Health Tips: ಡಾಕ್ಟರ್ ಹತ್ತಿರ ಹೋಗೋದು ಬೇಡ ಅಂದ್ರೆ, ಪ್ರತಿದಿನ ಈ 5 ತರಕಾರಿ ಮಿಸ್ ಮಾಡದೆ ತಿನ್ನಿ!
ತರಕಾರಿಗಳಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರತಿಯೊಂದಕ್ಕೂ ವಿಭಿನ್ನ ಗುಣಗಳಿವೆ. ಈ ದೈನಂದಿನ ತರಕಾರಿಗಳು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತವೆ.

ಹೂಕೋಸು
ಹೂಕೋಸು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದನ್ನು ತಿನ್ನುವುದರಿಂದ ಫ್ಯಾಟಿ ಲಿವರ್ ಸಮಸ್ಯೆಯನ್ನು ನಿವಾರಿಸಬಹುದು.
ಪಾಲಕ್ ಸೊಪ್ಪು
ಪಾಲಕ್ ಸೊಪ್ಪಿನಲ್ಲಿ ಕಬ್ಬಿಣ ಮತ್ತು ಫೋಲೇಟ್ ಸಮೃದ್ಧವಾಗಿದೆ. ಕಬ್ಬಿಣದಂಶ ಕಡಿಮೆ ಇರುವವರು ಪ್ರತಿದಿನ ಪಾಲಕ್ ಸೇವಿಸುವುದು ಒಳ್ಳೆಯದು.
ಬೀಟ್ರೂಟ್
ಬೀಟ್ರೂಟ್ ನೈಸರ್ಗಿಕ ನೈಟ್ರೇಟ್ ಹೊಂದಿದೆ. ಇದು ರಕ್ತನಾಳಗಳನ್ನು ಬೆಂಬಲಿಸುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ. ರಕ್ತದೊತ್ತಡ ಕಡಿಮೆ ಮಾಡಲು ಬೀಟ್ರೂಟ್ ಒಳ್ಳೆಯದು.
ಕ್ಯಾಪ್ಸಿಕಂ
ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯವಾಗುತ್ತದೆ.
ಹಾಗಲಕಾಯಿ
ಹಾಗಲಕಾಯಿಯಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

