MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ದಿನಾಲೂ ಸೋರೆಕಾಯಿ ಸೇವಿಸಿ, ಇವೆ 7 ಅದ್ಭುತ ಆರೋಗ್ಯ ಪ್ರಯೋಜನ

ದಿನಾಲೂ ಸೋರೆಕಾಯಿ ಸೇವಿಸಿ, ಇವೆ 7 ಅದ್ಭುತ ಆರೋಗ್ಯ ಪ್ರಯೋಜನ

ಸೋರೆಕಾಯಿ ಅಥವಾ ಲೌಕಿ ಎಂದೂ ಕರೆಯಲ್ಪಡುವ ಈ ತರಕಾರಿ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುವ ಜನಪ್ರಿಯ ತರಕಾರಿ. ಸೋರೆಕಾಯಿ ತಿನ್ನೋದ್ರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗಲಿವೆ ಅನ್ನೋದನ್ನು ತಿಳಿಯೋಣ.  

2 Min read
Author : Suvarna News
Published : Jul 13 2023, 03:59 PM IST
Share this Photo Gallery
  • FB
  • TW
  • Linkdin
  • Whatsapp
18

ಸತು ಮತ್ತು ವಿಟಮಿನ್ ಸಿ ಯ ಉತ್ತಮ ಮೂಲವಾಗಿರುವ ಸೋರೆಕಾಯಿ (bottle gourd) ಎಷ್ಟೊಂದು ಸ್ಕಿನ್ ಫ್ರೆಂಡ್ಲಿ ಗುಣಗಳನ್ನು ಹೊಂದಿದೆ ಗೊತ್ತಾ?. ಒಟ್ಟಾರೆ ಚರ್ಮದ ಆರೋಗ್ಯಕ್ಕೆ ವಿಟಮಿನ್ ಸಿ ಅತ್ಯಗತ್ಯ. ಇದು ಯುವಿ ವಿಕಿರಣದ ಪರಿಣಾಮಗಳಿಂದ ಚರ್ಮವನ್ನು ರಕ್ಷಿಸುತ್ತೆ. ಅಷ್ಟೇ ಅಲ್ಲ, ಇದು ಚರ್ಮದ ಸುಕ್ಕುಗಟ್ಟುವಿಕೆ ಮೊದಲಾದ ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡಲು ಸಹಾಯ ಮಾಡುತ್ತೆ. 
 

28

ಹೈಡ್ರೇಶನ್ (hydration): 
ಸೋರೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದೆ, ಇದು ಹೈಡ್ರೇಟಿಂಗ್ ತರಕಾರಿಯಾಗಿದೆ. ಹೆಚ್ಚಿನ ನೀರಿನ ಅಂಶವಿರುವ ಆಹಾರವನ್ನು ಸೇವಿಸೋದ್ರಿಂದ ದೇಹದಲ್ಲಿ ಸರಿಯಾದ ನೀರಿನ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
 

38

ತೂಕ ನಷ್ಟಕ್ಕೆ ಸಹಾಯ (weight control) :
ಸೋರೆಕಾಯಿಯಲ್ಲಿ ಕಡಿಮೆ ಕ್ಯಾಲೊರಿ ಮತ್ತು ಹೆಚ್ಚಿನ ಫೈಬರ್ (Fibre) ಇದೆ, ಇದು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಇದು ಹೊಟ್ಟೆ ತುಂಬಿದ ಭಾವನೆ ನೀಡೋದ್ರಿಂದ ಅತಿಯಾಗಿ ತಿನ್ನುವ ಆಸೆಯನ್ನು ಕಡಿಮೆ ಮಾಡುತ್ತದೆ ಮತ್ತು ತೂಕ ನಷ್ಟ ಅಥವಾ ನಿರ್ವಹಣೆ ಮಾಡಲು ನೆರವಾಗುತ್ತೆ.

