- Home
- Life
- Food
- Garlic Water: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ನೀರು ಕುಡಿದರೆ ಏನಾಗುತ್ತೆ? ಈ ಸಮಸ್ಯೆಗಳಿರೋರು ಕುಡಿಯಿರಿ!!
Garlic Water: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ನೀರು ಕುಡಿದರೆ ಏನಾಗುತ್ತೆ? ಈ ಸಮಸ್ಯೆಗಳಿರೋರು ಕುಡಿಯಿರಿ!!
ಬೆಳ್ಳುಳ್ಳಿಯಲ್ಲಿ ವಿಟಮಿನ್ ಸಿ, ಕೆ, ಫೈಬರ್, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಂ, ಫಾಸ್ಫರಸ್, ಫೋಲೇಟ್, ಸೆಲೆನಿಯಮ್ ಮತ್ತು ತಾಮ್ರ ಸೇರಿದಂತೆ ಹಲವಾರು ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ.
18

Image Credit : stockPhoto
ಬೆಳ್ಳುಳ್ಳಿ ನೀರು ಕುಡಿಯಿರಿ; ಪ್ರಯೋಜನಗಳನ್ನು ತಿಳಿಯಿರಿ
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ನೀರನ್ನು ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.
28
Image Credit : Getty
ರೋಗನಿರೋಧಕ ಶಕ್ತಿ ಹೆಚ್ಚಳ
ಬೆಳ್ಳುಳ್ಳಿಯಲ್ಲಿರುವ 'ಅಲಿಸಿನ್' ಎಂಬ ಅಂಶವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ವೈರಸ್, ಬ್ಯಾಕ್ಟೀರಿಯಾ ಮತ್ತು ಫಂಗಸ್‌ನಂತಹ ಸೋಂಕುಗಳ ವಿರುದ್ಧ ಹೋರಾಡಲು ದೇಹಕ್ಕೆ ಶಕ್ತಿ ನೀಡುತ್ತದೆ.
38
Image Credit : Getty
ಹೃದಯದ ಆರೋಗ್ಯಕ್ಕೆ ಉತ್ತಮ
ಬೆಳ್ಳುಳ್ಳಿಯು ರಕ್ತದೊತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ರಕ್ತನಾಳಗಳನ್ನು ಹಿಗ್ಗಿಸಿ, ರಕ್ತ ಸಂಚಾರವನ್ನು ಸುಧಾರಿಸುತ್ತದೆ. ಜೊತೆಗೆ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ, ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ.
48
Image Credit : Getty
ಜೀರ್ಣಕ್ರಿಯೆ ಸುಧಾರಣೆ
ಬೆಳ್ಳುಳ್ಳಿ ನೀರು ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಅಜೀರ್ಣ, ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಗೆ ಇದು ಉತ್ತಮ ಪರಿಹಾರವಾಗಿದೆ.
58
Image Credit : Getty
ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ. ಆದ್ದರಿಂದ, ಬೆಳ್ಳುಳ್ಳಿ ನೀರನ್ನು ಕುಡಿಯುವುದು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಮತ್ತು ಮೂಳೆಗಳ ಆರೋಗ್ಯವನ್ನು ಕಾಪಾಡಲು ತುಂಬಾ ಒಳ್ಳೆಯದು.
68
Image Credit : Getty
ಶ್ವಾಸಕೋಶದ ಆರೋಗ್ಯ
ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಗೂ ಬೆಳ್ಳುಳ್ಳಿ ಪರಿಹಾರ ನೀಡುತ್ತದೆ. ಇದರಲ್ಲಿರುವ ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳು ಇದಕ್ಕೆ ಸಹಾಯ ಮಾಡುತ್ತವೆ.
78
Image Credit : Getty
ತೂಕ ಇಳಿಸಲು ಸಹಕಾರಿ
ದೇಹದ ತೂಕವನ್ನು ನಿಯಂತ್ರಿಸಲು ಬೆಳ್ಳುಳ್ಳಿ ನೀರು ಸಹಾಯ ಮಾಡುತ್ತದೆ. ಇದು ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ, ಕೊಬ್ಬನ್ನು ಕರಗಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ.
88
Image Credit : @freepik
ಬೆಳ್ಳುಳ್ಳಿ ನೀರು ತಯಾರಿಸುವುದು ಹೇಗೆ?
ಪ್ರತಿದಿನ ಬೆಳಿಗ್ಗೆ ಎರಡು ಎಸಳು ಬೆಳ್ಳುಳ್ಳಿಯನ್ನು ಜಜ್ಜಿ, ಒಂದು ಗ್ಲಾಸ್ ಉಗುರುಬೆಚ್ಚಗಿನ ನೀರಿನಲ್ಲಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos

