ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂಪೂರ್ಣ
ದೇಶದೆಲ್ಲೆಡೆ ಸಂಭ್ರಮ, ಇಡೀ ವಿಶ್ವವೇ ಕಾಯುತ್ತಿದ್ದ ಆಯೋಧ್ಯೆ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ನೆರವೇರಿದೆ.
ಅಯೋಧ್ಯೆ ಪ್ರಧಾನ ಅರ್ಚಕರ ಮಾರ್ಗದರ್ಶನದಂತೆ ಪ್ರಧಾನಿ ಮೋದಿ ತಮ್ಮ ಅಮೃತ ಹಸ್ತದಿಂದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ.
ಪ್ರಾಣಪ್ರತಿಷ್ಠೆಯ ಮುಖ್ಯ ಯಜಮಾನನಾಗಿ ವಿಧಿವಿಧಾನಗಳನ್ನು ನೇರವೇರಿಸಿದ್ದರೆ. ರಾಮ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಮಾರ್ಗದರ್ಶನದೊಂದಿಗೆ ಪ್ರಾಣಪ್ರತಿಷ್ಠೆ ನೆರವೇರಿದೆ.
ಮಹಾಮಸ್ತಕಾಭಿಷೇಕದ ವೇಳೆ ದೇಗುಲದ ಗರ್ಭಗುಡಿಯಲ್ಲಿ ಐದು ಮಂದಿ ಮಾತ್ರ ಹಾಜರಿದ್ದರು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ , ಯುಪಿ ಗವರ್ನರ್ ಆನಂದಿ ಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್ , ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ರಾಮ ಮಂದಿರದ ಗರ್ಭಗುಡಿಯಲ್ಲಿ 51 ಇಂಚಿನ ಗಾಢ ಬಣ್ಣದ ರಾಮಲಾಲಾ ಪ್ರತಿಮೆಯನ್ನು ಸ್ಥಾಪಿಸಲಾಗಿದೆ . ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವಾದ ಇದುತೂಕ 200 ಕೆ.ಜಿ. ಇದೆ
ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀ ರಾಮನ ಪ್ರತಿಮೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಯಾಗಿದೆ.
ಜನವರಿ 23 ರಿಂದ ಭಕ್ತರಿಗೆ ರಾಮಲಲ್ಲಾನ ದರ್ಶನ ಸಿಗಲಿದೆ. ಮಂಗಳವಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯೋಧ್ಯೆಗೆ ಆಗಮಿಸಲಿದ್ದಾರೆ.