48

ಜೀರ್ಣಕ್ರಿಯೆ (digestion): 
ಸೋರೆಕಾಯಿಯಲ್ಲಿರುವ ಹೆಚ್ಚಿನ ಫೈಬರ್ ಜೀರ್ಣಕ್ರಿಯೆ ಚೆನ್ನಾಗಿ ಆಗಲು ಸಹಾಯ ಮಾಡುತ್ತೆ. ಜೊತೆಗೆ ಇದು ಮಲಬದ್ಧತೆಯನ್ನು ಸಹ ತಡೆಯುತ್ತೆ, ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಆರೋಗ್ಯಕರ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತೆ. 

58

ಹೃದಯದ ಆರೋಗ್ಯ (healthy heart): 
ಸೋರೆಕಾಯಿಯಲ್ಲಿರುವ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ಅಂಶ ಹೃದಯದ ಆರೋಗ್ಯಕ್ಕೆ ಸಹಾಯ ಮಾಡುತ್ತೆ. ಫೈಬರ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದರೆ ಪೊಟ್ಯಾಸಿಯಮ್ ರಕ್ತದೊತ್ತಡವನ್ನು (Blood Pressure) ನಿಯಂತ್ರಿಸಲು ಸಹಾಯ ಮಾಡುತ್ತದೆ. ವಿಟಮಿನ್ ಸಿ ಉತ್ಕರ್ಷಣ ನಿರೋಧಕವಾಗಿದ್ದು, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತೆ.

68

ಪೌಷ್ಠಿಕಾಂಶ (protein): 
ಸೋರೆಕಾಯಿ ವಿಟಮಿನ್ ಸಿ, ವಿಟಮಿನ್ ಬಿ ಕಾಂಪ್ಲೆಕ್ಸ್ ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಖನಿಜಗಳಂತಹ ಅಗತ್ಯ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳುವುದು, ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುವುದು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಇದು ನೆರವಾಗುತ್ತೆ.

78

ಚರ್ಮ ಮತ್ತು ಕೂದಲಿನ ಆರೋಗ್ಯ )healthy skin and hair): 
ಸೋರೆಕಾಯಿಯಲ್ಲಿ ಆಂಟಿ ಆಕ್ಸಿಡೆಂಟುಗಳು ಮತ್ತು ನೀರು ಇದ್ದು, ಇದು ಆರೋಗ್ಯಕರ ಚರ್ಮ ಮತ್ತು ಕೂದಲಿಗೆ ಉತ್ತಮ. ಆಂಟಿಆಕ್ಸಿಡೆಂಟ್‌ಗಳು ಫ್ರೀ ರ್ಯಾಡಿಕಲ್ಸ್‌ನಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸುವುದರ ಜೊತೆಗೆ, ಆರೋಗ್ಯಕರ ಕೂದಲಿಗೆ ಸಹಾಯ ಮಾಡುತ್ತೆ. 

88

ನಿರ್ವಿಷೀಕರಣ (detox): 
ಸೋರೆಕಾಯಿ ಮೂತ್ರವರ್ಧಕ ಗುಣಗಳನ್ನು ಹೊಂದಿದೆ ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತೆ. ಇದು ಮೂತ್ರ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಿ ದೆಹವನ್ನು ಡಿಟಾಕ್ಸ್ ಮಾಡುತ್ತೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ?
Recommended image2
ಬೆಂಗಳೂರಿನ ತರಕಾರಿಗಳಲ್ಲಿ ಸೀಸ ಪತ್ತೆ: ಈ ವಿಷಕಾರಿ ಅಂಶದ ಪರಿಣಾಮ ಕಡಿಮೆ ಮಾಡಲು ಹೇಗೆ ತೊಳೆಯಬೇಕು?
Recommended image3
ಉಪಯೋಗ ಇಲ್ದೆ ಇದ್ರೂ ಪುರುಷರಿಗೆ ನಿಪ್ಪಲ್ಸ್ ಇರೋದೇಕೆ? ಇದ್ರ ಹಿಂದಿದೆ ರಹಸ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved