಅರ್ಚಕ ಎ.ಜ್ಞಾನೇಂದ್ರ ಕರಗ ಹೊತ್ತರು. ಕಗರಕ್ಕೆ ವೀರಕುಮಾರರಿಂದ ಭದ್ರತೆ, ತಮಿಳುನಾಡು, ಆಂಧ್ರಪ್ರದೇಶದಿಂದ ಜನ ಆಗಮನ ಆಗಮಿಸಿದ್ದರು.

ಲಕ್ಷಾಂತರ ಭಕ್ತರ ಮಧ್ಯೆ ಅದ್ಧೂರಿ ಕರಗ: ಗೋವಿಂದ ನಾಮಸ್ಮರಣೆಯಲ್ಲಿ ಉತ್ಸವ ಕಣ್ತುಂಬಿಕೊಂಡ ಭಕ್ತಸಾಗರ!

29

ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ಮಲ್ಲಿಗೆ ಕಂಪು ಸೂಸುತ್ತ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಡುವ ಹೂವಿನ ಕರಗಕ್ಕೆ ಉತ್ಸವ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆಯಿಂದಲೇ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯಿತು.

ಲಕ್ಷಾಂತರ ಭಕ್ತರ ಮಧ್ಯೆ ಅದ್ಧೂರಿ ಕರಗ: ಗೋವಿಂದ ನಾಮಸ್ಮರಣೆಯಲ್ಲಿ ಉತ್ಸವ ಕಣ್ತುಂಬಿಕೊಂಡ ಭಕ್ತಸಾಗರ!

39

ಕರಗ ಶಕ್ತ್ಯೋತ್ಸವ ಎಂದರೆ ಶಕ್ತಿ ದೇವತೆಯಾದ ದ್ರೌಪದಿ ಕರಗ, ಕುಂಭದಲ್ಲಿ ದುರ್ಗೆಯನ್ನು (ದ್ರೌಪದಿ) ಆವಾಹಿಸಿ, ಪೂಜಿಸಿ, ಹೂವಿನಿಂದ ಅಲಂಕಾರಗೊಂಡ ಕರಗಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಶ್ರೀ ಧರ್ಮರಾಯ ದೇವಸ್ಥಾನದ ಗಣಾಚಾರಿ, ಗಂಟೆ ಪೂಜಾರಿಯ ಉಸ್ತುವಾರಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿ ಅರ್ಚಕ ಜ್ಞಾನೇಂದ್ರ ಕತ್ತಿ ಹಿಡಿದ ವೀರಕುಮಾರರ ನಡುವೆ ತಲೆಯ ಮೇಲೆ ಕರಗ ಹೊತ್ತು ಸಾಗಿದರು.
 

49

ಹೀಗೆ ಮಧ್ಯರಾತ್ರಿ ದೇವಾಲಯದಿಂದ ಸಾಗಿದ ಕರಗ ಉತ್ಸವ ಹಲವು ಪೇಟೆ ಬೀದಿಗಳಲ್ಲಿ ಸಂಚರಿಸಿ. ದೇವಾಲಯಗಳು ಹಾಗೂ ಕುಲಪುರೋಹಿತರ ಮತ್ತು ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ ಸೂಯೋರ್ದಯದ ವೇಳೆಗೆ ದೇವಾಲಯ ತಲುಪಿತು.

ಬೆಂಗಳೂರು ಕರಗದ ಇತಿಹಾಸ ನಿಮಗೆ ಗೊತ್ತಾ? । 

59

ಸಂಪ್ರದಾಯದಂತೆ ಧರ್ಮರಾಯಸ್ವಾಮಿ ದೇವಾಲಯದಿಂದ ಮಧ್ಯರಾತ್ರಿ ಬಿಜಯ ಮಾಡಿಸಿ ಹೊರಡುವ ಕರಗ ಉತ್ಸವ ಹಲಸೂರು ಪೇಟೆಯ ಆಂಜನೇಯಸ್ವಾಮಿ, ಶ್ರೀ ರಾಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ, ಸಿದ್ದಣ್ಣ ಗಲ್ಲಿ, ಕಬ್ಬನ್​ಪೇಟೆ, ಗಾಣಿಗರಪೇಟೆ, ದೊಡ್ಡಪೇಟೆಯಿಂದ ಕೆ.ಆರ್​. ಮಾರುಕಟ್ಟೆ ತಲುಪಿ ಈ ಮಾರ್ಗಗಳಲ್ಲಿನ ಎಲ್ಲಾ ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ ನಂತರ ಮಸ್ತಾನ್​ ಸಾಹೇಬರ ದರ್ಗಾಕ್ಕೆ ಭೇಟಿ ನೀಡಿ, ಅಲ್ಲಿಂದ ಬಳೇಪೇಟೆ ಹಳೇಗರಡಿ, ಅಣ್ಣಮ್ಮನ ದೇವಾಲಯಕ್ಕೆ ತೆರಳುತ್ತದೆ.

69

ಬಳಿಕ ಕಿಲಾರಿ ರಸ್ತೆ, ಯಲಹಂಕ ಗೇಟ್​, ಅವೆನ್ಯೂ ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆಗಳಲ್ಲಿರುವ ಕುಲಬಾಂಧವರ ಮನೆಗಳಲ್ಲಿ ಮತ್ತು ಭಕ್ತರಿಂದ ಪೂಜೆ ಮಾಡಿಸಿಕೊಂಡು ಹಾಲುಬೀದಿ, ಕಬ್ಬನ್​ಪೇಟೆ, ಸುಣ್ಣಕಲ್​ ಪೇಟೆ ಮಾರ್ಗವಾಗಿ ಕುಲಪುರೋಹಿತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ, ನರಸಿಂಹ ಜೋಯಿಸ್​ಗಲ್ಲಿ ಮೂರ್ಗವಾಗಿ ಸೂಯೋರ್ದಯದ ವೇಳೆಗೆ ದೇವಾಲಯವನ್ನು ತಲುಪುತ್ತದೆ.

79

ಕರಗ ಕರ್ನಾಟಕದ ಪ್ರಸಿದ್ಧ ಜಾನಪದ ಆಚರಣೆಯಾಗಿದೆ. ಈ ಸಂದರ್ಭದಲ್ಲಿ ಆದಿಶಕ್ತಿ ಶ್ರೀ ದ್ರೌಪದಿಯನ್ನು, ಮುಖ್ಯವಾಗಿ ಚಾಲುಕ್ಯ ರಾಜವಂಶದ ಸಮುದಾಯಕ್ಕೆ ಸೇರಿದ ವಹ್ನಿಕುಲ ಕ್ಷತ್ರಿಯ  ( ತಿಗಳ ಕ್ಷತ್ರಿಯ) ಜನಾಂಗದವರು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ. ಶತಮಾನಗಳ ಇತಿಹಾಸವನ್ನೇ ಹೊಂದಿರುವ ವಿಶ್ವಪ್ರಸಿದ್ಧ ಬೆಂಗಳೂರು ಕರಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. 

89

ಚೈತ್ರ ಹುಣ್ಣಿಮೆಯಂದು ಕರಗ ಉತ್ಸವವನ್ನು ಅದ್ದೂರಿಯಾಗಿ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ತಿಗಳರ ಪೇಟೆಯಲ್ಲಿ ದ್ರೌಪದಿ ಹಾಗೂ ಧರ್ಮರಾಯ ಸ್ವಾಮಿ ದೇಗುಲವಿದೆ. ಇಲ್ಲಿ ಎಲ್ಲಾ ರೀತಿಯ ಆಚರಣೆಗಳು ನಡೆಯುತ್ತದೆ. ತಲೆಯ ಮೇಲೆ ಹೊತ್ತಿರುವ ಕರಗ ತಪ್ಪಿಯೂ ಕೂಡ ನೆಲಕ್ಕೆ ಬೀಳಬಾರದು. ಬೆಂಗಳೂರು ಕರಗಕ್ಕೆ 8 ಶತಮಾನಗಳ ಇತಿಹಾಸವಿದೆ. ಅಂದರೆ 800 ವರ್ಷಗಳು.
 

99
bengaluru karaga

bengaluru karaga

ಚೈತ್ರಮಾಸದ ಶುದ್ಧ ಪೌರ್ಣಿಮೆ ರಾತ್ರಿ ಬೆಳದಿಂಗಳ ಬೆಳಕಿನಲ್ಲಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕಗರ ಉತ್ಸವವನ್ನು ಶನಿವಾರ ಮಧ್ಯರಾತ್ರಿ ಗೋವಿಂದಾ... ಗೋವಿಂದಾ... ನಾಮಸ್ಮರಣೆಯೊಂದಿಗೆ ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಶನಿವಾರ ಮಧ್ಯರಾತ್ರಿ ನಗರ್ತರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಅದರ ಹಿಂದೆಯೇ ಧರ್ಮರಾಯಸ್ವಾಮಿ ಗರ್ಭ ಗುಡಿಯಿಂದ ದ್ರೌಪದಿ ದೇವಿ ಮಲ್ಲಿಗೆ ಹೂವಿನ ಕರಗ ಸಾಗಿತು. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿಯಂತೆ ತಿಗಳ ಸಮುದಾಯದ ಅರ್ಚಕ ಎ.ಜ್ಞಾನೇಂದ್ರ ಅವರು ಕರಗವನ್ನು ಹೊತ್ತು ಹೆಜ್ಜೆ ಹಾಕಿದರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ಕರ್ನಾಟಕ ಸುದ್ದಿ
ಹಬ್ಬ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved